BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್

Team Udayavani, Oct 13, 2024, 11:37 PM IST

sup

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) 11ನೇ ಸೀಸನ್ ಸಾಗುತ್ತಿದೆ.  ಕಿಚ್ಚ ಸುದೀಪ್ (Kiccha Sudeep) ನಡೆಸಿಕೊಡುವುದರಿಂದ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕರುನಾಡಿನಲ್ಲಿ ದೊಡ್ಡ ವೀಕ್ಷಕರಿದ್ದಾರೆ. ಬಿಗ್ ಬಾಸ್ ಸೀಸನ್-11 (Bigg Boss Kannada-11) ಈ ಬಾರಿ ಆರಂಭವಾಗುವ ಮುನ್ನವೇ ನಿರೂಪಕರ ವಿಚಾರದಲ್ಲಿ ಭಾರೀ ಸದ್ದು ಮಾಡಿತ್ತು.

ಮುಖ್ಯವಾಗಿ ಈ ಬಾರಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಆಯೋಜಕರು ಹಾಗೂ ಕಲರ್ಸ್ ಕನ್ನಡದ ಮಾತಿಗೆ ಒಪ್ಪಿದ ಕಿಚ್ಚ ಬಿಗ್ ಬಾಸ್ ನಡೆಸಿಕೊಡಲು ಒಪ್ಪಿದ್ದು, ನಿರೂಪಣೆ ಮಾಡುತ್ತಿದ್ದಾರೆ.

ಆದರೆ ಇದೀಗ ಬಿಗ್ ಬಾಸ್ ಸೀಸನ್ -11 ಶುರುವಾದ ಎರಡು ವಾರದಲ್ಲೇ ಕಿಚ್ಚ ಸುದೀಪ್ ನಿರೂಪಣೆಗೆ ಗುಡ್ ಬೈ ಹೇಳಿದ್ದಾರೆ.

ಇದು‌ ನಿರೂಪಕನಾಗಿ ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಎಂದು ಕಿಚ್ಚ ಹೇಳಿದ್ದಾರೆ. ಈ ಬಗ್ಗೆ ‘ಎಕ್ಸ್’ ನಲ್ಲಿ ಅವರು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಬಿಗ್ ಬಾಸ್ ಟಿವಿ ರೇಟಿಂಗ್ ನಲ್ಲಿ ಭರ್ಜರಿ ಸದ್ದು ಮಾಡಿತ್ತು. ಇದನ್ನು ಕಿಚ್ಚ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದರು. ಇದೀಗ ಇದೇ ಫೋಟೋವನ್ನು ಹಂಚಿಕೊಂಡು,

“ಬಿಗ್ ಬಾಸ್ ಗೆ ಅಪಾರವಾದ ಪ್ರೀತಿ ತೋರಿಸಿರುವುದಕ್ಕೆ ನಿಮ್ಮೆಗೆಲ್ಲರಿಗೂ ಧನ್ಯವಾದಗಳು. ಕಾರ್ಯಕ್ರಮಕ್ಕೆ ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ.10+1 ವರ್ಷ ಜತೆಯಾಗಿ ಪ್ರಯಾಣಿಸಿದ್ದೇನೆ. ಈಗ ನಾನು ಏನು ಮಾಡಬೇಕು ಅಂದುಕೊಂಡಿದ್ದೇನೋ ಅದರೊಂದಿಗೆ ಮುಂದುವರೆಯುವ ಸಮಯ ಬಂದಿದೆ. ಇದು ಬಿಗ್ ಬಾಸ್ ನಿರೂಪಕನಾಗಿ ನನ್ನ ಕೊನೆ ಸೀಸನ್ ಆಗಿದೆ. ನನ್ನ ನಿರ್ಧಾರವನ್ನು ಕಲರ್ಸ್ ಹಾಗೂ ಬಿಗ್ ಬಾಸ್ ನ್ನು ಅನುಸರಿಸಿದ ಎಲ್ಲರಿಗೂ ಗೌರವಿಸುತ್ತದೆ ಎನ್ನುವುದನ್ನು ‌ನಾನು ನಂಬುತ್ತೇನೆ” ಎಂದು ಕಿಚ್ಚ ಹೇಳಿದ್ದಾರೆ.

ಈ ಸೀಸನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ನನ್ನ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ ಎಂದು ಕಿಚ್ಚ ಹೇಳಿದ್ದಾರೆ.

ಅಂದ ಹಾಗೆ ಕಿಚ್ಚ ಸುದೀಪ್ ಈ ಬಾರಿ ಬಿಗ್ ಬಾಸ್ ನಡೆಸಿಕೊಡಲ್ಲ ಎಂದು ಮೊದಲು ಹೇಳಿದ್ದರು. ಆ ಬಳಿಕ ಅವರ ಮನವೊಲಿಸಲಾಗಿತ್ತು ಎಂದು ಸುದ್ದಿಗೋಷ್ಠಿಯಲ್ಲಿ ಸುದೀಪ್ ಹೇಳಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.