![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 8, 2023, 12:40 AM IST
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಸಂಬಂಧಿಸಿ ಪೂರ್ವಭಾವಿ ಸಭೆಯು ನಗರದ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಸೆ. 6ರಂದು ನಡೆಯಿತು.
ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಮೊತ್ತಮೊದಲ ಬಾರಿಗೆ ನಡೆಯಲಿರುವ ಕಂಬಳವು ಅನೇಕ ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ತುಳುನಾಡಿನ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು. ಸಭೆಯಲ್ಲಿ ಬೆಂಗಳೂರಿನಲ್ಲಿರುವ 40ಕ್ಕೂ ಮಿಕ್ಕಿದ ತುಳು ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇರುವ ಕಾರಣ ಅಗತ್ಯ ವ್ಯವಸ್ಥೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ದಕ್ಷಿಣ ಕನ್ನಡಿಗರ ಸಂಘದ ಅಧ್ಯಕ್ಷ ಡಾ| ಕೆ. ಸಿ. ಬಲ್ಲಾಳ್, ದ.ಕ. ವಿಶ್ವಬ್ರಾಹ್ಮಣರ ಸಂಘದ ಅಧ್ಯಕ್ಷ ತುಕಾರಾಂ ಆಚಾರ್ಯ, ಬೆಂಗಳೂರು ಬಂಟರ ಸಂಘದ ಉಪಾಧ್ಯಕ್ಷ ಡಾ| ಜಗದೀಶ್, ಬೆಂಗಳೂರು ಬಿಲ್ಲವ ಸಂಘ ಯೂತ್ ವಿಂಗ್ ಅಧ್ಯಕ್ಷ ಶಿವು ಸಾಲ್ಯಾನ್, ಜಿಎಸ್‌ಬಿ ಸಂಘದ ಅಧ್ಯಕ್ಷ ದಿನಕರ ಕಾಮತ್, ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ ಚಂಡ್ಲ, ಸ್ಥಳೀಯ ಕಾರ್ಪೊರೇಟರ್‌ಗಳಾದ ರಾಜೇಂದ್ರ ಕುಮಾರ್ ಸಂಪತ್, ಉಮೇಶ್ ಶೆಟ್ಟಿ, ಮಾಜಿ ಡೆಪ್ಯುಟಿ ಮೇಯರ್ ಹರೀಶ್ ಎಸ್. ಸಹಿತ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರರಾಜ್ ಸ್ವಾಗತಿಸಿ, ಕಾರ್ಯದರ್ಶಿ ಅಜಿತ್ ಹೆಗ್ಡೆ ವಂದಿಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.