ಕಾಂಗ್ರೆಸ್‌, BJP ಮಧ್ಯೆ ಮತ್ತೆ ಬಿಲ್‌ ಕದನ

Team Udayavani, Aug 12, 2023, 11:18 PM IST

bjp cong

ಕಾಮಗಾರಿಗಳ ಬಿಲ್‌ ಪಾವತಿ ಸಂಬಂಧ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಮತ್ತೆ “ಬಿಲ್‌ ಕದನ’ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, 3 ವರ್ಷಗಳ ಹಿಂದೆ ಪೂರ್ಣಗೊಳಿಸಿದ ಕಾಮಗಾರಿಗೆ ಈಗ ಬಿಲ್‌ಗೆ ಆತುರ ಯಾಕೆ ಎಂದು ಪ್ರಶ್ನಿಸಿದ್ದಾರೆ. ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯಿಸಿ, ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರಿಂದ ಮಾತ್ರ ನಮ್ಮ ಮೇಲೆ ಆರೋಪ ಮಾಡಲಾಗುತ್ತಿದೆ. ಬಿಜೆಪಿ ನಾಯಕರ ಭ್ರಷ್ಟಾಚಾರವನ್ನು ದಾಖಲೆ ಸಹಿತ ಬಹಿರಂಗಪಡಿಸುವೆ ಎಂದು ಸವಾಲು ಹಾಕಿದ್ದಾರೆ. ಈ ಮಧ್ಯೆ, ಬಿಜೆಪಿ ನಾಯಕ ಬಸವನಗೌಡ ಯತ್ನಾಳ್‌, “ಕಮಿಷನ್‌ ಕಳ್ಳ ಯಾರು’ ಎಂದು ಪ್ರಶ್ನಿಸಿದ್ದಾರೆ. ಮಾಜಿ ಸಚಿವ ಸೋಮಣ್ಣ ಅವರು, ಈ ಹಿಂದೆ ನಿಮ್ಮ ಪರವಾಗಿದ್ದ ಗುತ್ತಿಗೆದಾರರು 2 ತಿಂಗಳಲ್ಲಿ ಅಪ್ರಾಮಾಣಿಕರಾದರಾ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರಿಂದ ಆರೋಪ: ಡಿಕೆಶಿ
ಬೆಂಗಳೂರು: ಮುಖ್ಯಮಂತ್ರಿಗಳ ನಿರ್ದೇಶನದಂತೆ ಕಾಮಗಾರಿಗಳ ತನಿಖೆ ಮಾಡಿ ಪ್ರಾಮಾಣಿಕವಾಗಿ ಕೆಲಸ ಮಾಡಿರುವವರಿಗೆ ಬಿಲ್‌ ಪಾವತಿಸಲಾಗುವುದು. ಯಾವುದೇ ಗುತ್ತಿಗೆದಾರರಿಗೆ ಕಿರುಕುಳ ನೀಡುವ ಉದ್ದೇಶ ನಮಗಿಲ್ಲ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರಕಾರದ ವಿರುದ್ಧ ಕಮಿಷನ್‌ ಆರೋಪ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಹೇಳಿದ್ದಾರೆ.

ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾವುದೇ ಬಿಲ್‌ ಬಾಕಿ ಇದ್ದರೂ ಅವುಗಳ ಪಾವತಿ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಿರುವಾಗ ಕಿಕ್‌ಬ್ಯಾಕ್‌ ಕೇಳಲು ಹೇಗೆ ಸಾಧ್ಯ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯಾಕೆ ಬಿಲ್‌ ಪಾವತಿಸಲಿಲ್ಲ? ಅವರ ಕಾರ್ಯವೈಖರಿಯನ್ನು ನಾನು ಶೀಘ್ರದಲ್ಲೇ ದಾಖಲೆ ಸಮೇತ ವಿವರಿಸುತ್ತೇನೆ. ಬಿಜೆಪಿ ನಾಯಕರ ಅನೇಕ ಹಗರಣಗಳಿವೆ. ಅವರ ಹಗರಣವನ್ನು ಸಾಬೀತು ಮಾಡುತ್ತೇವೆ. ಹೀಗಾಗಿ ನಾವು ತನಿಖೆಗೆ ಆದೇಶ ನೀಡಿದ್ದೇವೆ. ಅವರು ಸರಕಾರದಲ್ಲಿದ್ದಾಗ ನಾವು ಮಲಗಿರಲಿಲ್ಲ. ಅವರು ಏನೆಲ್ಲ ಮಾಡಿದ್ದಾರೆ ಎಂಬುದರ ಮಾಹಿತಿ ನಮ್ಮಲ್ಲಿದೆ ಎಂದು ಎಂದು ತಿಳಿಸಿದರು.

