Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು
ಕರ್ನಾಟಕ ಕಂದಾಯ ಕಾಯ್ದೆ ತಿದ್ದುಪಡಿ ವಿಧೇಯಕ ಮತ್ತೆ ವಾಪಸ್ ಮಾಡಿದ ರಾಜ್ಯಪಾಲರು
Team Udayavani, Sep 9, 2024, 10:10 PM IST
ಬೆಂಗಳೂರು: ಸರ್ಕಾರ ಹಾಗೂ ರಾಜಭವನದ ಮಧ್ಯೆ ಸೃಷ್ಟಿಯಾಗಿದ್ದ ಭಿನ್ನಸ್ವರ ಕೊಂಚ ಶಮನಗೊಂಡಿರುವ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದ್ದು, ಈ ಹಿಂದೆ ವಾಪಸ್ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ನಿಯಂತ್ರಣ ವಿಧೇಯಕ, ರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪೌರಾಡಳಿತ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಈ ಸಂಬಂಧ ಕಳೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ಸ್ಪಷ್ಟೀಕರಣದೊಂದಿಗೆ ವಿಧೇಯಕಗಳನ್ನು ರಾಜ್ಯಪಾಲರಿಗೆ ವಾಪಸ್ ಕಳುಹಿಸಲಾಗಿತ್ತು.
ರಾಜ್ಯ ಸರ್ಕಾರ ಕಳುಹಿಸಿದ್ದ ಒಟ್ಟು 11 ವಿಧೇಯಕಗಳಿಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡುವುದಕ್ಕಿಂತ ಪೂರ್ವದಲ್ಲಿಯೇ ಕೆಲ ವಿಧೇಯಕಗಳನ್ನು ವಾಪಸ್ ಕಳುಹಿಸಲಾಗಿತ್ತು. ಇದಾದ ಬಳಿಕ ರಾಜ್ಯಪಾಲರಿಗೆ 2 ಸಲಹೆಗಳನ್ನು ಕಳುಹಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಈ ಎಲ್ಲ ಹೊಯ್ದಾಟದ ಮಧ್ಯೆಯೇ ಮುಖ್ಯಮಂತ್ರಿಗಳ ಸಲಹೆಗಾರರ ನೇಮಕಕ್ಕೆ ಸಂಬಂಧಪಟ್ಟಂತೆ ‘ಲಾಭದಾಯಕ ಹುದ್ದೆ’ ಕಾಯಿದೆಗೆ ತಿದ್ದುಪಡಿ ಮಾಡಿ ಕಳುಹಿಸಿದ ವಿಧೇಯಕವನ್ನೂ ರಾಜ್ಯಪಾಲರು ವಾಪಸ್ ಕಳುಹಿಸಿದ್ದರು.
ಈ 3 ವಿಧೇಯಕಗಳಿಗೆ ಒಪ್ಪಿಗೆ ಸೂಚಿಸಿರುವ ರಾಜ್ಯಪಾಲರು ಕರ್ನಾಟಕ ಕಂದಾಯ ಕಾಯಿದೆ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಪಟ್ಟಂತೆ ಕೆಲ ಪ್ರಶ್ನೆಗಳನ್ನು ಎತ್ತಿ ಕಡತ ವಾಪಸ್ ಕಳುಹಿಸಿದ್ದಾರೆ. ಇದು ಸಚಿವ ಕೃಷ್ಣಬೈರೇಗೌಡ ಅವರ ಆಕ್ರೋಶಕ್ಕೆ ಕಾರಣವಾಗಿದ್ದು,’ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತಂದ ವಿಧೇಯಕವನ್ನು ಬಿಜೆಪಿ ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ’ ಎಂದು ಟೀಕಿಸಿದ್ದಾರೆ.
ಯಾವಾಗ ಮಂಡನೆ?:
ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ 2023ರ ಡಿಸೆಂಬರ್ 6ರಂದು ವಿಧಾನಸಭೆಯಲ್ಲಿ ಮಂಡನೆಯಾಗಿ, ಡಿ.13ರಂದು ಅಂಗೀಕಾರಗೊಂಡಿತ್ತು. ಬಳಿಕ ಡಿ.14ರಂದು ವಿಧಾನ ಪರಿಷತ್‌ನಲ್ಲೂ ಅಂಗೀಕಾರವಾಗಿ ರಾಜ್ಯಪಾಲರ ಸಹಿಗೆ ಕಳಿಸಿಕೊಡಲಾಗಿತ್ತು.
