ಉಗ್ರ ಚಟುವಟಿಕೆ ಮಟ್ಟ ಹಾಕಲು ತುರ್ತಾಗಿ ಎನ್ ಕೌಂಟರ್ ಆಗಲಿ: ಯತ್ನಾಳ
Team Udayavani, Nov 21, 2022, 5:42 PM IST
ವಿಜಯಪುರ: ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ವಿಳಂಬ ಮಾಡದೇ ಭಯೋತ್ಪಾದನೆ ನಿಗ್ರಹಕ್ಕಾಗಿ ನಾಲ್ಕಾರು ಎನ್ಕೌಂಟರ್ ಮಾಡಲೇಬೇಕಿದೆ. ಆ ಮೂಲಕ ದೇಶ ವಿರೋಧಿ ಉಗ್ರನಡೆ ಅನುಸರಿಸುವವರಿಗೆ ತಕ್ಕಪಾಠ ಕಲಿಸಲೇ ಬೇಕಿದೆ. ಇಲ್ಲವಾದಲ್ಲಿ ಭವಿಷ್ಯದಲ್ಲಿ ದೇಶ ವಿರೋಧಿ ಭಯೋತ್ಪಾದಕರು ರಾಜಾರೋಷವಾಗಿ ಎಲ್ಲೆಂದರಲ್ಲಿ ಓಡಾಡಿಕೊಂಡು ಭಯೋತ್ಪಾದಕ ಕೃತ್ಯಗಳನ್ನು ಮಾಡುತ್ತಲೇ ಹೋಗುತ್ತಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಉಗ್ರರ ಚಟುವಟಿಕೆ ಸಕ್ರಿಯವಾಗಿವೆ ಎಂಬುದನ್ನು ಮನವರಿಕೆ ಮಾಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಸರ್ಕಾರ ಪೊಲೀಸರಿಗೆ ಮುಕ್ತ ಅಧಿಕಾರ ನೀಡಬೇಕು. ಗೃಹ ಮಂತ್ರಿ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಮುಕ್ತ ಅಧಿಕಾರ ನೀಡಬೇಕು. ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಈ ಕುರಿತು ಆಗ್ರಹವನ್ನೂ ಮಾಡಿದ್ದೇನೆ ಎಂದರು.
ಭಯೋತ್ಪಾದನೆ ವಿಷಯದಲ್ಲಿ ಕೇವಲ ಬಾಯಿ ಮಾತಿನಲ್ಲಿ ಅತ್ಯುಗ್ರ ಕ್ರಮ, ಕಠಿಣ ಕ್ರಮ ಎನ್ನುವ ಬದಲು ಕರ್ನಾಟಕದಲ್ಲಿ ಉತ್ತರ ಪ್ರದೇಶದಲ್ಲಿ ಹೇಗೆ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.
ಭಯೋತ್ಪಾದನೆ ಕೃತ್ಯದಲ್ಲಿ ಪಾಲ್ಗೊಂಡ ನಾಲ್ಕಾರು ಎನ್ಕೌಂಟರ್ ಮಾಡಿ ಬುದ್ದಿ ಕಲಿಸದಿದ್ದರೆ ಈ ರೀತಿ ದೇಶ ವಿರೋಧಿ ಭಯೋತ್ಪಾದಕರು ರಾಜಾರೋಷವಾಗಿ ಕೆಲಸ ಮಾಡ್ತಾರೆ ಎಂದು ಗುಡುಗಿದರು.
ಗೃಹಮಂತ್ರಿ ಆರಗ ಜ್ಞಾನೇಂದ್ರ ಒಳ್ಳೆಯವರಿದ್ದಾರೆ, ರಾಜ್ಯದಲ್ಲಿ ಭಯೋತ್ಪಾದನೆ ವಿಷಯದಲ್ಲಿ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ. ಕಾನೂನು ಬಾಹಿರ ಕೃತ್ಯಗಳಿಂದಲೇ ಮೆರೆಯುವವರ ವಿರುದ್ಧ ಸೌಮ್ಯ, ಶಾಂತತೆ ಅಂತೆಲ್ಲ ಒಳ್ಳೆತನದ ಮಾತುಗಳಿಗೆ ಯಾರು ಕಿವಿಗೊಡಲ್ಲ. ಹೀಗಾಗಿ ಗೃಹ ಇಲಾಖೆಗೆ ತ್ವರಿತವಾಗಿ ಕಠಿಣ ನಿಲುವು ತೆಗೆದುಕೊಳ್ಳುವ ಬಲಿಷ್ಠ ಸಚಿವ ಬೇಕು ಎಂದು ಸಲಹೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಮಾಡ್ತೀನಿ, ಇದನ್ನ ಮಾಡ್ತೀನಿ ಅಂತಾರೆ ಆದಷ್ಟು ಬೇಗನೆ ಒಂದು ಒಳ್ಳೆ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿದರು.
