ಬೆಳಗಾವಿ: ಧಾರಾಕಾರ ಮಳೆ-148 ಅಡಿ ಎತ್ತರದ ಮಂದಿರ ಮುಳುಗಡೆ
Team Udayavani, Jul 10, 2024, 5:49 PM IST
■ ಉದಯವಾಣಿ ಸಮಾಚಾರ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಡಕಲ್ ಜಲಾಶಯದಲ್ಲಿರುವ 148 ಅಡಿ ಎತ್ತರದ ಶ್ರೀ ವಿಠಲ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ.
ಸಾವಂತವಾಡಿ, ಅಂಬೋಲಿ ಅರಣ್ಯ ಪ್ರದೇಶದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿರುವ ಶ್ರೀ ವಿಠಲ ಮಂದಿರ ಸಂಪೂರ್ಣ ಜಲಾವೃತಗೊಂಡಿದ್ದು, ಕಳೆದ 15 ದಿನಗಳಿಂದ ದರ್ಶನಕ್ಕೆ ಲಭ್ಯವಿದ್ದ ಮಂದಿರ ಈಗ ನೀರಿನಲ್ಲಿ ಮುಳುಗಿ ಕೇವಲ ಕಳಶ ಮಾತ್ರ ಕಾಣುತ್ತಿದೆ.
2175 ಅಡಿ ಸಾಮರ್ಥ್ಯದ ಹಿಡಕಲ್ ಜಲಾಶಯ 2128 ಅಡಿ ನೀರು ತುಂಬಿದ್ದು, 24 ಗಂಟೆಗಳ ಅವಧಿಯಲ್ಲಿ ಜಲಾಶಯ ಮಟ್ಟದಲ್ಲಿ ಐದು ಅಡಿ ನೀರು ಹೆಚ್ಚಳವಾಗಿದೆ. ಖಾನಾಪುರ ತಾಲೂಕಿನಲ್ಲಿ ಕಣಕುಂಬಿ ಹಾಗೂ ಜಾಂಬೋಟಿ ಅರಣ್ಯ ಪ್ರದೇಶದಲ್ಲೂ ಧಾರಾಕಾರ ಮಳೆ ಆಗುತ್ತಿರುವುದರಿಂದ ಮಲಪ್ರಭಾ ನದಿ ಮೂಲಕ 8504 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ.
ಜಲಾಶಯದಲ್ಲಿ 24 ಗಂಟೆಗಳ ಅವಧಿಯಲ್ಲಿ ಎರಡು ಅಡಿ ನೀರು ಹೆಚ್ಚಳವಾಗಿದೆ. ಒಟ್ಟು 2079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 2050 ಅಡಿ ನೀರು ಸಂಗ್ರಹಗೊಂಡಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಪಂಚಗಂಗಾ ನದಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವುದರಿಂದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಪಂಚಗಂಗಾ ನದಿ
ಅಪಾಯ ಮಟ್ಟ ಮೀರಿ ಹರಿಯುತ್ತಿದೆ.
32 ಅಡಿಗೂ ನೀರು ಹೆಚ್ಚಾಗಿದೆ. ಅಲ್ಲಿನ ಕೆಳ ಹಂತದ 52 ಸೇತುವೆಗಳು ಸಂಪೂರ್ಣ ಜಲಾವೃತ ಗೊಂಡಿವೆ. ಅನೇಕ ಗ್ರಾಮಗಳಿಗೆ ನೀರು ನುಗ್ಗಿದೆ. ನಿಪ್ಪಾಣಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಪ್ರವಾಹ ಭೀತಿ ಕಾಡುತ್ತಿದೆ. ಪಶ್ಚಿಮ ಘಟ್ಟಕ್ಕೆ ಹೊಂದಿ
ಕೊಂಡ ಕರ್ನಾಟಕದ ಅನೇಕ ಪ್ರದೇಶಗಳಲ್ಲಿ ಆತಂಕಕ್ಕೆಡೆ ಮಾಡಿಕೊಟ್ಟಿದೆ.
ರಸ್ತೆ ಮೇಲೆ ಗುಡ್ಡ ಕುಸಿತ: ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಬೆಳಗಾವಿ-ಗೋವಾ ಮಧ್ಯದಲ್ಲಿ ಗುಡ್ಡ ಕುಸಿತಗೊಂಡು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ. ಗೋವಾದ ಲೋಟೋರಿಯಮ್ ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತ ಗೊಂಡಿದ್ದರಿಂದ ರಸ್ತೆ ಮೇಲೆ ಮಣ್ಣು ಬಿದ್ದಿದೆ. ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿಬ್ಬಂದಿ ಮಣ್ಣು ತೆರವು ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.