ವಿಧೇಯಕ ಕರಡು ತಯಾರಿ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಮುಖ್ಯಮಂತ್ರಿಯವರ ಅಭಿಪ್ರಾಯ, ಕಾನೂನು ಇಲಾಖೆ ಪ್ರಸ್ತಾಪ ಯಾವುದನ್ನೂ ಗಮನಿಸಿದೇ ಗೃಹ ಇಲಾಖೆ ತರಾತುರಿಯಲ್ಲಿ ವಿಧೇಯಕ ಮಂಡಿಸಿದ್ದನ್ನು ರಾಜ್ಯಪಾಲರು ಗಮನಿಸಿ ಸ್ಪಷ್ಟನೆ ಕೇಳಿದ್ದರು. ಈ ವಿಧೇಯಕದ ವ್ಯಾಪ್ತಿ ಸಾಕಷ್ಟು ವಿಸ್ತಾರವಾಗಿರುವುದರಿಂದ ಸ್ವಾಯತ್ತ ಸಂಸ್ಥೆಗಳು, ಪ್ರಾಧಿಕಾರಿಗಳು, ಮಂಡಳಿಗಳು ಅಥವಾ ನಿಗಮಗಳ ಅಭಿಪ್ರಾಯ ಪಡೆಯಬೇಕಾಗುತ್ತದೆ ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ತನ್ನ ಟಿಪ್ಪಣಿಯಲ್ಲಿ ಉಲ್ಲೇಖೀಸಿತ್ತು. ಆದರೆ, ಅಭಿಪ್ರಾಯ ಪಡೆದಿರಲಿಲ್ಲ ಎಂಬ ಅಂಶವನ್ನು ರಾಜಭವನ ಗುರುತಿಸಿತ್ತು.
ರಾಜ್ಯ ಸರ್ಕಾರ ನಡೆಸುವ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುಚಿತ, ಭ್ರಷ್ಟ ವರ್ತನೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ, ಪರಿಣಾಮಕಾರಿ ಕ್ರಮಕೈಗೊಳ್ಳಲು ಈ ವಿಧೇಯಕ ಅಸ್ತ್ರವಾಗಿ ಬಳಕೆಯಾಗುವುದರಿಂದ ಇದು ಮಹತ್ವವಾಗಿದ್ದು, ಪೂರ್ವ ತಯಾರಿ ನಡೆದಿಲ್ಲ ಎಂಬುದು ರಾಜಭವನದ ಆಕ್ಷೇಪವಾಗಿತ್ತು.
ಅದೇ ರೀತಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಹುಮಹಡಿ ಕಟ್ಟಡದಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ಮಹಡಿ ಕಟ್ಟಿಕೊಳ್ಳಲು ಅನುಮತಿ ನೀಡುವ ಮೂಲಕ ಬೊಕ್ಕಸ ಭರ್ತಿಗೆ ಯೋಜಿಸಿ ರೂಪಿಸಿದ್ದ ವಿಧೇಯಕಕ್ಕೆ ರಾಜ್ಯಪಾಲರು ತಡೆ ಹಾಕಿದ್ದಾರೆ. ಅಕ್ರಮ-ಸಕ್ರಮವನ್ನು ಬೇರೆ ರೂಪದಲ್ಲಿ ತಂದಿದ್ದೀರಿ, ನಗರದಲ್ಲಿ ಈಗಾಗಲೇ ಮೂಲ ಸೌಕರ್ಯದ ಕೊರತೆ ಇದ್ದು, ಇಂತಹ ತೀರ್ಮಾನ ಮುಂದೆ ಸಮಸ್ಯೆಗೆ ಕಾರಣವಾಗುತ್ತದೆ ಎಂದು ರಾಜಭವನ ಅಪಸ್ವರ ಎತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.