BBK11:ಬಿಗ್ ಬಾಸ್ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ
Team Udayavani, Oct 13, 2024, 9:33 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ದಲ್ಲಿ ಮಹಿಳಾ ಸ್ಪರ್ಧಿಗಳಿಗೆ ತೊಂದರೆ ಆಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ಬಿಗ್ ಬಾಸ್ ಆಯೋಜಕರಿಗೆ ಮಹಿಳಾ ಆಯೋಗ ಪತ್ರ ಬರೆದಿತ್ತು.
ಈ ಬಗ್ಗೆ ಕಿಚ್ಚ ಸುದೀಪ್ ಅವರೇ ಸ್ವತಃ ಕಾರ್ಯಕ್ರಮ ನಿರೂಪಣೆ ಮಾಡುವಾಗ ಮಹಿಳಾ ಸ್ಪರ್ಧಿಗಳಿಗೆ ಹೇಳಿದ್ದಾರೆ.
ಇದಕ್ಕೆ ತಮಗೆ ಇದುವರೆಗೆ ಬಿಗ್ ಬಾಸ್ ಮನೆಯಲ್ಲಿ ಯಾವ ತೊಂದರೆಯೂ ಆಗಿಲ್ಲ. ನೀರು, ವಾಶ್ ರೂಮ್ ಬಳಕೆ ಮಹಿಳೆಯರಿಗೆ ಮುಖ್ಯವಾಗಿ ಬೇಕಾಗುತ್ತದೆ. ಇದನ್ನು ಬಿಗ್ ಬಾಸ್ ನಮಗೆ ಯಾವ ಅಡೆತಡೆ ಇಲ್ಲದೆಯೇ ಕಲ್ಪಿಸಿದೆ. ಹೊರಗಡೆ ಹೇಗೆ ಇದು ಟೆಲಿಕಾಸ್ಟ್ ಆಗಿದೆ ಎನ್ನುವುದು ಗೊತ್ತಿಲ್ಲ. ಆದರೆ ಬಿಗ್ ಬಾಸ್ ಮನೆಯಲ್ಲಿ ನಮಗೆ ಯಾವುದೇ ತೊಂದರೆ ಆಗಿಲ್ಲವೆಂದು ಮಹಿಳಾ ಸ್ಪರ್ಧಿಗಳು ಸ್ಪಷ್ಟನೆ ನೀಡಿದ್ದಾರೆ.
ದೂರಿನಲ್ಲಿ ಏನಿದೆ?:
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅವರು, ಮಾನವಕ ಹಕ್ಕು ಆಯೋಗಕ್ಕೆ ಪತ್ರ ಬರೆದು ಬಿಗ್ಬಾಸ್ ಮನೆಯಲ್ಲಿ ಮಾನವ ಹಕ್ಕಿನ ಉಲ್ಲಂಘನೆ ಆಗುತ್ತಿದೆ ಎಂದು ದೂರು ನೀಡಿದ್ದರು.
ಪೌಷ್ಟಿಕ ಆಹಾರ, ಶೌಚಾಲಯ ವ್ಯವಸ್ಥೆಯನ್ನು ಸಹ ನೀಡದೆ ಮಾನವ ಹಕ್ಕು ಉಲ್ಲಂಘನೆ ಮಾಡಲಾಗಿದೆ ಎಂದು ನಾಗಲಕ್ಷ್ಮಿ ಆರೋಪ ಮಾಡಿದ್ದರು.
ಕೆಲ ಸ್ಪರ್ಧಿಗಳು ಪರಸ್ಪರ ಜಗಳವಾಡುವ ಭರದಲ್ಲಿ ಮಹಿಳಾ ಸ್ಪರ್ಧಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಈ ಕಾರಣದಿಂದ ಮಹಿಳಾ ಆಯೋಗದ ಅಧ್ಯಕ್ಷೆ ಪೊಲೀಸರಿಗೂ ಪತ್ರ ಬರೆದಿದ್ದರು.
ಪೊಲೀಸರಿಂದ ನೋಟಿಸ್:
ಇದೀಗ ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಠಾಣೆ ಪೊಲೀಸರು ಬಿಗ್ ಬಾಸ್ ಆಯೋಜಕರಿಗೆ ನೊಟೀಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
MUST WATCH
ಹೊಸ ಸೇರ್ಪಡೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.