Bike ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಉಪನ್ಯಾಸಕಿ ನಿಧನ
Team Udayavani, Sep 12, 2024, 9:24 PM IST
ಕೆಯ್ಯೂರು: ಕೆಲ ದಿನಗಳ ಹಿಂದೆ ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಕೆಪಿಎಸ್ ಕೆಯ್ಯೂರು ಪದವಿ ಪೂರ್ವ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿದ್ದ ಸುನಂದ ಅಚ್ಚುತ ಪೂಜಾರಿಯವರು ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆ ಬಳಿಕ ಆಪರೇಶನ್ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ (ಸೆ.11) ನಿಧನರಾದರು ಎಂದು ತಿಳಿದುಬಂದಿದೆ.
ಸುಳ್ಯದ ಬೀರಮಂಗಲ ನಿವಾಸಿ, ಸುಳ್ಯ ಸರಕಾರಿ ಪದವಿ ಕಾಲೇಜಿನಲ್ಲಿ ಹಿಂದೆ ಪ್ರಾಂಶುಪಾಲರಾಗಿದ್ದು, ಈಗ ಬಂಟ್ವಾಳದ ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಡಾ. ಅಚ್ಚುತ ಪೂಜಾರಿಯವರ ಪತ್ನಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.