ಬಳ್ಳಾರಿಗೂ ಸುಷ್ಮಾ ಸ್ವರಾಜ್‌ಗೂ ಅವಿನಾಭಾವ ನಂಟು
Team Udayavani, Aug 7, 2019, 5:57 AM IST
ಬಳ್ಳಾರಿ/ಬೆಂಗಳೂರು: ವಿದೇಶಾಂಗ ಖಾತೆ ಮಾಜಿ ಸಚಿವೆ ಸುಷ್ಮಾಸ್ವರಾಜ್ ಅವರಿಗೂ ಗಣಿಜಿಲ್ಲೆ ಬಳ್ಳಾರಿಗೂ ಅವಿನಾಭಾವ ನಂಟು. 1999ರಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವ ಗೊಂಡರೂ, ಸತತ 10 ವರ್ಷ ವರಮಹಾಲಕ್ಷ್ಮೀಪೂಜೆಗೆ ಆಗಮಿಸಿ ಇಲ್ಲಿಯ ಜನರೊಂದಿಗೆ ಬೆರೆಯುತ್ತಿದ್ದರು.
ಒಂದು ಕಾಲದಲ್ಲಿ ಗಣಿಗಾರಿಕೆಯಿಂದ ರಾಜ್ಯ-ರಾಷ್ಟ್ರದ ಗಮನ ಸೆಳೆದಿದ್ದ ಬಳ್ಳಾರಿ ಮೊದಲಿನಿಂದಲೂ ಕಾಂಗ್ರೆಸ್‌ನ ಭದ್ರಕೋಟೆ. ಇಲ್ಲಿ ಬಿಜೆಪಿ ಭದ್ರವಾಗಿ ನೆಲೆಯೂರುವಲ್ಲಿ ಸುಷ್ಮಾ ಅವರ ಕೊಡುಗೆಯೂ ಇದೆ ಎಂದರೆ ತಪ್ಪಲ್ಲ. ಸತತ ಐದು ದಶಕಗಳ ಕಾಲ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಳ್ಳಾರಿ ಲೋಕಸಭೆ ಕ್ಷೇತ್ರದಿಂದ 1999ರಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು. ಅವರ ವಿರುದ್ಧ ಬಿಜೆಪಿಯಿಂದ ಸುಷ್ಮಾ ಸ್ವರಾಜ್ ಕಣಕ್ಕಿಳಿದಿದ್ದರು. ಶಾಸಕ ಬಿ.ಶ್ರೀರಾಮುಲು ಸೇರಿ ಆಗತಾನೆ ರಾಜಕೀಯಕ್ಕೆ ಪ್ರವೇಶ ನೀಡಿದ್ದ ರೆಡ್ಡಿ ಸಹೋದರರು ಸುಷ್ಮಾ ಅವರ ಬೆನ್ನಿಗೆ ನಿಂತು ಜಿಲ್ಲಾದ್ಯಂತ ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪರಾಭವಗೊಂಡರೂ ಸೋನಿಯಾ ಅವರಿಗೆ ಸಾಕಷ್ಟು ಪೈಪೋಟಿ ನೀಡಿದ್ದರು. ಆದರೆ, ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಯಾಗಿ ನೆಲೆ ಕಂಡುಕೊಳ್ಳಲು ಕಾರಣರಾದರು. ಸೋನಿಯಾ-ಸುಷ್ಮಾ ಅವರ ಸ್ಪರ್ಧೆಯಿಂದಾಗಿ ದೇಶವೇ ಬಳ್ಳಾರಿಯತ್ತ ತಿರುಗಿ ನೋಡುವಂತಾಗಿತ್ತು.
