ಬೀದರ್: ಕೋವಿಡ್ ಸೋಂಕಿಗೆ ವೃದ್ಧ ಬಲಿ
Team Udayavani, Jun 26, 2020, 8:50 PM IST
ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಜನರ ಜೀವ ಹಿಂಡುತ್ತಿರುವ ರಕ್ಕಸ ಕೋವಿಡ್ 19 ಸೋಂಕು ಶುಕ್ರವಾರದ ಮಟ್ಟಿಗೆ ಕೊಂಚ ತಗ್ಗಿದ್ದರೂ ವೃದ್ಧ ರೋಗಿಯನ್ನು ಬಲಿ ತೆಗೆದುಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 16ಕ್ಕೇರಿಕೆಯಾಗಿದೆ.
ಚಿಟಗುಪ್ಪ ಪಟ್ಟಣದ ಹುಸೇನಿ ಆಲಂ ಗಲ್ಲಿಯ 71 ವರ್ಷದ ವೃದ್ಧ (ಪಿ 10684) ಜೂ. 23ರಂದು ಕೆಮ್ಮು, ಉಸಿರಾಟದ ತೊಂದರೆ ಹಿನ್ನೆಲೆ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡುವಷ್ಟರಲ್ಲಿ ಮೃತಪಟ್ಟಿದ್ದರು. ಮೃತ ವೃದ್ಧನ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಶುಕ್ರವಾರ ಬಂದ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಕೋವಿಡ್ ನಿಯಮದ ಪ್ರಕಾರ ಭಾಲ್ಕಿ ಪಟ್ಟಣದಲ್ಲಿ ವೃದ್ಧನ ಶವ ಸಂಸ್ಕಾರ ನೆರವೇರಿಸಲಾಗಿತ್ತು.
ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 538ಕ್ಕೆ ಏರಿಕೆ ಆಗಿದೆ. ಅದರಲ್ಲಿ 16 ಜನ ಸಾವನ್ನಪ್ಪಿದ್ದರೆ 396 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 126 ಸಕ್ರೀಯ ಪ್ರಕರಣಗಳಿವೆ. ಒಟ್ಟು ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
1237 ಜನರ ವರದಿ ಬಾಕಿ: ಬೀದರ ಜಿಲ್ಲೆಯಲ್ಲಿ ಕೋವಿಡ್ ಶಂಕಿತ 1237 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಈವರೆಗೆ 36,482 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 34,707 ಮಂದಿಯದ್ದು ನೆಗೆಟಿವ್ ಬಂದಿದೆ. ಸೋಂಕಿತರ ಪ್ರಥಮ ಸಂಪರ್ಕಿತ 5309 ಮತ್ತು ದ್ವಿತೀಯ ಸಂಪರ್ಕಿತ 6417 ಜನರನ್ನು ಗುರುತಿಸಲಾಗಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.