ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು : ಅಧಿಕಾರಿಗಳ ಜೊತೆ ಕೃಷಿ ಸಚಿವರ ವಿಡಿಯೋ ಸಂವಾದ
Team Udayavani, Aug 13, 2020, 5:40 PM IST
ಬೆಂಗಳೂರು : ರೈತ ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು, ಬೆಳೆ ಸಮೀಕ್ಷೆಯನ್ನು ಯಶಸ್ವಿಯನ್ನಾಗಿಸಿ ಸರ್ಕಾರದ ಉತ್ಸವವನ್ನಾಗಿಸುವ ದೊಡ್ಡಮಟ್ಟದ ಸವಾಲು ಎಲ್ಲರ ಮುಂದಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಹೇಳಿದ್ದಾರೆ.
ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಕೆವಿಕೆ ಸೇರಿದಂತೆ ಕೃಷಿ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಕೃಷಿ ಸಚಿವರು.
ಬೆಳೆ ಸಮೀಕ್ಷೆ ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಕೆಲಸವೆಂದು ವರ್ಗೀಕರಿಸುವುದು ಬೇಡ.ಇದು ಸರ್ಕಾರದ ಕೆಲಸವೆಂದು ಒಗ್ಗಟ್ಟಾಗಿ ಎಲ್ಲರೂ ಪಾಲ್ಗೊಂಡು ಬೆಳೆ ಸಮೀಕ್ಷೆಯನ್ನು ಆಯಾ ರೈತರಿಂದಲೇ ಮಾಡಿಸಿಅಪ್ಲೋಡ್ ಮಾಡಿಸಬೇಕು.
ಸ್ವಾಭಿಮಾನಿ ರೈತ ತನ್ನ ಹೊಲದ ಸಮೀಕ್ಷೆಯನ್ನು ತಾನೇ ನಡೆಸಿ ರೈತನೇ ಸರ್ಟಿಫಿಕೇಟ್ ಕೊಡುವಂತಹ ವಿಶೇಷ ಯೋಜನೆಯಿದು. ತಾಲೂಕಿನ ಎಡಿಎಗಳು ಸ್ಥಳೀಯ ಶಾಸಕರನ್ನು ರೈತರ ಹೊಲಕ್ಕೆ ಕರೆದುಕೊಂಡು ಹೋಗಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಫೋಟೋ ಅಪ್ಲೋಡ್ ಮಾಡಿಸಬೇಕು.ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ಪ್ರೊಪೆಸರ್‌ಗಳನ್ನು ಸಹಾಯಕ ಪ್ರೊಪೆಸರ್‌ಗಳನ್ನು ಸಹ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಚಾರಕ್ಕೆ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ವಾಟ್ಸಪ್ ಗ್ರೂಪ್ ರಚಿಸಿ ಕೃಷಿ ತೋಟಗಾರಿಕಾ ವಿದ್ಯಾರ್ಥಿಗಳು ರೈತರು ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಬೆಳೆ ವಿವರ ಅಪ್ಲೋಡ್ ಮಾಡಲು ನೆರವಾಗುವಂತೆ ಹೇಳಬೇಕು. ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು, ಸಹಕಾರಿ ಸಂಘಗಳು ಹಾಲು ಉತ್ಪಾದಕ ಸಂಘಗಳ ಪ್ರತಿನಿಧಿಗಳನ್ನು ಹಾಗೂ ಕೃಷಿ ಇಲಾಖೆಯಲ್ಲಿರುವ ಹತ್ತು ಸಾವಿರ ಅಧಿಕಾರಿಗಳನ್ನು ಬಳಸಿಕೊಂಡು ಹೆಚ್ಚೆಚ್ಚು ಬೆಳೆ ಸಮೀಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಬೆಳೆ ಸಮೀಕ್ಷೆ ಆ್ಯಪ್ ಹಾಗೂ ರೈತರೇ ತಮ್ಮ ಬೆಳೆ ಸಮೀಕ್ಷೆ ವಿವರ ದಾಖಲಿಸುವಂತೆ ಮಾಡಬೇಕು. ರೈತರೇ ನೇರವಾಗಿ ಆ್ಯಪ್‌ನಲ್ಲಿ ವಿವರ ದಾಖಲಿಸುವಂತೆ ಮಾಡಬೇಕು.ಇದು ಬೆಳೆ ಸಮೀಕ್ಷೆ ಸರ್ಕಾರದ ಹಬ್ಬವಾಗಬೇಕು. ಇದಕ್ಕಾಗಿಯೇ ಬೆಳೆ ಸಮೀಕ್ಷೆಯನ್ನು ಉತ್ಸವ – 2020 ಎಂದು ಕರೆಯಲಾಗಿದೆ ಎಂದು ಸಚಿವರು ವಿವರಿಸಿದರು.
