ಮಾ. 4 ರಂದು ಆಯವ್ಯಯ ಮಂಡನೆ : ಬೊಮ್ಮಾಯಿ ಬಜೆಟ್ ಬಗ್ಗೆ ಜಿಲ್ಲೆಯಲ್ಲಿ ಸಾಕಷ್ಟು ನಿರೀಕ್ಷೆ
Team Udayavani, Feb 24, 2022, 1:51 PM IST
ದೇವನಹಳ್ಳಿ: ತಾಲೂಕಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ ರಾಜ್ಯ ಬಜೆಟ್ ನಲ್ಲಿ ವಿಶೇಷ ಯೋಜನೆಗಳು ಹಾಗೂ ಹೆಚ್ಚಿನ ಅನುದಾನ ಸಿಗುವ ನಿರೀಕ್ಷೆ ಜನರಲ್ಲಿ ಹೆಚ್ಚಾಗಿದೆ.
ಪ್ರತಿ ವರ್ಷ ರಾಜ್ಯ ಬಜೆಟ್ ನಲ್ಲಿ ಜನರ ಹಲವಾರು ನಿರೀಕ್ಷೆಗಳು ಈಡೇರದೆ ಇರುವುದು ಸಾಕಷ್ಟು ನಿರಾಸೆಯಾಗಿದೆ. ಮಾ.4 ರಂದು ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ತಾಲೂಕಿನ ವಿಜಯ
ಪುರ, ದೇವನಹಳ್ಳಿ ಪಟ್ಟಣಕ್ಕೆ ವಿಶೇಷ ಪ್ರಾತಿನಿದ್ಯ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದ್ದು, ಈ ಭಾಗದ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಸರ್ಕಾರದಿಂದ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ.
ಶಾಸಕ ಎಲ್.ಎನ್. ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ಪಟ್ಟಣಕ್ಕೆ ಹೊಂದಿಕೊಂಡಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದ್ದರೂ ಕ್ಷೇತ್ರ ಸಾಕಷ್ಟು ಹಿಂದುಳಿದಿದೆ.
ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು, 2022-23 ನೇ ಸಾಲಿನ ಬಜೆಟ್ ನಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು, ಜಿಲ್ಲಾ
ಕ್ರೀಡಾಂಗಣ ಮಂಜೂರು ಮಾಡಬೇಕು, ಜಿಲ್ಲಾ ಮಟ್ಟದ ಕನ್ನಡ ಭವನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮೀಸಲಿಡಬೇಕು. ಇಲ್ಲಿನ ಹಳೇ ಸ್ಮಾರಕಗಳು, ಸೇರಿದಂತೆ ವಿಜಯಪುರದಲ್ಲಿನ
100 ಕ್ಕೂ ಹೆಚ್ಚು ದೇವಾಲಯಗಳನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂದು ಹೇಳಿದರು.
ದೇವನಹಳ್ಳಿ ತಾಲೂಕಿಗೆ ಕಾವೇರಿ ನದಿಯಿಂದ ಕುಡಿಯುವ ನೀರಿನ ಸರಬರಾಜಿನ ಪೈಪ್ ಲೈನ್ ಮತ್ತು ಕ್ರಿಯಾ ಯೋಜನೆಗೆ ಅನುದಾನ ಮೀಸಲಿಡಬೇಕು. ಈಗಾಗಲೇ ಸುತ್ತಮುತ್ತ ಪ್ರದೇಶಗಳ ಅಂತರ್ಜಲ ಮಟ್ಟ ಕುಸಿದಿದ್ದು ಕೆ.ಸಿ.ವ್ಯಾಲಿಯಿಂದ ಬರುವ ಕಲುಷಿತ ನೀರು ಭೂಮಿಯ ಒಳಭಾಗಕ್ಕೆ ತಲುಪುತ್ತಿದೆ. ಹೀಗಾಗಿ ಇಲ್ಲಿನ ಜನರಿಗೆ ಕಾವೇರಿ ನೀರನ್ನು ಒದಗಿಸಬೇಕು ಎಂದು ಹೇಳಿದರು.
ಇದನ್ನೂ ಓದಿ : ರಾಜಧಾನಿ ಕಿವ್ ಗೆ ಹೊರಟವರು ಸುರಕ್ಷಿತ ಜಾಗಕ್ಕೆ ಬನ್ನಿ:ಉಕ್ರೇನ್ ನ ಭಾರತೀಯರಿಗೆ ಕೇಂದ್ರದ ಕರೆ
ವಿಜಯಪುರ, ದೇವನಹಳ್ಳಿ ಪಟ್ಟಣಗಳಲ್ಲಿ ಹೈಟೆಕ್ ಬಸ್ ನಿಲ್ದಾಣಗಳು ನಿರ್ಮಾಣ ಮಾಡಬೇಕು. ಪ್ರತಿನಿತ್ಯ ಸಾವಿರಾರು ಸಾರ್ವಜನಿಕರು ಮತ್ತು ಪ್ರಯಾಣಿಕರು ದೇವನಹಳ್ಳಿ ಮತ್ತು ವಿಜಯಪುರ ಬಸ್ ನಿಲ್ದಾಣಗಳ ಮುಖಾಂತರ ಪ್ರಯಾಣ ಮಾಡುತ್ತಿದ್ದು, ಈ ನಗರಗಳಲ್ಲಿ ಸೂಕ್ತವಾದ ಬಸ್ ನಿಲ್ದಾಣಗಳಿಲ್ಲ, ಪ್ರಯಾಣಿಕರಿಗೆ ಅಗತ್ಯವಾಗಿರುವ ಮೂಲ ಸೌಕರ್ಯಗಳನ್ನು ಒದಗಿಸಿಲ್ಲ. ಇಲ್ಲಿ ಮೂಲ ಸೌಕರ್ಯಗಳಿಲ್ಲದೆ ಬಹಳ ಅನನುಕೂಲವಾಗಿದೆ.
ಜಿಲ್ಲಾ ಮಟ್ಟದ ಕಚೇರಿಗಳು, ತಾಲೂಕು ಮಟ್ಟದ ಕಚೇರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಂದು ಹೋಗುವ ಜನರ ಸಂಖ್ಯೆ ಹೆಚ್ಚಾಗಿದ್ದು, ಬಸ್ ನಿಲ್ದಾಣಗಳ ನಿರ್ಮಾಣ ಅವಶ್ಯವಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಬಜೆಟ್ ನಲ್ಲಿ ಸೇರಿಸಿಕೊಳ್ಳುವಂತೆ ಒತ್ತಾಯ ಮಾಡಿದ್ದೇನೆ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸ್ಥಳಾಂತರಿಸಿ:
ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನ, ಜಿಪಂ ಸೇರಿದಂತೆ ಬಹುತೇಕ ಕಚೇರಿಗಳು ದೇವನಹಳ್ಳಿಗೆ ಸ್ಥಳಾಂತರಗೊಂಡಿದ್ದರೂ ಇದುವರೆಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ದೇವನ ಹಳ್ಳಿಗೆ ಸ್ಥಳಾಂತರ ಮಾಡಿಲ್ಲ. ಸ್ಥಳಾಂತರಕ್ಕೆ ಅವಕಾಶ ನೀಡಬೇಕು. ಜಿಲ್ಲಾ ಕೇಂದ್ರಕ್ಕೆ ಸರ್ಕಾರಿ ಎಂಜಿನಿಯ ರಿಂಗ್ ಕಾಲೇಜು ಮಂಜೂರು ಮಾಡಬೇಕು ಎಂದು
ಒತ್ತಾಯಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.