1999ರ ಲೋಕಸಭೆ ಚುನಾವಣೆಯಲ್ಲಿ ಪರಭಾವಗೊಂಡರೂ ಬಳ್ಳಾರಿ ಜಿಲ್ಲೆಯಿಂದ ವಿಮುಖರಾಗದ ಸುಷ್ಮಾಸ್ವರಾಜ್ ಅವರು, ಪ್ರತಿವರ್ಷ ವರಮಹಾಲಕ್ಷ್ಮೀ ವ್ರತದಂದು ಜಿಲ್ಲೆಗೆ ಆಗಮಿಸುತ್ತಿದ್ದರು. ಜತೆಗೆ ಬಳ್ಳಾರಿ ನಗರದಲ್ಲಿ ರೆಡ್ಡಿ ಸಹೋದರರು ಬೃಹತ್ ಮಟ್ಟದಲ್ಲಿ ಆಯೋಜಿಸುತ್ತಿದ್ದ ಸಾಮೂಹಿಕ ವಿವಾಹಕ್ಕೆ ಆಗಮಿಸುತ್ತಿದ್ದ ಅವರು, ಇಲ್ಲಿನ ಖ್ಯಾತ ವೈದ್ಯರಾದ ಡಾ| ಬಿ.ಕೆ.ಶ್ರೀನಿವಾಸ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಹೀಗೆ ಸತತ 10 ವರ್ಷಗಳ ಕಾಲ ಆಗಮಿಸುವ ಮೂಲಕ ಬಳ್ಳಾರಿ ಜಿಲ್ಲೆಯೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಆದರೆ ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆ ಆರೋಪ ಹೊತ್ತ ಬಳಿಕ 2011ರಿಂದ ಜಿಲ್ಲೆಗೆ ಬರುವುದನ್ನು ನಿಲ್ಲಿಸಿದರು. ಜತೆಗೆ ರೆಡ್ಡಿ ಸಹೋದರರ ಸಂಪರ್ಕದಿಂದ ದೂರ ಉಳಿದರು.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ: 2010ರಲ್ಲಿ ರೆಡ್ಡಿ ಸಹೋದರರು ಆಯೋಜಿಸಿದ್ದ ಸಾಮೂಹಿಕ ವಿವಾಹಕ್ಕೆ ಆಗಮಿಸಿದ್ದ ಸುಷ್ಮಾ ಸ್ವರಾಜ್, ನಗರದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣದಲ್ಲಿ ಇದೀಗ ಅರ್ಧಕ್ಕೆ ನಿಂತಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಕ್ರೀಡಾಂಗಣವಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಅಲ್ಲದೆ, ಕೇಂದ್ರದಲ್ಲಿ ವಾರ್ತಾ ಸಚಿವರಾಗಿದ್ದಾಗ ಜಿಲ್ಲೆಗೆ ದೂರದರ್ಶನ ಮರುಪ್ರಸಾರ ಕೇಂದ್ರ, ಬಳ್ಳಾರಿ ನಗರದಲ್ಲಿ ಎಫ್‌ಎಂ ರೇಡಿಯೋ ಕೇಂದ್ರ ಆರಂಭಿಸಿದ್ದರು. ಆರೋಗ್ಯ ಸಚಿವರಾಗಿ ಬೃಹತ್ ಆರೋಗ್ಯ ಮೇಳವನ್ನು ನಡೆಸಿಕೊಟ್ಟಿದ್ದರು.ಸುಷ್ಮಾಸ್ವರಾಜ್ ಅವರು, ಶ್ರೀರಾಮುಲು ಮತ್ತು ಮಾಜಿ ಸಚಿವ ಜನಾರ್ದನರೆಡ್ಡಿ ಅವರನ್ನು ಸಹೋದರರು ಎಂದು ಕರೆಯುತ್ತಿದ್ದರೆ, ರೆಡ್ಡಿ ಸಹೋದರರು ಸುಷ್ಮಾಸ್ವರಾಜ್ ಅವರನ್ನು ನಮ್ಮ ತಾಯಿ ಎಂದು ಕರೆಯುತ್ತಿದ್ದರು. 2009ರ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಸಿರಗುಪ್ಪದಲ್ಲಿ ಮಾಜಿ ಜನಾರ್ದನರೆಡ್ಡಿಯವರು ಚುನಾವಣಾ ಪ್ರಚಾರ ಕಾರ್ಯ ಕ್ರಮದಲ್ಲಿ ‘ಸುಷ್ಮಾ ದೆಹಲಿಗೆ, ಸೋನಿಯಾ ಇಟಲಿಗೆ’ ಎಂದು ಹೇಳುವ ಮೂಲಕ ಸುಷ್ಮಾ ಅವರನ್ನು ಪ್ರಧಾನಿ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು.
ಅಂದಿನ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗಿಂತಲೂ ಜನಾರ್ದನರೆಡ್ಡಿ ಅವರ ಹೆಚ್ಚು ನಿಕಟವಾಗಿದ್ದರು. 2010ರಲ್ಲಿ ಜನಾರ್ದನ ರೆಡ್ಡಿ ಯಡಿಯೂರಪ್ಪ ಸರ್ಕಾರದ ಜೊತೆಗೆ ಮುನಿಸಿಕೊಂಡಾಗ ಸುಷ್ಮಾಸ್ವರಾಜ್ ಅವರೇ ಸಂಧಾನ ಮಾಡಿದ್ದರು. ಅವರ ಮಾತಿಗೆ ಮಣಿದ ರೆಡ್ಡಿ ಹೈದ್ರಾಬಾದ್‌ಗೆ ಕರೆದುಕೊಂಡು ಹೋದ ಎಲ್ಲಾ ಶಾಸಕರನ್ನು ವಾಪಸ್ ಕರೆದುಕೊಂಡು ಬಂದಿದ್ದರು.
