ಬೆಳಗಾವಿ: “ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

ಜಿಲ್ಲಾ ಮಟ್ಟದಲ್ಲಿ ಕೌಶಲ್ಯ ಸಮಿತಿಗಳನ್ನು ರಚನೆ ಮಾಡಲಾಗಿದೆ

Team Udayavani, Oct 15, 2024, 2:49 PM IST

ಬೆಳಗಾವಿ: “ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’

■ ಉದಯವಾಣಿ ಸಮಾಚಾರ 
ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು
ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಸುಧಾರಣೆಗಳೊಂದಿಗೆ ದೇಶದ ತಳಮಟ್ಟವನ್ನು ತಲುಪಲು ಮತ್ತು ಪ್ರತಿಯೊಬ್ಬರನ್ನು ಸಬಲೀಕರಣಗೊಳಿಸುವ ಸಲುವಾಗಿ, ಕೌಶಲ್ಯ ಅಭಿವೃದ್ಧಿ ಅವಕಾಶಗಳಿಗಾಗಿ ವ್ಯವಸ್ಥೆಯನ್ನು ಬಲಪಡಿಸಲು ಜಿಲ್ಲಾ ಮಟ್ಟದಲ್ಲಿ ಕೌಶಲ್ಯ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮಾತನಾಡಿ, ಮಾರಾಟ ಮತ್ತು ಪ್ರಚಾರಕ್ಕೆ ಸಂಬಂಧಿಸಿದಂತೆ ಎಂಬಿಎ ಪದವಿ ಹೊಂದಿರುವ ವಿದ್ಯಾರ್ಥಿಗಳ ಸಂಖ್ಯೆ ಸಾಕಷ್ಟಿದೆ. ಎಲ್ಲ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು.

ವಿವಿಧ ಕಂಪನಿಗಳಲ್ಲಿ ಸಾಕಷ್ಟು ಉದ್ಯೋಗಗಳಿವೆ. ಅವರ ಬೇಡಿಕೆಯಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅನುಭವದ ಕೊರತೆ
ಎದುರಾಗುತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ವಿವಿಧ ಕಂಪನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಮಾತನಾಡಿ, ಜಾಂಬೋಟಿಯಲ್ಲಿ ಜೇನು ಸಾಕಾಣಿಕೆ
ಹೆಚ್ಚಾಗಿದ್ದು, ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆ ತರಬೇತಿ ನೀಡಲಾಗುತ್ತಿದೆ. ಈ ಭಾಗದಲ್ಲಿ ಕಾಡು ಜೇನು ಹಾಗೂ ಪೆಟ್ಟಿಗೆ ಮೂಲಕ ಜೇನು ಸಾಕಾಣಿಕೆ ಮಾಡಿ ಮಾರಾಟ ಮಾಡಲಾಗುತ್ತಿದೆ. ಇದೆ ಮಾದರಿಯಲ್ಲಿ ಯುವಕರಿಗೆ ತರಬೇತಿ ನೀಡಬೇಕು ಎಂದು ಹೇಳಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ನಿರ್ವಾಹಕ ನಿರ್ದೇಶಕ ನವಾಜ್‌ ಮಾತನಾಡಿ, ಜಿಲ್ಲಾ ಕೌಶಲ್ಯಾಭಿವೃದ್ಧಿ
ಸಮಿತಿಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಉದ್ಯಮದಾರರು ಸದಸ್ಯರಾಗಿದ್ದಾರೆ. ಅದೇ
ರೀತಿ ಕೃಷಿ ಇಲಾಖೆಯ ಉಪ ಸಮಿತಿಗಳನ್ನು ಸಹ ರಚಿಸಬಹುದಾಗಿದೆ ಎಂದರು.

ಕೇಂದ್ರ ಸರ್ಕಾರದ ಸಂಕಲ್ಪ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಹ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಕಲಿಕೆ ಜೊತೆ ಕೌಶಲ್ಯ ಯೋಜನೆಯ ಮೂಲಕ 8ರಿಂದ 10ನೇ ತರಗತಿ ಶಾಲಾ ಮಕ್ಕಳಿಗೆ ವಾರದ ಒಂದು ದಿನ ಎಲ್ಲ ಕ್ಷೇತ್ರಗಳಲ್ಲಿನ ವೃತ್ತಿಪರ ತರಬೇತಿ ನೀಡಬಹುದು. ಅದೇ ರೀತಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕ್ರೆಡಿಟ್‌ ಬೇಸ್‌ ಕೋರ್ಸ್‌ ಮೂಲಕ ತರಬೇತಿ ನೀಡಬೇಕು. ಇದಕ್ಕೆ ಬೇಕಾದ ಅನುದಾನವನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ರಾಹುಲ್‌ ಶಿಂಧೆ ಮಾತನಾಡಿ, ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಮಟ್ಟದಲ್ಲಿ ಸಭೆಗಳನ್ನು ನಡೆಸಬೇಕು. ವಿವಿಧ ಇಲಾಖೆಯ ಉಪ ಸಮಿತಿಗಳನ್ನು ರಚಿಸಿ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ನಿರಂತರ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು. ಸ್ಥಳೀಯ ತರಬೇತುದಾರರು, ಸಂಪನ್ಮೂಲ ವ್ಯಕ್ತಿಗಳು, ಎನ್‌ಜಿಒ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದರು.

ಪ್ರೊಬೇಷನರಿ ಐಎಎಸ್‌ ಅಧಿಕಾರಿ ದಿನೇಶಕುಮಾರ್‌ ಮೀನಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸತ್ಯನಾರಾಯಣ ಭಟ್‌, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಸುರೇಶ್‌ ಪೈ, ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್‌ ರಶೀದ್‌ ಮಿರಜನ್ನವರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್‌. ನಾಗರಾಜ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ವ್ಯವಸ್ಥಾಪಕ ಡಾ. ಸಂಜೀವ ತಿಗಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.