ಪಂಚಮಸಾಲಿ ಮೀಸಲಾತಿ ಹೋರಾಟ ನಡೆಸಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತ್ವರಿತ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಮೂಲಕ ಸರ್ಕಾರ ಮೀಸಲಾತಿ ವಿಷಯದಲ್ಲಿ ಮೊದಲ ಹೆಜ್ಜೆ ಇರಿಸಿದೆ. ಎರಡನೇ ಹೆಜ್ಜೆಯಾಗಿ ಹಿಂದುಳಿದ ವರ್ಗಕ್ಕೆ ಅನೇಕ ಸಮುದಾಯ ಸೇರಿಸಬೇಕಿದೆ ಎಂದರು.
ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ನೀಡುವ ಕುರಿತು ವಿಧಾನಸಭೆಯಲ್ಲಿ ಹೋರಾಟ ಮಾಡಿದ್ದೆ, ಇದೀಗ ರಾಜ್ಯ ಸರ್ಕಾರ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡುವ ಆದೇಶ ನೀಡಿದ್ದು, ಜಾತಿ ಪ್ರಮಾಣ ಪತ್ರ ವಿತರಣೆಯೂ ಆರಂಭಗೊಂಡಿದೆ. ಹಾಲುಮತ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿರ್ಣಯ ಆಗಬೇಕಿದೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮೇಲು ಜಾತಿಯ ಜನರನ್ನು ದ್ವೇಷ ಮಾಡುವುದೇ ಆದ್ಯತೆ ಗುಣವಾಗಿದೆ. ಆರ್ಥಿಕವಾಗಿ ಇತರೆ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ನೀಡದರೆ ಸಿದ್ದರಾಮಯ್ಯ ಅವರಿಗೆ ಏನು ನೋವು ಮಾಡುತ್ತದೆ ಎಂದು ಖಾರವಾಗಿ ಪ್ರಶ್ನಿಸಿದದರು.
ಇದನ್ನೂ ಓದಿ:ರೆಡ್ ಸೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಶಾರುಖ್ ಖಾನ್ ರಿಗೆ ಗೌರವ ಪ್ರಶಸ್ತಿ
ಲಿಂಗಾಯತ, ಬ್ರಾಹ್ಮಣ, ಮರಾಠ, ರಜಪೂತರಲ್ಲಿ, ವಿಶ್ವಕರ್ಮ ಸೇರಿದಂತೆ ಹಲವು ಸಮಾಜಗಳಲ್ಲಿ ಬಡತನ ಇಲ್ಲವೇ. ಎಲ್ಲ ಸಮಾಜದಲ್ಲಿ ಬಡತನ ಇದೆ, ಯಾವುದೇ ಒಂದು ಮೇಲ್ಜಾತಿಯಲ್ಲಿ ಜನ್ಮತಾಳಿದ್ದಾರೆ ಎಂದರೆ ಎಲ್ಲರೂ ಟಾಟಾ-ಬಿರ್ಲಾ ಅಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ಎಲ್ಲಾ ಸಮುದಾಯ ಅರ್ಥಿಕ ಹಿಂದುಳಿದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶೇ.10 ರಷ್ಟು ಮೀಸಲಾತಿ ನೀಡುವ ಮೂಲಕ ಎಲ್ಲ ಸಮುದಾಯದ ಶೋಷಿತರ ಪರ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.
