ಪರಿಸರ ನಿರ್ಲಕ್ಷಿಸಿದ್ರೆ ಪ್ರಾಕೃತಿಕ ವಿಕೋಪ ನಿಶ್ಚಿತ: ಶಿಮುಶ
Team Udayavani, Aug 20, 2020, 12:42 PM IST
ಚಿತ್ರದುರ್ಗ: ಪರಿಸರವನ್ನು ಯಾರೂ ನಿರ್ಲಕ್ಷಿಸಬಾರದು. ಅಂತಹ ದೇಶದಲ್ಲಿ ಪ್ರಾಕೃತಿಕ ವೈಪರೀತ್ಯಗಳು ಉಂಟಾಗುತ್ತವೆ. ಮರಗಳಿದ್ದರೆ ಮಾನವ. ಮರ ಮಾನವ ಬದುಕಿಗೆ ವರ. ವರವಾಗಿರುವ ಮರಗಳನ್ನು ಬೆಳೆಸಬೇಕು. ಸ್ವಾರ್ಥದ ಕಾರಣದಿಂದ ಫಲ ಕೊಡುವ ಮರಗಳನ್ನು ಬೆಳೆಸುತ್ತಾರೆ. ಅದರ ಜೊತೆ ನೆರಳು ಕೊಡುವ ಆಮ್ಲಜನಕ ನೀಡುವ, ಪ್ರಾಣಿ ಪಕ್ಷಿಗಳಿಗೆ ಆಹಾರ ಕೊಡುವ ಮರಗಳನ್ನೂ ಬೆಳೆಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು.
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯ, ಜಿಲ್ಲಾ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಮತ್ತು ಪ್ರಾತ್ಯಕ್ಷತಾ ಕೇಂದ್ರ, ಜಿಲ್ಲಾ ಜೈವಿಕ ಇಂಧನ ಉಸ್ತುವಾರಿ ಸಮಿತಿ ಮತ್ತು ಸ್ಪೀಚ್ ಸಂಸ್ಥೆಗಳ ಸಹಯೋಗದಲ್ಲಿ ನಡೆದ ವಿಶ್ವ ಜೈವಿಕ ಇಂಧನ ದಿನಾಚರಣೆಯಲ್ಲಿ ವಾಹನಕ್ಕೆ ಇಂಧನ ಹಾಕಿ ಶರಣರು ಮಾತನಾಡಿದರು. ಜೈವಿಕ ಇಂಧನಕ್ಕೆ ಸಂಬಂಧಿಸಿದ ಮರಗಳು ಬೇಕಿವೆ. ಬರಿದಾಗುವ ಇಂಧನಕ್ಕೆ ಪರ್ಯಾಯವಾಗಿ ಬದಲಿ ಇಂಧನವನ್ನು ಮಾಡಿಕೊಳ್ಳಬೇಕಿದೆ. ದುಬೈ, ಮಸ್ಕತ್ ಮೊದಲಾದ ಇಂಧನವಿರುವ ರಾಷ್ಟ್ರಗಳು ನಮ್ಮದು ಮುಗಿದುಹೋಗುವ ಸಂಪನ್ಮೂಲಗಳೆಂದು ಅರಿತು ಮರ ಗಿಡ, ಕೃತಕ ಬೆಟ್ಟಗಳನ್ನು ಪರ್ಯಾಯ ಇಂಧನಕ್ಕಾಗಿ ಬೆಳೆಸುತ್ತಿದ್ದಾರೆ. ಅವರು ಸಂಪನ್ಮೂಲದ ಬಗ್ಗೆ ಗಂಭೀರ ಚಿಂತನೆ ಮಾಡುತ್ತಿದ್ದಾರೆ. ಅವರಂತೆ ನಾವು ಕೂಡ ಬದಲಿ ಇಂಧನದ ಬಗ್ಗೆ ಜಾಗರೂಕರಾಗಬೇಕಿದೆ ಎಂದರು. ಸ್ಪೀಚ್ ಸಂಸ್ಥೆಯ ವ್ಯವಸ್ಥಾಪಕ ಸಂತೋಷ್, ಎಚ್. ಶೇಷಪ್ಪ ಮಾತನಾಡಿದರು.
ಜಿಲ್ಲಾ ಜೈವಿಕ ಇಂಧನ ಸಂಶೋಧನೆ ಮಾಹಿತಿ, ಪ್ರಾತ್ಯಕ್ಷತಾ ಕೇಂದ್ರದ ಸಂಯೋಜಕ ಡಾ| ಪಿ.ಬಿ. ಭರತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಪ್ಪ ಇದ್ದರು. ವಿಜಯಲಕ್ಷ್ಮೀ ಹಿರೇಮಠ ಪ್ರಾರ್ಥಿಸಿದರು. ಡಾ| ಬಿ.ಸಿ. ಶಾಂತಪ್ಪ ಸ್ವಾಗತಿಸಿದರು. ಸುನೀಲ್‌ಕುಮಾರ್ ಬಿ.ಕೆ. ನಿರೂಪಿಸಿದರು. ಜೆ. ಸತೀಶ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.