ಕನ್ನಡ ಕಲಿತು ಮಾತನಾಡಿದ್ದರು
ಬಳ್ಳಾರಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತಿದ್ದ ಅವರು ಪ್ರಚಾರ ನಡೆಸಿದ್ದು ಕೇವಲ 12 ದಿನಗಳು. ಸಂದರ್ಭದಲ್ಲಿ ಅವರು ಕನ್ನಡವನ್ನು ಕಲಿತು ಚುನಾವಣಾ ಪ್ರಚಾರ ಭಾಷಣ ನಡೆಸಿದ್ದು ಅವರ ಹೆಗ್ಗಳಿಕೆ.
ಕೊಟ್ಟ ಮಾತು ತಪ್ಪಲಿಲ್ಲ
ಜನಾರ್ಧನ ರೆಡ್ಡಿ, ಮಾಜಿ ಸಚಿವ
1999ರಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿಯವರು ಕಣಕ್ಕಿಳಿದಿದ್ದ ಸಂದರ್ಭದಲ್ಲಿ ಬಿಜೆಪಿಯಿಂದ ಸುಷ್ಮಾ ಸ್ವರಾಜ್ ಸ್ಪರ್ಧಿಸಿದ್ದರು. ಅಷ್ಟು ಮಾತ್ರವಲ್ಲದೆ, ತಾವೇ ರಚಿಸಿದ್ದ ವಿದೇಶಿ ಎದುರು ಸ್ವದೇಶಿ ಎಂಬ ಸ್ಲೋಗನ್ ಅಡಿಯಲ್ಲಿ ಚುನಾವಣೆ ಎದುರಿಸಿದರು. 18 ದಿನಗಳ ಕಾಲ ಬಳ್ಳಾರಿಯಲ್ಲೇ ಇದ್ದು, ಅಂತಿಮವಾಗಿ ಸೋಲು ಕಂಡರೂ, ಅವರು ಧೃತಿಗೆಡಲಿಲ್ಲ.
ಚುನಾವಣೆ ಮುಗಿಸಿ ವಾಪಾಸ್ ಹೋಗುವ ಸಂದರ್ಭದಲ್ಲಿ ಜನಾರ್ಧನ್ ರೆಡ್ಡಿ ಹಾಗೂ ಶ್ರೀರಾಮು ಅವರು ಹೆಲಿಪ್ಯಾಡ್ ಹತ್ತಿರ ಅಳುತ್ತಿದ್ದನ್ನು ಕಂಡು ಹೆಲಿಕಾಪ್ಟರ್ ಹತ್ತಿದವರು ವಾಪಾಸ್ ಬಂದು ಅವರಿಬ್ಬರಲ್ಲೂ ಧೈರ್ಯ ತುಂಬಿದ್ದರು. ಅಷ್ಟು ಮಾತ್ರವಲ್ಲದೆ ಪ್ರತಿ ವರ್ಷ ಬಳ್ಳಾರಿಗೆ ಬರುವುದಾಗಿ ಮಾತು ಕೊಟ್ಟಿದ್ದರು.
ಅದರಂತೆ ಮುಂದಿನ 13 ವರ್ಷಗಳ ಕಾಲ ವರಮಹಾಲಕ್ಷ್ಮೀ ಪೂಜೆಯ ದಿನ ಬಳ್ಳಾರಿಗೆ ಬಂದು ಪೂಜೆ ನಡೆಸುತ್ತಿದ್ದರು. ಕೊಟ್ಟ ಮಾತನ್ನು ತಪ್ಪಿದವರಲ್ಲ. ಜನ್ಮ ಕೊಟ್ಟ ತಾಯಿಯ ನಂತರ ಪ್ರೀತಿ, ಮಮತೆ ಕೊಟ್ಟವರು ಸುಷ್ಮಾ ಸ್ವರಾಜ್, 13 ವರ್ಷ ನಮ್ಮ ಕುಟುಂಬದ ಒಡನಾಡ ಹೊಂದಿದ್ದರು.
ರಾಜಕೀಯದಲ್ಲಿದ್ದರೂ ರಾಜಕಾರಣಿಯಂತೆ ಇರಲಿಲ್ಲ. ಮಾನವೀಯತೆಯಲ್ಲಿ ದೇವರ ನಂತರದ ಸ್ಥಾನ ಪಡೆದವರಾಗಿದ್ದರು. ಮೋಸ, ಸುಳ್ಳು, ವಂಚನೆ ಇಲ್ಲದ ನಿರ್ಮಲ ಮನಸ್ಸು ಅವರದ್ದಾಗಿತ್ತು. ಅವರ ಹೋರಾಟ, ದೇಶಭಕ್ತಿ ಪ್ರೇರಣೆಯಾಗಿತ್ತು. ಅವರು ಇಂದು ನಮ್ಮೊಂದಿಗೆ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.