Bidar: 16 ಬಂಗಾರದ ಪದಕ- ಚಿನ್ನದ ಬೆಳೆ ತೆಗೆದ ಕೃಷಿಕನ ಪುತ್ರ!

ರಾಘವೇಶ್‌ ಅವರ ಅಕ್ಕ ಹರ್ಷಿಕಾ ನರ್ಸ್‌ ಆಗಿದ್ದಾರೆ.

Team Udayavani, Oct 17, 2023, 5:34 PM IST

Bidar: 16 ಬಂಗಾರದ ಪದಕ- ಚಿನ್ನದ ಬೆಳೆ ತೆಗೆದ ಕೃಷಿಕನ ಪುತ್ರ!

ಬೀದರ: ಅಪ್ಪಟ ಗ್ರಾಮೀಣ ಪ್ರತಿಭೆ, ಕೃಷಿಕನ ಮಗ ಈ ಬಾರಿಯ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿ ಘಟಿಕೋತ್ಸವದಲ್ಲಿ ಗರಿಷ್ಠ ಚಿನ್ನದ ಪದಕ ಬಾಚಿಕೊಳ್ಳುವ ಮೂಲಕ ಎಲ್ಲರೂ ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾರೆ. ಭವಿಷ್ಯದಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ರೈತರಿಗೆ ನೆರವಾಗುವ ಆಶಯ ಹೊಂದಿದ್ದಾರೆ.

ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ರಾಘವೇಶ್‌ ಎ.ಎನ್‌ ತಮ್ಮ ಸಾಧನೆಯ ಹೊಂಬೆಳಕಿನಲ್ಲಿ ಚಿನ್ನಕ್ಕೆ ಮುತ್ತಿಟ್ಟವರು. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವಸರದಹಳ್ಳಿ ಗ್ರಾಮದ ರಾಘವೇಶ್‌, 2021-22ನೇ ಸಾಲಿನ ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಆ್ಯಂಡ್‌ ಆ್ಯನಿಮಲ್‌ ಹಸ್ಬೆಂ ಡರಿ (ಬಿವಿಎಸ್‌ಸಿ ಮತ್ತು ಎಎಚ್‌) ಸ್ನಾತಕ ಪದವಿಯ ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ.

ರಾಘವೇಶ್‌ ಅವರ ಅಕ್ಕ ಹರ್ಷಿಕಾ ನರ್ಸ್‌ ಆಗಿದ್ದಾರೆ. ಕೃಷಿಕರಾಗಿರುವ ತಂದೆ ನಾಗರಾಜು ಮತ್ತು ಗೃಹಿಣಿಯಾಗಿರುವ ತಾಯಿ ನಾಗಮ್ಮ ಅವರು ಮಕ್ಕಳ ಪ್ರತಿಭೆಗೆ ನೀರೆರೆದಿದ್ದಾರೆ. ಸದ್ಯ ಉತ್ತರ ಪ್ರದೇಶದ ರಾಯ್‌ ಬರೇಲಿಯ ಐವಿಆರ್‌ಐನಲ್ಲಿ ಸ್ನಾತಕೋತ್ತರ
ವೈರಾಣುಶಾಸ್ತ್ರ ಕೋರ್ಸ್‌ ಪದವಿ ಅಧ್ಯಯನ ಮಾಡುತ್ತಿದ್ದು, ಮುಂದೆ ಎಂಎಸ್‌ (ಕೃಷಿ ಸಂಶೋಧನಾ ವಿಜ್ಞಾನ) ಆಗುವ ಕನಸು ಕಟ್ಟಿಕೊಂಡಿದ್ದಾರೆ.

ಸೋಮವಾರ ನಡೆದ 13ನೇ ಘಟಿಕೋತ್ಸದಲ್ಲಿ ವಿವಿ ಕುಲಪತಿಗಳಾದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಮತ್ತು ಪಶು ಸಂಗೋಪನಾ ಸಚಿವ ವೆಂಕಟೇಶ್‌ ಅವರಿಂದ ಚಿನ್ನದ ಪದಕ ಮತ್ತು ಪದವಿ ಸ್ವೀಕರಿಸಿ ಯುವಜನತೆಗೆ‌ ಪ್ರೇರಣೆಯಾಗಿ ಗಮನ ಸೆಳೆದರು.

ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ್ದರಿಂದ ರಾಘವೇಶ್‌ ಅವರಿಗೆ ಎಂಬಿಬಿಎಸ್‌ ಮಾಡಿ, ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಬೇಕೆಂಬ ಬಯಕೆ ಇತ್ತು. ಆದರೆ, ತಂದೆಗೆ ತನ್ನ ಮಗ ಕೃಷಿ ವಿಜ್ಞಾನಿಯಾಗಿ ರೈತರಿಗೆ ಕೊಡುಗೆ ನೀಡಬೇಕೆಂಬುದು ಮತ್ತು
ವೈದ್ಯಕೀಯ ಸೀಟು ಸಿಗದೇ ಇರುವುದಕ್ಕೆ ಪಶು ವೈದ್ಯಕೀಯದತ್ತ ಮುಖ ಮಾಡಿ, ಇಂದು ಉತ್ತಮ ಫಸಲು ತೆಗೆದಿದ್ದಾರೆ.

