ಇಂದು ಬೃಹತ್ ಜನಸ್ಪಂದನ- 10 ಸಾವಿರ ಜನರಿಗೆ ವ್ಯವಸ್ಥೆ , ಇಡೀ ದಿನ ಅಹವಾಲು ಆಲಿಸಲಿರುವ ಸಿಎಂ
Team Udayavani, Feb 8, 2024, 12:44 AM IST
ಬೆಂಗಳೂರು: ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ನಡೆಸುವುದಾಗಿ ಘೋಷಿಸಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಗುರುವಾರ ವಿಧಾನಸೌಧದ ಮೆಟ್ಟಿಲುಗಳ ಬಳಿ ರಾಜ್ಯಮಟ್ಟದ ಬೃಹತ್ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಇದು ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಮೊದಲ ಜನಸ್ಪಂದನ.
ನ. 27ರಂದು ಗೃಹಕಚೇರಿ “ಕೃಷ್ಣಾ’ದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದ ಸಿಎಂ, ಐಪಿಜಿಆರ್‌ಎಸ್ ತಂತ್ರಾಂಶದ ಮೂಲಕ 2,862, ನೇರ ವಾಗಿ 950 ಸಹಿತ ಒಟ್ಟು 4,030 ಅರ್ಜಿಗಳನ್ನು ಸ್ವೀಕರಿಸಿದ್ದರು. ಈ ಪೈಕಿ 3,738 ಅರ್ಜಿಗಳು ವಿಲೇವಾರಿ ಆಗಿವೆ. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಸ್ಯೆಗಳನ್ನು ಹೊತ್ತು ಬಂದಿದ್ದರಿಂದ ಗೃಹ ಕಚೇರಿ ಆವರಣದಲ್ಲಿ ಸ್ಥಳಾಭಾವ ಎದುರಾಗಿತ್ತು. ಆದ್ದರಿಂದ ಈ ಬಾರಿ ವಿಧಾನಸೌಧದ ಆವರಣದಲ್ಲಿ ನಡೆಸಲಾಗುತ್ತಿದೆ.
ಇಲಾಖಾವಾರು ಕೌಂಟರ್ ಆರಂಭ
ಫೆ. 8ರ ಬೆಳಗ್ಗೆ 10.30ರಿಂದ ಸಂಜೆ 5ರ ವರೆಗೂ ಜನಸ್ಪಂದನ ನಡೆಯಲಿದೆ. ಅದಕ್ಕಾಗಿ ವಿಧಾನಸೌಧ ಆವರಣದಲ್ಲಿ ಟೆಂಟ್‌ಗಳನ್ನು ನಿರ್ಮಿಸಲಾಗಿದ್ದು, ಇಲಾಖಾವಾರು ಕೌಂಟರ್‌ಗಳನ್ನು ತೆರೆಯಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರ ಮನವಿ ಸ್ವೀಕರಿಸಲಾಗುತ್ತದೆ. ಅದಕ್ಕಾಗಿ ಇಲಾಖಾವಾರು ಅಧಿಕಾರಿಗಳನ್ನೂ ನಿಯೋಜಿಸ ಲಾಗಿದೆ. ಜನರು ಹೆಚ್ಚಿದ್ದರೆ ರಾತ್ರಿಯವರೆಗೂ ಜನ ಸ್ಪಂದನ ಮುಂದುವರಿಯುವ ಸಾಧ್ಯತೆಗಳಿವೆ.
ಸಾರ್ವಜನಿಕರಿಗೆ ಮಾಹಿತಿ ಕೇಂದ್ರ
ಜನಸ್ಪಂದನ ಸ್ಥಳದಲ್ಲಿ ಎಲ್ಲ ಇಲಾಖೆಗಳ ಸ್ಟಾಲ್‌ಗಳನ್ನು ತೆರೆಯಲಾಗಿದೆ. ಪ್ರತಿ ಸ್ಟಾಲ್‌ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾ ದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮ ಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್‌ಗೆಂದು ನಿರ್ದೇಶಿಸಿ ಕಳಿಸಬೇಕು. ಸಾರ್ವಜನಿಕರ ದೂರುಗಳನ್ನು ಹೀಗೆ ವಿಂಗಡಿಸಲು ಅನುಭವಿ ಅಧಿಕಾರಿ-ಸಿಬಂದಿಯ ವಿಚಾರಣ ಕೌಂಟರ್ ತೆರೆಯಲಾಗಿದೆ. ಅಲ್ಲಿ ನಾಗರಿಕರ ಮೊಬೈಲ್ ನಂಬರ್ ಸಹಿತ ಪ್ರಾಥಮಿಕ ವಿವರ, ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು.
ಬಿಎಂಟಿಸಿಯಿಂದ ಉಚಿತ ಸೇವೆ
ಜನಸ್ಪಂದನ ಕಾರ್ಯಕ್ರಮಕ್ಕಾಗಿ ಮೆಜೆಸ್ಟಿಕ್‌ನಿಂದ ವಿಧಾನಸೌಧಕ್ಕೆ ಬರುವ ಸಾರ್ವಜನಿಕರಿಗೆ ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಜನತಾದರ್ಶನದ ಸ್ಥಳದಲ್ಲಿ 5-10 ಸಾವಿರ ಜನರಿಗೆ ಆಹಾರ, ಕುಡಿಯುವ ನೀರು, ಶೌಚಾಲಯದ ಸೌಕರ್ಯವನ್ನೂ ಒದಗಿಸಲಾಗಿದೆ. ವೃದ್ಧರು, ಅಂಗವಿಕಲರು, ಗರ್ಭಿಣಿಯರು, ಮಕ್ಕಳೊಂದಿಗೆ ಬಂದ ತಾಯಂದಿರಿಗೆ ಬ್ಯಾಟರಿ ಚಾಲಿತ ವಾಹನ ಹಾಗೂ ವೀಲ್‌ಚೇರ್ ವ್ಯವಸ್ಥೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.