ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಬೆಳ್ಳಿ ಬಾಯಿ ನಿಧನ
Team Udayavani, Aug 29, 2020, 6:58 PM IST
ಕೋಟ : 2017ನೇ ಸಾಲಿನ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಬ್ರಹ್ಮಾವರ ತಾಲೂಕು ಯಡ್ತಾಡಿ ನಿವಾಸಿ ನಾಟಿ ವೈದ್ಯೆ ಬೆಳ್ಳಿ ಬಾಯಿ (87) ಅಸೌಖ್ಯದಿಂದ ಆ. 28ರಂದು ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪುತ್ರಿ, ಐವರು ಪುತ್ರರನ್ನು ಅಗಲಿದ್ದಾರೆ. ಇವರು ಐದಾರು ದಶಕಗಳ ಕಾಲ ಸ್ಥಳೀಯ ಪರಿಸರದಲ್ಲಿ ನಾಟಿ ವೈದ್ಯಯಾಗಿ ಸೇವೆ ಸಲ್ಲಿಸಿದ್ದು ಸುಮಾರು 500ಕ್ಕೂ ಅಧಿಕ ಹೆರಿಗೆಗಳನ್ನು ಮಾಡಿಸಿದ್ದರು ಮತ್ತು ಹಳ್ಳಿ ಮದ್ದುಗಳನ್ನು ನೀಡುವಲ್ಲಿ ಪ್ರಸಿದ್ಧರಾಗಿದ್ದರು.
ಮದುವೆ, ಇನ್ನಿತರ ಸಮಾರಂಭಗಳಲ್ಲಿ ಕುಡುಬಿ ಭಾಷೆಯ ಹಾಡುಗಳನ್ನು ಹಾಡುವ ಮೂಲಕ ಉತ್ತಮ ಜಾನಪದ ಕಲಾವಿದೆಯಾಗಿಯೂ ಗುರುತಿಸಿಕೊಂಡಿದ್ದರು. ರಾಜ್ಯ ಪ್ರಶಸ್ತಿಯ ಜತೆಗೆ ಸ್ಥಳೀಯ ಹಲವಾರು ಸಂಘ-ಸಂಸ್ಥೆಗಳು ಇವರನ್ನು ಗುರುತಿಸಿ ಗೌರವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.