ಬೀದರ್ ನಲ್ಲಿ 77 ಕೋವಿಡ್ ಪಾಸಿಟಿವ್ ಕೇಸ್ ಪತ್ತೆ! ಸೋಂಕಿತರ ಸಂಖ್ಯೆ 5823ಕ್ಕೆ ಏರಿಕೆ
Team Udayavani, Sep 20, 2020, 7:52 PM IST
ಬೀದರ್ : ಗಡಿ ನಾಡು ಬೀದರ್ ನಲ್ಲಿ ರವಿವಾರ 77 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 5823ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಒಟ್ಟು 149 ಸೋಂಕಿತರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರವಿವಾರ ಜಿಲ್ಲೆಯಲ್ಲಿ 51 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಈವರೆಗೆ ಒಟ್ಟು 5124 ಜನರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಇನ್ನೂ 546 ಸೋಂಕಿತರು ಬ್ರಿಮ್ಸ್ ಆಸ್ಪತ್ರೆ ಮತ್ತು ವಿವಿಧ ಕೊರೊನಾ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.