ಬೀದರ್: ಕೇಂದ್ರ ಸರ್ಕಾರದಿಂದ SC,ST ವರ್ಗಗಳ ಕಡೆಗಣನೆ ಆರೋಪಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

Team Udayavani, Feb 14, 2020, 12:58 PM IST

beedar

ಬೀದರ್: ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಬಡವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ವಿರೋಧಿ ನಿಲುವು ಪಾಲಿಸುತ್ತಿದೆ ಎಂದು ಕಿಡಿಕಾರಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಈಶ್ವರ ಖಂಡ್ರೆ, ಕೇಂದ್ರ ಸರ್ಕಾರ ಸಂವಿಧಾನದ ವಿರುದ್ಧ ನೀತಿಗಳನ್ನು ಜಾರಿಗೆ ತರುವ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತಿದೆ. ಹಿಟ್ಲರ್ ಧೋರಣೆ ಸರ್ಕಾರದ ಐಡಿಯಾಲಜಿ ಆಗಿದ್ದು, ವಿರೋಧ ಪಕ್ಷದವರ ಧ್ವನಿ ಅಡಗಿಸುವ ಕೃತ್ಯಕ್ಕೆ ಮುಂದಾಗಿದೆ. ದೇಶದಲ್ಲಿ ಒಡೆದಾಳುವ ಸರ್ಕಾರ ಈ ನೀತಿ ಎಂದಿಗೂ ಫಲಿಸದು, ದೆಹಲಿಯಲ್ಲಿ ಚುನಾವಣೆ ಬಿಜೆಪಿ ತಕ್ಕ ಪಾಠವಾಗಿದೆ ಎಂದು ಹೇಳಿದರು.

ಸರ್ಕಾರಿ ಸೇವೆಯಲ್ಲಿ ಎಸ್.ಸಿ- ಎಸ್‌ಟಿ, ಹಿಂದುಳಿದ ವರ್ಗದವರ ನೇರ ನೇಮಕಾತಿ ಮತ್ತು ಬಡ್ತಿಯಲ್ಲಿ ಮೀಸಲಾತಿ ಸಂವಿಧಾನದ ಮೂಲಭೂತ ಹಕ್ಕು ಆಗಿದೆ. ಆದರೆ, ಸುಪ್ರೀಂ ಕೋರ್ಟ್ ಇದು ಮೂಲಭೂತ ಹಕ್ಕಲ್ಲ, ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಷಯ ಎಂದು ಹೇಳಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರ ಸಮರ್ಥವಾದ ಮಂಡನೆ ಮಾಡದಿರುವುದು ಇಂಥ ತೀರ್ಪು ಹೊರಬೀಳು ಕಾರಣವಾಗಿದೆ. ಕೂಡಲೇ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿ, ಸಾಮಾಜಿಕ ನ್ಯಾಯಕ್ಕೆ ಆಗಿರುವ ಧಕ್ಕೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಎಸ್.ಸಿ-ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ನಿಲುವು ಅನುಸರಿಸುತ್ತಿದೆ. ಈ ವರ್ಗಕ್ಕೆ ಸಂವಿಧಾನದ ಕಲಂ 16 ರ ಅಡಿಯಲ್ಲಿ ಕೊಡಲಾದ ಸರ್ಕಾರಿ ಸೇವೆಯ ನೇರ ನೇಮಕಾತಿ ಹಾಗೂ ಬಡ್ತಿ ಮೀಸಲಾತಿ ಹಕ್ಕನ್ನು ಉಳಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ, ಚಂದ್ರಶೇಖರ ಪಾಟೀಲ, ಜಿ.ಪಂ ಅಧ್ಯಕ್ಷೆ ಗೀತಾ ಚಿದ್ರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ದತ್ತು ಮೂಲಗೆ, ಇರ್ಷಾದ್ ಪೈಲ್ವಾನ್, ಅಮೃತರಾವ ಚಿಮಕೋಡೆ, ಪಂಡಿತ ಚಿದ್ರಿ, ಮೀನಾಕ್ಷಿ ಸಂಗ್ರಾಮ್, ಬಕ್ಕಪ್ಪ ಕೋಟೆ, ಶಿವರಾಜ ಹಸನಕರ್ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.