25 ಲಕ್ಷ ಮೌಲ್ಯದ 32 ಬೈಕ್ ಕದ್ದವನ ಸೆರೆ
Team Udayavani, Nov 11, 2021, 11:27 AM IST
ಆನೇಕಲ್: ಇಪ್ಪತೈದು ಲಕ್ಷ ಮೌಲ್ಯದ 32 ಬೈಕ್‌ಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆನೇಕಲ್ ಉಪ ವಿಭಾಗದ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಗುಡಿಯಾತಂ ತಾಲೂಕಿನ ಕಾರಂಪಟ್ಟಿ ಗ್ರಾಮದ ಶರತ್‌ಬಾಬು (38) ಬಂಧಿತ. ಆರೋಪಿ ಚಾಲಕನಾಗಿದ್ದಾನೆ.
ಆನೇಕಲ್ ತಾಲೂಕಾದ್ಯಂತ ಪದೇ ಪದೆ ಬೈಕ್ ಕಳ್ಳತನ ಹೆಚ್ಚಾದ ಬೆನ್ನಲ್ಲಿ ಎಸ್ಪಿ ಡಾ.ಕೆ. ವಂಶಿಕೃಷ್ಣ, ಎಎಸ್ಪಿ ಕೆ.ಲಕ್ಷಿ$¾ಗಣೇಶ್, ಡಿವೈಎಸ್ಪಿ ಎಂ. ಮಲ್ಲೇಶ್, ಪಿಐ ಸುದರ್ಶನ್ ಎಚ್.ವಿ ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತರಾದ ಜಿಗಣಿ ಎಸ್‌ಐ ಶಿವಲಿಂಗನಾಯ್ಕ, ಎಚ್.ಸಿ. ರಾಜಣ್ಣ, ಎಲ್.ರಾಜು, ಮಹೇಶ್.ಕೆ.ಕೆ, ರಾಜೇಶ್ ಎಂ, ಪಿಸಿಗಳಾದ ಕೋಟೇಶ್, ಶಿವಪ್ರಸಾದ್ ಮತ್ತು ಮೆಹಬೂಬ್ ಶೇಖ್ ತಂಡ ಆರೋಪಿಯ ಚಲನವಲನವನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಜಿಗಣಿ, ಬನ್ನೇರುಘಟ್ಟ, ಆನೇಕಲ್ ಮತ್ತಿತರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬೈಕ್ ಗಳನ್ನು ಕಳ್ಳತನ ಮಾಡಿ ತಮಿಳುನಾಡಿಗೆ ಬೈಕ್ ಸಮೇತ ಪರಾರಿಯಾಗುತ್ತಿದ್ದ ಎಂದು ತಿಳಿದುಬಂದಿದೆ.
ಸತತ ನಾಲ್ಕು ತಿಂಗಳುಗಳಲ್ಲಿ ಮನೆಗಳ ಬಳಿ, ಬೈಕ್ ನಿಲ್ದಾಣಗಳಲ್ಲಿ ಮತ್ತು ರಸ್ತೆ ಬದಿನಿಲ್ಲಿಸಿದ್ದ ಬೈಕ್‌ಳನ್ನು ಕಳವು ಮಾಡುತ್ತಿದ್ದಾಗಿ ವಿಚಾರಣೆಯಲ್ಲಿ ಆರೋಪಿ ಬಾಯಿಬಿಟ್ಟಿದ್ದಾನೆ. ಆರೋಪಿಯಿಂದ ಬೈಕ್‌ಗಳನ್ನು ವಶಪಡಿಸಿ ಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಪೊಲೀಸರು ಸಿದ್ಧತೆಯಲ್ಲಿದ್ದು ಬೈಕ್ ಕಳೆದು ಕೊಂಡವರಿಗೆ ಮರಳಿ ಒಪ್ಪಿಸುವಲ್ಲಿ ಕ್ರಮ ಕೈಗೊಳ್ಳಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.