ಜಯಪ್ರಕಾಶ್ ಹೆಗ್ಡೆ ಪ್ರತಿವಾದಿಯಾದ ಕಾರಣ; ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್
Team Udayavani, Aug 24, 2022, 6:15 AM IST
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿ ಗಣತಿ (ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ) ವರದಿಯನ್ನು ಸರಕಾರಕ್ಕೆ ಸಲ್ಲಿಸಲು ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಹಿಂದೆ ಸರಿದ್ದಾರೆ.
ಈ ಕುರಿತು ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ, ಚಿತ್ರನಟ ಡಾ| ಮುಖ್ಯಮಂತ್ರಿ ಚಂದ್ರು ಸೇರಿ 13 ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾ| ಅಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಮಗೆ ಪರಿಚಯ ಇರುವ ಕಾರಣ ಅರ್ಜಿ ವಿಚಾರಣೆಯಿಂದ ತಾವು ಹಿಂದೆ ಸರಿಯುತ್ತಿರುವುದಾಗಿ ನ್ಯಾ| ವಿಶ್ವಜಿತ್ ಶೆಟ್ಟಿ ತಿಳಿಸಿದರು.
ಅದಕ್ಕೆ, ನ್ಯಾ| ವಿಶ್ವಜಿತ್ ಶೆಟ್ಟಿ ಅವರನ್ನು ಒಳಗೊಂಡಿರದ ನ್ಯಾಯಪೀಠದ ಮುಂದೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ವಿಚಾರಣೆಯನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.