ನಮ್ಮ ಸರಕಾರದ ಸಚಿವರು, ಶಾಸಕರು ಲಂಚ ಕೇಳಿಲ್ಲ ಎಂದು ಕೆಂಪಣ್ಣ ಮಾತ್ರವಲ್ಲ, ಇತರ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದರೆ ಈ ವಿಚಾರದಲ್ಲಿ ರಾಜಕೀಯ ಮಾಡಿ, ಗುತ್ತಿಗೆದಾರರನ್ನು ಬಳಸಿಕೊಂಡು ಮಾಜಿ ಸಚಿವರಾದ ಅಶೋಕ್‌, ಅಶ್ವತ್ಥನಾರಾಯಣ, ಗೋಪಾಲಯ್ಯ ಅವರು ತಮ್ಮ ತಿಮಿಂಗಿಲಗಳನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಶಿವಕುಮಾರ್‌ ಟೀಕಿಸಿದ್ದಾರೆ.

ಬಿಜೆಪಿಯವರಿಗೆ ನಮ್ಮ ಐದು ಗ್ಯಾರಂಟಿ ಯೋಜನೆಗಳನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಕ್ಷೇತ್ರದ ಮಹಿಳೆಯರು ತಿಂಗಳಿಗೆ 2 ಸಾವಿರ ಪ್ರೋತ್ಸಾಹಧನ, ಉಚಿತ ಬಸ್‌ ಪ್ರಯಾಣ ಮಾಡುತ್ತಿದ್ದು, ಉಚಿತ ಅಕ್ಕಿ ಹಾಗೂ ವಿದ್ಯುತ್‌ ಪಡೆಯುತ್ತಿದ್ದು, ನೀವು ಅಧಿಕಾರದಲ್ಲಿದ್ದಾಗ ಇಂತಹ ಒಂದು ಕಾರ್ಯಕ್ರಮ ಮಾಡಲಿಲ್ಲ ಎಂದು ಅವರನ್ನು ಕೇಳುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

“ಕಮಿಷನ್‌ ಕಳ್ಳರು”: ಯತ್ನಾಳ್‌

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ “ಕಮಿಷನ್‌ ಕಳ್ಳರು’ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಎಲ್ಲದಕ್ಕೂ ತನಿಖೆ ಬಾಕಿ ಇದೆ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರೇ, ಕೆಎಸ್‌ಆರ್‌ಟಿಸಿ ನೌಕರರಿಗೆ ಸಂಬಳ ನೀಡಲು ಯಾವ ತನಿಖೆ ಬಾಕಿ ಇದೆ? ಶಿಕ್ಷಕರಿಗೆ ಸಂಬಳ ನೀಡಲು ಯಾವ ತನಿಖೆ ಬಾಕಿ ಇದೆ? ಸಾರಿಗೆ ನಿಗಮಗಳಿಗೆ ಪೂರ್ಣ ಹಣ ಬಿಡುಗಡೆ ಮಾಡಲು ಯಾವ ತನಿಖೆ ಬಾಕಿ ಇದೆ? ನಿಮ್ಮ ಗ್ಯಾರಂಟಿ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪೂರೈಸಿದವರಿಗೆ 1,500 ರೂ. ನೀಡಲು ಯಾವ ತನಿಖೆ ಬಾಕಿ ಇದೆ ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಬ್ರದರ್‌ (ಡಿಕೆಶಿ ) ವಿರುದ್ಧ ಬಂದಿರುವ ಆರೋಪಗಳು ಸತ್ಯವೆಂದು ತಿಳಿದಿದ್ದರೂ ಯಾಕೆ ಪರ ವಹಿಸಿಕೊಂಡು ಮಾತನಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಕಮಿಷನ್‌ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯ ಸವಾಲು ಹಾಕಿರುವ ಡಿ.ಕೆ.ಶಿವಕುಮಾರ್‌ ಅವರಿಗೂ ತಿರುಗೇಟು ನೀಡಿರುವ ಯತ್ನಾಳ್‌, ಹೌದು. ಅವರು ಕಷ್ಟಪಟ್ಟು ಭತ್ತ ಬೆಳೆದು ಹಣ ಸಂಪಾದಿಸಿದ್ದಾರೆ. ಆ ಭತ್ತವನ್ನು ಮಾರಾಟ ಮಾಡಲು ತಿಹಾರ್‌ ಜೈಲಿಗೆ ಹೋಗಿದ್ದರು ಎಂದು ಕೆಣಕಿದ್ದಾರೆ.

