ಸಂಭ್ರಮದಿಂದ ಜರುಗಿದ ಬಿಳಿಗಿರಿ ರಂಗನಾಥನ ಜಾತ್ರೆ
ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತ ಗಡಣ
Team Udayavani, Apr 16, 2022, 9:27 PM IST
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿರಂಗನಾಥಸ್ವಾಮಿಯ ದೊಡ್ಡ ರಥೋತ್ಸವ ಸಂಭ್ರಮ ಸಡಗರಗಳಿಂದ ಶನಿವಾರ ನಡೆಯಿತು.
ಕಳೆದ 5 ವರ್ಷಗಳಿಂದ ದೇಗುಲದ ಜೀರ್ಣೋದ್ಧಾರ, ದೊಡ್ಡ ರಥ ಶಿಥಿಲ ಹಾಗೂ ಕೋವಿಡ್ ಹಿನ್ನೆಲೆಯಿಂದ ಜಾತ್ರೆ ನಡೆದಿರಲಿಲ್ಲ, ಹಾಗಾಗಿ ಈ ಬಾರಿ ಜಾತ್ರೆಗೆ ಸಾಗರೋಪಾದಿಯಲ್ಲಿ ಭಕ್ತ ಗಡಣ ಆಗಮಿಸಿತ್ತು. ಮಧ್ಯಾಹ್ನ ಸಾವಿರಾರು ಸಂಖ್ಯೆಯ ಭಕ್ತರು ಗೋವಿಂದ,ಗೋವಿಂದ ನಾಮಾವಳಿಯನ್ನು ಹಾಡುವ ಮೂಲಕ ರಥವನ್ನು ಎಳೆದು ಪುನೀತರಾದರು.
ರಥ ಮುಗಿದ ನಂತರ ಮಂಟಪದಲ್ಲಿ ಉತ್ಸವಮೂರ್ತಿಯನ್ನು ತಂದು ಮಂಟಪೋತ್ಸವ ಸೇವೆಯನ್ನು ನೆರವೇರಿಸಲಾಯಿತು.ಅಲ್ಲಲ್ಲಿ ಅರವಟ್ಟಿಗೆಗಳನ್ನು ಮಾಡಿಯೇ ನೆರೆದಿದ್ದ ಭಕ್ತರಿಗೆ ನೀರು ಮಜ್ಜಿಗೆ ಪಾನಕ ಕೋಸಂಬರಿ ಹಾಗೂ ಪ್ರಸಾದ ವಿನಿಯೋಗದ ವ್ಯವಸ್ಥೆಯನ್ನು ಮಾಡಲಾಗಿತ್ತು .
ಬಸ್ಸಿಲ್ಲದೆ ಸಾರ್ವಜನಿಕರ ಪರದಾಟ
ರಥೋತ್ಸವಕ್ಕೆ ಬಂದ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಿಂದ ಉಚಿತ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು ಆದರೆ ನಿಗದಿತ ಪ್ರಮಾಣದಲ್ಲಿ ಬಸ್ ಗಳು ಆಗಮಿಸದ ಹಿನ್ನೆಲೆಯಲ್ಲಿ ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಖಾಸಗಿ ವಾಹನಗಳಿಗೆ ನಿಷೇಧ ಹೇರಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತು. ನಂತರ ಪರಿಸ್ಥಿತಿಯ ಅವಲೋಕನ ಮಾಡಿದ ಪೊಲೀಸ್ ಇಲಾಖೆಯು ಖಾಸಗಿ ವಾಹನಗಳಿಗೂ ಪ್ರವೇಶವನ್ನು ನೀಡಿತು. ಅಲ್ಲಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯೂ ಕಾಡಿತು. ಬಿಆರ್ ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶವಾಗಿದ್ದರೂ ಕೆಲ ಭಕ್ತರು ಹದಿನೆಂಟು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಸಾಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.