ನಮ್ಮ ಜಾತಿಯಲ್ಲಿ ನಾನೊಬ್ಬ ಶ್ರೀಮಂತ ಇರಬಹುದು, ಪಂಚಮಸಾಲಿ ಸಮಾಜದಲ್ಲೂ ಕೂಲಿ ಮಾಡಿ ಜೀವಿಸುವವರ ಸಂಖ್ಯೆ ಹೆಚ್ಚಿದೆ. ಬ್ರಾಹ್ಮಣರಲ್ಲಿ ಕೇವಲ 3 ಸಾವಿರ ರೂ.ಗೆ ತಿಂಗಳ ಜೀವನ ಮಾಡುವಷ್ಟು ಬಡವರು ಇದ್ದಾರೆ. ಆರ್ಥಿಕವಾಗಿ ಶೋಷಿತ ಇಂತಹ ಸಮುದಾಯದ ಬಡವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೀಸಲು ಕಲ್ಪಿಸಿ ಬಹುದೊಡ್ಡ ಉಪಕಾರ ಮಾಡಿದ್ದಾರೆ ಬಹಳದೊಡ್ಡ ಉಪಕಾರ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ ಎಂದರು.
ಆದರೂ ಸಿದ್ದರಾಮಯ್ಯ ಅವರು ಆರ್ಥಿಕ ಶೋಷಿತ ಸಮಾಜಕ್ಕೆ ಮೀಸಲು ಕೊಟ್ಟಿರುವ ಬಗ್ಗೆ ವಿರೋಧ ಮಾಡುತ್ತಾರೆ. ಇವರ ಬಣ್ಣ ಬಯಲಾಗಿದೆ, ಬರೀ ಮುಸ್ಲೀಮರಿಗೆ ಎಲ್ಲ ಕೊಡಿ ಎಂದು ಹೇಳ್ತಿರಿ ಎಂದು ಸಿದ್ದರಾಮಯ್ಯ ವಿರುದ್ದ ಅಸಮಾಧಾನ ಹೊರಹಾಕಿದರು.
ಸಿದ್ದರಾಮಯ್ಯ ಅವರಿಗೆ ಲಿಂಗಾಯತರು, ಬ್ರಾಹ್ಮಣರು ಮತ ಹಾಕಿಲ್ಲವೇ ಎಂದು ಪ್ರಶ್ನಿಸಿದ ಯತ್ನಾಳ, ಕೂಡಲೇ ಸಿದ್ದರಾಮಯ್ಯ ರಾಜ್ಯದಲ್ಲಿ ಒಬಿಸಿ ಸೇರ್ಪಡೆಯಾಗುವ ಎಲ್ಲ ಸಮುದಾಯಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಮತದಾರರ ಹೆಸರು ಸಕಾರಣವಿಲ್ಲದೇ ರದ್ದಾಗಿವೆ. ಮಹಾನಗರ ಪಾಲಿಕೆ ಮತದಾರರ ಪಟ್ಟಿ ತಯಾರು ಮಾಡುವಲ್ಲಿ ಅನುಭವದ ಕೊರತೆ ಇದಕ್ಕೆ ಪ್ರಮುಖ ಕಾರಣ. ಹಾಗಾಗಿ ಬದುಕಿದ್ದವರು ಸತ್ತಿದ್ದಾರೆ, ಸತ್ತವರು ಬದುಕಿದ್ದಾರೆ ಎಂದೆಲ್ಲ ಅವಾಂತರ ಸೃಷ್ಟಿಯಾಗಿತ್ತು ಎಂದರು.
ವಿಧಾನಸಭೆ ಚುನಾವಣೆಗೆ ಕಂದಾಯ ಇಲಾಖೆ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರಣ ಲೋಪ ಇಲ್ಲದಂತೆ ವ್ಯವಸ್ಥಿತವಾಗಿ ಮತದಾರರ ಪಟ್ಟಿ ಮಾಡುತ್ತಾರೆ ಎಂದರು.
ಈಗ ತಂತ್ರಾಶ ಸಹ ಬಂದಿದೆ, ದೇಶದಲ್ಲಿ ಯಾವುದೋ ಮೂಲೆಯಲ್ಲಿ ಸೇರಿ ಎರಡೆರಡು ಓಟರ್ ಐಡಿ ಇದ್ರೂ ಡಿಲೀಟ್ ಆಗುತ್ತವೆ, ಇನ್ನು ಹದಿನೈದು ದಿನದಲ್ಲಿ ರಾಷ್ಟ್ರೀಯ ಆಪ್ ಬರಲಿದೆ. ಅದು ಬಂದರೆ ಒಬ್ಬ ಮತದಾರ ಕಾಶ್ಮೀರದಲ್ಲೂ ಹಾಗೂ ವಿಜಯಪುರದಲ್ಲೂ ಓಟರ್ ಐಡಿ ಮಾಡಿಸಿದ್ರೆ ಅದು ಗೊತ್ತಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.