ಎಟಿಎಂ ಸರಕಾರಕ್ಕೆ ಮಕ್ಕಳಾಟ
ವರ್ಗಾವಣೆ ವಿವಾದದ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ, ಕೈ ಶಾಸಕ- ಸಚಿವರ ನಡುವಿನ ಕಲೆಕ್ಷನ್‌ ಗುದ್ದಾಟವು ಬೆಂಗಳೂರು ಪೊಲೀಸರ ವರ್ಗಾವಣೆಗೆ ಪದೇಪದೆ ಬ್ರೇಕ್‌ ಹಾಕುತ್ತಿದೆ. ವರ್ಗಾವಣೆ ಆದೇಶ ನೀಡಿ ಬಳಿಕ ತಡೆ ಹಿಡಿಯುವುದು ಎಟಿಎಂ ಸರಕಾರಕ್ಕೆ ಮಕ್ಕಳಾಟವಾಗಿದೆ. ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗಲು ಕಾಂಗ್ರೆಸ್‌ ಶಾಸಕರು-ಸಚಿವರ ಹಣದ ದುರಾಸೆಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್‌ ವರಿಷ್ಠರು ಕಮಿಷನ್‌ ತನಿಖೆ ಮಾಡಲಿ
ಹಾವೇರಿ: ಝೀರೋ ಪರ್ಸೆಂಟ್‌ ಕಮಿಷನ್‌ನ ಅ ಧಿಕಾರ ಕೊಡುತ್ತೇನೆ ಎಂದು ರಾಹುಲ್‌ ಗಾಂಧಿಯೇ ಹೇಳಿದ್ದರು. ಆದರೆ ಇಲ್ಲಿ ಕಮಿಷನ್‌ ಪಡೆಯಲಾಗುತ್ತಿದೆ. ಈ ಬಗ್ಗೆ ಕೇಂದ್ರದ ಕಾಂಗ್ರೆಸ್‌ ನಾಯಕರು ತನಿಖೆ ಮಾಡಬೇಕು. ಇಲ್ಲವಾದರೆ ಕೇಂದ್ರದ ವರಿಷ್ಠರೇ ಇದರಲ್ಲಿ ಭಾಗಿಯಾಗಿದ್ದಾರೆ ಎಂಬಂತಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು ಗುತ್ತಿಗೆದಾರರಿಗೆ ಹಣ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಮೂರು ವರ್ಷ ಹಣ ಬಿಡುಗಡೆ ಮಾಡಿದ್ದೇವೆ. 6,500 ಕೋಟಿ ರೂ. ಜತೆಗೆ ಕಳೆದ ನಾಲ್ಕೈದು ತಿಂಗಳ ಹಿಂದೆ 657 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಆಗ ಸಿದ್ದರಾಮಯ್ಯ ಸಿಎಂ ಆಗಿರಲಿಲ್ಲ. ಈಗ ಬಿಡುಗಡೆಯಾಗಬೇಕಾದ ಬಿಲ್‌ಗ‌ಳಿಗೂ ಕಮಿಷನ್‌ ಕೇಳಲಾಗುತ್ತಿದೆ. ಹೀಗಾಗಿ, ಇದರಲ್ಲೇನೋ ಅವ್ಯವಹಾರ ಇದೆ ಎಂದು ಅನ್ನಿಸುತ್ತಿದೆ. ಸುಮ್ಮನೆ ತನಿಖೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ ಎಂದರು.

ಬಿಜೆಪಿ ಸರಕಾರದ ರೈತಪರ ಯೋಜನೆ ಗಳಿಗೆ ಕಾಂಗ್ರೆಸ್‌ ತಡೆ ಹಾಕಿದೆ. ಇದು ರೈತ ವಿರೋಧಿ  ಸರಕಾರ. ರೈತರ ಮಕ್ಕಳ ಶಿಕ್ಷಣಕ್ಕೆ ನೀಡುತ್ತಿದ್ದ ರೈತ ವಿದ್ಯಾ ನಿಧಿಯನ್ನು  ನಿಲ್ಲಿಸಿದ್ದಾರೆ. ರೈತರ ಬದುಕಿಗೆ ಉಪಯೋಗವಾಗುವ ರೈತರ ಆವರ್ತ ನಿಧಿ ಕೂಡ ಸ್ಥಗಿತಗೊಂಡಿದೆ. ನಾವು ಇದರ ವಿರುದ್ಧ ಮುಂದೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.