ಈಗ ಜನಸೇವೆಗೆ ವೈದ್ಯರ ಕೊರತೆ ತಲೆಬಿಸಿ
ಖಾಲಿ ಹುದ್ದೆಗಳಿಗೆ ಭರ್ತಿ ಆಗ್ತಿಲ್ಲ ವೈದ್ಯರು | ಗ್ರಾಮೀಣದಲ್ಲಿ ಕರ್ತವ್ಯ ಸಲ್ಲಿಸಲು ಹಿಂದೇಟು | ಹಳ್ಳಿ ಜನಕ್ಕೆ ತೊಂದರೆ
Team Udayavani, Apr 10, 2020, 7:01 PM IST
ಬೆಳಗಾವಿ: ಕೊರೊನಾ ಸೋಂಕು ಹರಡುತ್ತಿರುವ ಇಂಥ ಸಂದಿಗ್ಧ ಸ್ಥಿತಿಯಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್‌ಗಳು ದಿನದಿಂದ-ದಿನಕ್ಕೂ ಹೆಚ್ಚುತ್ತಿರುವ ಭೀತಿಯಲ್ಲಿಯೂ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯೂ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.
ಎರಡು ವೈದ್ಯಕೀಯ ಕಾಲೇಜು ಹೊಂದಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಎಂಬ ಖ್ಯಾತಿಗೆ ಒಳಗಾದ ಬೆಳಗಾವಿ ವೈದ್ಯರ ಕೊರತೆಯಿಂದ ಸೊರಗುತ್ತಿದೆ. ಕೋವಿಡ್-19 ಮಹಾಮಾರಿ ಬೆಳಗಾವಿಯನ್ನು ಮತ್ತಷ್ಟು ಸಂಕಷ್ಟಕ್ಕೆ ದುಡಿದೆ. ದಿನದಿಂದ ದಿನಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅನೇಕ ವೈದ್ಯ ತಜ್ಞರು, ಫಾರ್ಮಾಸಿಸ್ಟ್‌ಗಳು, ಪ್ರಯೋಗಾಲಯ ತಜ್ಞರು, ಕಿರಿಯ ಆರೋಗ್ಯ ಸಹಾಯಕ, ಸಹಾಯಕಿಯರು ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಉಳಿದಿವೆ.
ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಖಾಲಿ ಹುದ್ದೆ ಭರ್ತಿಗೆ ಅನೇಕ ಸಲ ಅರ್ಜಿ ಆಹ್ವಾನಿಸಿದರೂ ವೈದ್ಯರ ನೇಮಕಾತಿ ಆಗುತ್ತಿಲ್ಲ. ಸರ್ಕಾರಿ ವೈದ್ಯರಾಗುವುದು ಅನೇಕರಿಗೆ ಬೇಡ ಎನ್ನಿಸುತ್ತಿದೆ. ವೇತನ ಹೆಚ್ಚಿಸಿದರೂ ವೈದ್ಯರಾಗಿ ಕಾರ್ಯನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಖಾಸಗಿ ಆಸ್ಪತ್ರೆಯೋ ಅಥವಾ ಸ್ವಂತ ಆಸ್ಪತ್ರೆ ತೆರೆಯುತ್ತಿರುವ ವೈದ್ಯರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರದ ನೇಮಕಾತಿಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುತ್ತಿಲ್ಲ.
ಜಿಲ್ಲೆಯಲ್ಲಿ ಸದ್ಯ 139 ಪ್ರಾಥಮಿಕ ಆರೋಗ್ಯ ಕೇಂದ್ರ, 16 ಸಮುದಾಯ ಆರೋಗ್ಯ ಕೇಂದ್ರ ಮತ್ತು 9 ಸಾರ್ವಜನಿಕ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಬೆಳಗಾವಿಯಲ್ಲಿ 12 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಿಪ್ಪಾಣಿ ಹಾಗೂ ಗೋಕಾಕದಲ್ಲಿ ತಲಾ ಒಂದು ಕೇಂದ್ರಗಳಿವೆ. ಸುಮಾರು 242 ವೈದ್ಯರು ಹಾಗೂ ಸಿಬ್ಬಂದಿ ಹುದ್ದೆಗಳು ಖಾಲಿ ಉಳಿದಿವೆ. ಬಹುತೇಕ ಆಸ್ಪತ್ರೆಗಳಲ್ಲಿ ಕೋಟ್ಯಂತರ ರೂ. ವೆಚ್ಚ ಮಾಡಿ ವೈದ್ಯಕೀಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲದಿರುವುದು ಗ್ರಾಮೀಣ ಭಾಗದ ಜನರಿಗೆ ಸಮಸ್ಯೆಯಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನೇ ಕೆಲವು ಕಡೆಗಳಲ್ಲಿ ನಿಯೋಜಿಸಲಾಗಿದೆ. ಹೀಗಾಗಿ ಹುತೇಕ ಆಸ್ಪತ್ರೆಗಳಲ್ಲಿ ಒತ್ತಡ ಕಡಿಮೆಯಾಗಿದೆ. ಆರೋಗ್ಯ ಇಲಾಖೆಯ ಖಾಯಂ ಹುದ್ದೆಗಳಿಗೆ ಮಾಸಿಕ 90 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಗುತ್ತಿಗೆ ಆಧಾರದ ತಜ್ಞ ವೈದ್ಯರಿಗೆ ಮಾಸಿಕ 1.10 ಲಕ್ಷ ರೂ. ವೇತನ ಪಾವತಿಸಲಾಗುತ್ತಿದೆ. ಆದರೂ ವೈದ್ಯರು ಸಂದರ್ಶನಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ.
22 ಖಾಲಿ ಹುದ್ದೆ ಖಾಲಿ
ಎಂಬಿಬಿಎಸ್ ವೈದ್ಯರು 156 ಹುದ್ದೆಗಳ ಪೈಕಿ 22 ಖಾಲಿ ಉಳಿದುಕೊಂಡಿವೆ. ಇದರಲ್ಲಿ 6 ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧೆಡೆ ತಜ್ಞ ವೈದ್ಯರು 92ರ ಪೈಕಿ 42 ಖಾಲಿ ಉಳಿದಿದ್ದು, ಇದರಲ್ಲಿ 24 ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪಡೆದುಕೊಳ್ಳಲಾಗಿದೆ. ಗ್ರಾಮದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ (ಎಎನ್‌ಎಂ) 633ರಲ್ಲಿ 208 ಖಾಲಿ ಉಳಿದಿವೆ. ಸ್ಟಾಫ್ ನರ್ಸ್ ಎಲ್ಲವೂ ಭರ್ತಿಯಾಗಿದ್ದು, 3,608 ಆಶಾ ಕಾರ್ಯಕರ್ತೆಯರ ಹುದ್ದೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್, ತಜ್ಞ ವೈದ್ಯರ ಕೊರತೆ ಇದೆ. ನೇಮಕಾತಿ ಮಾಡುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಗ್ರಾಮೀಣ ಮಟ್ಟದಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವಲ್ಲಿ ಹಿಂದೇಟು ಹಾಕುತ್ತಿರುವುದು ನಿಜ.
ಡಾ| ಶಶಿಕಾಂತ ಮುನ್ಯಾಳ,
ಜಿಲ್ಲಾ ಆರೋಗ್ಯಾಧಿಕಾರಿ
ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.