ವಿಡಿಯೋ ಸಂವಾದವನ್ನುದ್ದೇಶಿಸಿ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್,ಕಳೆದ ಮೂರು ವರ್ಷಗಳಿಂದ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ರಾಜ್ಯದಲ್ಲಿ ಯಶಸ್ವಿಯಾಗುತ್ತಾ ಬಂದಿದೆ. ರಾಷ್ಟ್ರೀಯಮಟ್ಟದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕದ ಬೆಳೆ ಸಮೀಕ್ಷೆಗೆ ಉತ್ತಮ ಪ್ರಶಂಸೆ ದೊರೆತಿದೆ. ಕೇಂದ್ರದ ಕಾರ್ಯದರ್ಶಿಗಳಿಗೆ ರಾಜ್ಯದ ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿತ್ತು. ಬೆಳೆ ಆ್ಯಪ್ ಬಳಕೆ, ಪ್ರಯೋಜನ, ರೈತರಿಗಾಗುವ ಲಾಭ,ಇಲಾಖೆಗಾಗುವ ಆರ್ಥಿಕ ಲಾಭವನ್ನು ಕಂಡು ಕೇಂದ್ರ ಸರ್ಕಾರ ಕರ್ನಾಟಕದಲ್ಲಿನ ಬೆಳೆ ಸಮೀಕ್ಷೆ ಆ್ಯಪ್ ಅನ್ನು ದೇಶದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ತಂತ್ರಜ್ಞಾನವನ್ನು ಬಳಸಿ ಬೆಳೆ ಸಮೀಕ್ಷೆ ಮಾಡಿರುವುದು ಬಹಳ ಲಾಭದಾಯಕಾರಿಯಾಗಿದ್ದು, ತಂತ್ರಜ್ಞಾನದ ಬೆಳೆ ಸಮೀಕ್ಷೆಯಿಂದ ಸುಮಾರು 7ಲಕ್ಷ ಮೆಕ್ಕೆಜೋಳ ಬೆಳೆದ ರೈತರ ಖಾತೆಗೆ ನೇರವಾಗಿ ಸರ್ಕಾರದ ಸಹಾಯಧನ ವರ್ಗಾಯಿಸಲು ಅನುಕೂಲವಾಗಿದೆ. ಅದರಂತೆ ಹಣ್ಣು, ಹೂವು, ತರಕಾರಿ ಬೆಳೆದ ರೈತರಿಗೆ ಸೂಕ್ತ ಪ್ಯಾಕೇಜ್ ಘೋಷಿಸಲು ಸಹಾಯಕವಾಯಿತು. ರೈತರು ಮನೆಯಿಂದ ಹೊರಗೆ ಹೋಗದೇ ಅವರ ಖಾತೆಗೆ ಹಣ ಜಮೆಯಾಗಲು ಈ ತಂತ್ರಜ್ಞಾನದಿಂದ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕಳೆದ ವರ್ಷ 2 ಕೋಟಿ 10 ಲಕ್ಷ ಸರ್ವೆ ನಂಬರ್ ಗಳನ್ನು ಸಮೀಕ್ಷೆ ನಡೆಸಲಾಗಿದೆ. ಈ ವರ್ಷ ರೈತ ಬೆಳೆ ಸಮೀಕ್ಷೆ ಆ್ಯಪ್ ಬಳಸಿ ಕಳೆದ ವರ್ಷಕ್ಕಿಂತಲೂ ಇನ್ನೂ ಹೆಚ್ಚಿನ ಬೆಳೆ ಸಮೀಕ್ಷೆ ನಡೆಸಬೇಕೆಂದು ವಿಜಯ್ ಭಾಸ್ಕರ್ ಅವರು ಸೂಚಿಸಿದರು.
ಕೃಷಿ ಇಲಾಖೆ ನಿರ್ದೇಶ ಶ್ರೀನಿವಾಸ್ ಪ್ರಾಸ್ತಾವಿಕ ಮಾತನಾಡಿ, ಬೆಳೆ ಸಮೀಕ್ಷೆ ಯಶಸ್ವಿಯಾಗುವಂತೆ ಎಲ್ಲರೂ ನೋಡಿಕೊಳ್ಳಬೇಕು.ಆಗಸ್ಟ್ 24ರೊಳಗೆ ಸಮೀಕ್ಷೆ ಪೂರ್ಣ ಹಾಗೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು.ಗ್ರಾಮಮಟ್ಟದಿಂದ ರಾಜ್ಯಮಟ್ಟದವರೆಗಿನ ಎಲ್ಲಾ ಸಮಿತಿಗಳು ಸಮೀಕ್ಷೆಯ ಸಫಲತೆ ಹಾಗೂ ಪೂರ್ಣತೆಗೆ ದುಡಿಯಬೇಕೆಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.