ಆ ಮೂಲಕ ತಂದೆಯ ಆಸೆಯನ್ನು ಈಡೇರಿಸುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. ಐವಿಆರ್‌ಐನಲ್ಲಿ ಪಿಜಿ ಕೋರ್ಸ್‌ ಮುಗಿಸಿ ಮುಂದೆ ಸಂಶೋಧನಾ ಕ್ಷೇತ್ರದಲ್ಲಿ ಹೊಸತನ ಸಾಧಿಸುವ ಕನಸು ಹೊತ್ತಿದ್ದೇನೆ. ಬಡತನದ ಮಧ್ಯೆಯೂ ಉನ್ನತ ಶಿಕ್ಷಣ ಕೊಡಿಸಿರುವ ಅಪ್ಪನಂಥ ರೈತ ವರ್ಗದವರ ಕಲ್ಯಾಣಕ್ಕೆ ಜೀವನ ಮುಡುಪಾಗಿಡುತ್ತೇನೆ. ನನ್ನೆಲ್ಲ ಆಶಯಗಳಿಗೆ ತಂದೆ-ತಾಯಿ ಬೆನ್ನಲು ಬಾಗಿ ನಿಂತಿದ್ದಾರೆ. ಗುರುಗಳು ನನ್ನ ಕಲಿಕೆಗೆ ಮಾರ್ಗದರ್ಶನ ಮಾಡಿದ್ದಾರೆ. ಇದರಿಂದ ಈ ಸಾಧನೆ ಸಾಧ್ಯವಾಯಿತು ಎನ್ನುತ್ತಾರೆ ರಾಘವೇಶ್‌.

ಸಚಿನ್‌ ಮುಡಿಗೇರಿದ ಐದು ಚಿನ್ನ

ಕೃಷಿ ಕುಟುಂಬದ ಬೆಳಗಾವಿ ಜಿಲ್ಲೆ ಕುನ್ನಾಳ ಗ್ರಾಮದ ಸಚಿನ್‌ ಹುದ್ದಾರ್‌ ಸಹ ಬಿವಿಎಸ್‌ಸಿ ಮತ್ತು ಎಎಚ್‌ ಸ್ನಾತಕ ಪದವಿಯಲ್ಲಿ 5 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಬೀದರ ಪಶು ವೈದ್ಯಕೀಯ ಮಹಾವಿದ್ಯಾಲಯದ ಸಚಿನ್‌ ಸ್ನಾತಕೋತ್ತರ ಪದವಿಗಾಗಿ ತಯಾರಿ ನಡೆಸುತ್ತಿದ್ದಾರೆ.

ವೆಟರ್ನರಿ ಸರ್ಜರಿ ಮತ್ತು ರೆಡಿಯಾಲಜಿಯಲ್ಲಿ ಪದವಿ ಪಡೆದು ಭವಿಷ್ಯದಲ್ಲಿ ವಿಜ್ಞಾನಿಯಾಗುವುದು ಅಥವಾ ಭಾರತೀಯ ಆಡಳಿತ ಸೇವೆ ಮೂಲಕ ಜನರ ಸೇವೆ ಮಾಡುವ ಆಶಯ ಹೊಂದಿದ್ದಾರೆ. ಧಾರವಾಡದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.92 ಮತ್ತು ಪಿಯುಸಿಯಲ್ಲಿ ಶೇ.96 ಅಂಕ ಗಳಿಸಿದ್ದ ಸಚಿನ್‌ ತಮ್ಮ ಹೆತ್ತವರ ಬಯಕೆಯಂತೆ ಪಶು ವಿಜ್ಞಾನ ಶಿಕ್ಷಣ ಪಡೆದಿದ್ದಾರೆ. ಈಗ ಸ್ನಾತಕ ಪದವಿಯಲ್ಲಿ 8.319 ಅಂಕ ಪಡೆದು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಚಿನ್ನದ ಪದಕ ಬರುವ ನಿರೀಕ್ಷೆ ಇತ್ತು. ಆದರೆ, 16 ಪದಕ ಸಿಗುತ್ತವೆ ಎಂದುಕೊಂಡಿರಲಿಲ್ಲ. ನನ್ನ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ಬಹಳ ಖುಷಿ ತಂದಿದೆ. ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಓದಿಗೆ ಪೂರಕವಾದ ವಾತಾವರಣ ಇತ್ತು. ನನ್ನ ಪರಿಶ್ರಮದ ಹಿಂದೆ ಪಾಲಕರು, ಗುರುವೃಂದದ ಪಾತ್ರ ಇದೆ. ಅಂಕಗಳಿಕೆಗಾಗಿ ಎಂದೂ ಓದದೇ ಆತ್ಮತೃಪ್ತಿಗಾಗಿ ಓದಿದರೆ ಪದಕಗಳು ಹುಡುಕಿಕೊಂಡು ಬರುತ್ತವೆ ಎಂಬುದಕ್ಕೆ ನಾನೇ ಸಾಕ್ಷಿ.
ರಾಘವೇಶ್‌, ಎ.ಎನ್‌., 16 ಚಿನ್ನದ ಪದಕ ಪಡೆದ ವಿದ್ಯಾರ್ಥಿ

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.