PSI ಎಂದು ನಂಬಿಸಿ ಸ್ನೇಹ; ಹಣಕ್ಕೆ ಬೇಡಿಕೆ
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಫೋಟೋ ವೈರಲ್, ಬೆದರಿಕೆ
Team Udayavani, Aug 10, 2023, 11:05 PM IST
ಮಂಗಳೂರು: ತನ್ನನ್ನು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಎಂದು ನಂಬಿಸಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಸ್ನೇಹ ಮಾಡಿ, ಬಳಿಕ ಅತ್ಯಾಚಾರ ಎಸಗಿ, ಆಕೆಯ ಫೋಟೋ ತೆಗೆದು ಅದನ್ನು ವೈರಲ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇರಿಸಿದ ಆರೋಪಿಯನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿ. ಈತ ಬೀದಿ ನಾಟಕ ಕಲಾವಿದನಾಗಿದ್ದು, ನಾಟಕದ ಪೊಲೀಸ್ ಬಟ್ಟೆಯನ್ನು ಹೊಂದಿದ್ದು, ಆ ಮೂಲಕ ತಾನು ಪೊಲೀಸ್ ಅಧಿಕಾರಿ ಎಂದು ನಂಬಿಸಿದ್ದ.
ಯುವತಿಗೆ ಇನ್‌ಸ್ಟಾಗ್ರಾಂ ಮೂಲಕ ಯುಮನೂರನ ಪರಿಚಯವಾಗಿದ್ದು, ತಾನು ವಾಮಂಜೂರು ಪೊಲೀಸ್ ಸ್ಟೇಷನ್‌ನಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿರುವುದಾಗಿ ಯುವತಿಗೆ ನಂಬಿಸಿದ್ದಾನೆ. ಬಳಿಕ ಆಕೆಯ ಮನೆಯ ವರಿಗೆ ಕೆಲಸ ಮಾಡಿ ಕೊಡುವುದಾಗಿ ಹೇಳಿ ದಾಖಲಾತಿಗಳನ್ನು ಪಡೆದು ಕೊಂಡಿದ್ದ.
ಆಕೆಯನ್ನು ನಗರದ ದೇವಾಲಯ ವೊಂದರಲ್ಲಿ ಭೇಟಿಯಾಗಿದ್ದ. ಅನಂತರ ಆದೇ ವಾರದಲ್ಲಿ ತಣ್ಣೀರುಬಾವಿ ಬೀಚ್‌ಗೆ ಕರೆದುಕೊಂಡು ಹೋಗಿ ಆಕೆಯೊಂದಿಗೆ ಫೋಟೋ ತೆಗೆಸಿಕೊಂಡಿದ್ದ. ಅನಂತರ ಆ ಪೋಟೋವನ್ನು ವೈರಲ್ ಮಾಡು ವುದಾಗಿ ಹೆದರಿಸಿ, ಆಕೆಯನ್ನು ಬೆಂಗಳೂರಿಗೆ ಕರೆಯಿಸಿಕೊಂಡು ನೆಲಮಂಗಲದ ವಸತಿಗೃಹಕ್ಕೆ ಕರೆದು ಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.
1.5 ಲಕ್ಷ ರೂ. ಡಿಮಾಂಡ್
ಬಳಿಕ ಮೂಲ್ಕಿಯ ಕಿನ್ನಿಗೋಳಿಯಲ್ಲಿ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಅತ್ಯಾಚಾರವೆಸಗಿದ್ದ. ಇದೇ ವೇಳೆ ಆತ ಆಕೆಯ ಫೋಟೋಗಳನ್ನು ತೆಗೆದಿದ್ದು, ಯುವತಿಯ ಮನೆಯ ವರಿಗೆ, ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ. ಫೋಟೋಗಳನ್ನು ಡಿಲೀಟ್ ಮಾಡ ಬೇಕಾದರೆ 1.5 ಲಕ್ಷ ರೂ. ನೀಡಬೇಕು ಎಂದು ಡಿಮಾಂಡ್ ಮಾಡಿದ್ದ.
ನ್ಯಾಯಾಂಗ ಬಂಧನ
ಯುವತಿ ಈ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಆರೋಪಿ ಯಮನೂರನನ್ನು ಬಂಧಿಸಿ ನ್ಯಾಯಾ ಲಯಕ್ಕೆ ಹಾಜರುಪಡಿಸ ಲಾಗಿದೆ. ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಲೋಕೇಶ್ ಎ.ಸಿ. ಪ್ರಕರಣದ ತನಿಖೆ ಆರಂಭಿಸಿದ್ದಾರೆ.
ಆಯುಕ್ತರ ಮನವಿ
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು, ವಿದ್ಯಾರ್ಥಿನಿಯರನ್ನು ಪರಿಚಯಿಸಿಕೊಂಡು ಪ್ರೀತಿಯ ನಾಟಕವಾಡಿ ಅತ್ಯಾಚಾರವೆಸಗಿ ಮೋಸ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಇಂತಹ ಮೋಸದ ಜಾಲಗಳಿಗೆ ಹೆಣ್ಣು ಮಕ್ಕಳು ಬೀಳದಂತೆ ಪೋಷಕರು, ಜನಸಾಮಾನ್ಯರು ಮಕ್ಕಳ ಬಗ್ಗೆ ನಿಗಾ ವಹಿಸುವ ಆವಶ್ಯಕತೆ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.