ಬೆಳಗಾವಿ – ಕಿತ್ತೂರು – ಧಾರವಾಡ ರೈಲು ಮಾರ್ಗಕ್ಕೆ ಗ್ರೀನ್ ಸಿಗ್ನಲ್
Team Udayavani, Sep 7, 2020, 6:49 PM IST
ಬೆಳಗಾವಿ: ಬಹುದಿನಗಳ ಕನಸಾಗಿದ್ದ ಬೆಳಗಾವಿಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಮಗಾರಿಯ ನೀಲನಕ್ಷೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, 927.40 ಕೋಟಿ ರೂ. ವೆಚ್ಚದ ಈ ಕಾಮಗಾರಿ ಶೀಘ್ರ‍್ರದಲ್ಲಿ ಆರಂಭವಾಗಲಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಜನತೆಗೆ ಇದು ಬಹಳ ಅನುಕೂಲಕರವಾಗಲಿದೆ ಎಂದು ಹೇಳಿದರು.
ಈ ನೂತನ ರೈಲು ಮಾರ್ಗದಲ್ಲಿ 11 ನಿಲ್ದಾಣಗಳು ಬರಲಿವೆ. ಬೆಳಗಾವಿ, ದೇಸೂರು, ಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹೂಲಿಕಟ್ಟಿ, ಕಿತ್ತೂರು, ತೇಗೂರು, ಮುಮ್ಮಿಗಟ್ಟಿ, ಕ್ಯಾರಕೊಪ್ಪ ಹಾಗೂ ಧಾರವಾಡ. ಕಡಿಮೆ ಅವಧಿಯಲ್ಲಿ ಧಾರವಾಡಕ್ಕೆ ತಲುಪಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಬೆಳಗಾವಿ, ಧಾರವಾಡ ಜನತೆಯ ಪರವಾಗಿ ವಿಶೇಷ ಧನ್ಯವಾದ ತಿಳಿಸುವುದಾಗಿ ಹೇಳಿದರು.
73 ಕಿ.ಮೀ. ಅಂತರದ ಈ ನೂತನ ರೈಲು ಮಾರ್ಗ ನಿರ್ಮಾಣ ಕುರಿತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 2019-20ರ ಬಜೆಟ್‌ನಲ್ಲಿ ಹೇಳಿತ್ತು. 2019ರಲ್ಲಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಸರ್ಕಾರ ಈಗ ಅನುಮೋದನೆ ನೀಡಿ ಬೆಳಗಾವಿ-ಧಾರವಾಡ ರೈಲು ಮಾರ್ಗಕ್ಕೆ ಹಸಿರು ನಿಶಾನೆ ತೋರಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ತಲಾ ಶೇ. ೫೦ರಷ್ಟು ಪಾಲು ನೀಡಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.