“ಕೈ’ ಕೋಟೆಯಲ್ಲಿ ಅರಳಿದ ಕಮಲ

Team Udayavani, Dec 10, 2019, 3:05 AM IST

kai kote

ಚಿಕ್ಕಬಳ್ಳಾಪುರ: ಬಿಜೆಪಿಗೆ ನೆಲೆ ಇಲ್ಲದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ 3ನೇ ಬಾರಿ ಹ್ಯಾಟ್ರಿಕ್‌ ಗೆಲುವು ದಾಖಲಿಸುವ ಮೂಲಕ ಡಾ.ಕೆ.ಸುಧಾಕರ್‌, ಹೊಸ ರಾಜಕೀಯ ಇತಿಹಾಸ ಬರೆದಿದ್ದಾರೆ. ಜಿಲ್ಲೆಯ ಜನರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ ಉಪ ಚುನಾವಣೆ ಕದನ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಸೋಮವಾರ ಮತ ಎಣಿಕೆ ನಡೆದು ಫ‌ಲಿತಾಂಶ ಹೊರ ಬೀಳುವ ಮೂಲಕ ತೆರೆ ಕಂಡಿದೆ.

2013, 2018ರಲ್ಲಿ ಸತತವಾಗಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ಡಾ.ಕೆ.ಸುಧಾಕರ್‌, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿಗೆ ಪಕ್ಷಾಂತರಗೊಂಡು ಉಪ ಚುನಾವಣೆ ಎದುರಿ ಸಿದ್ದರು. ಜಿದ್ದಾಜಿದ್ದಿನ ಚುನಾ ವಣಾ ಅಖಾಡ ಏರ್ಪಟ್ಟಿತ್ತು. ಜಿಲ್ಲೆಯ ರಾಜಕೀಯ ಇತಿಹಾಸ ದಲ್ಲಿಯೇ ಮೊದಲ ಬಾರಿಗೆ ಕಾಂಗ್ರೆಸ್‌ ಭದ್ರ ಕೋಟೆಯಲ್ಲಿ ಕಮಲದ ಖಾತೆ ತೆರೆದ ಕೀರ್ತಿಗೆ ಇದೀಗ ಸುಧಾಕರ್‌ ಪಾತ್ರರಾಗಿ ಗಮನ ಸೆಳೆದಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಸುಧಾಕರ್‌ಗೆ ಈ ಬಾರಿ ಗೆಲುವು ಸುಲಭವಲ್ಲ ಎಂಬ ಮಾತುಗಳು ತಾಲೂಕಿನಲ್ಲಿ ಕೇಳಿ ಬಂದಿದ್ದವು. ಆದರೆ, ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಲೆಕ್ಕಾಚಾರವನ್ನು ಉಪ ಚುನಾವಣೆ ಫ‌ಲಿತಾಂಶ ತಲೆಕೆಳಗೆ ಮಾಡಿ ಕಳೆದ ವಿಧಾನಸಭೆ ಚುನಾವಣೆಗಿಂತ ಮತ್ತೆ ಸುಧಾಕರ್‌ ಹೆಚ್ಚಿನ ಮತಗಳ ಅಂತರದಿಂದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ನಂದಿ ಅಂಜನಪ್ಪ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಅನರ್ಹ ಶಾಸಕ ಎಂಬ ಅಪವಾದದಿಂದ ಕೆ.ಸುಧಾಕರ್‌ ಪಾರಾಗಿ ಮತ್ತೂಮ್ಮೆ ಶಾಸಕರಾಗಿ ಆಯ್ಕೆಗೊಳ್ಳುವ ಮೂಲಕ ಕ್ಷೇತ್ರದ ತಮ್ಮ ಪ್ರಬಲ ರಾಜಕೀಯ ಎದುರಾಳಿಗಳಾದ ಕಾಂಗ್ರೆಸ್‌, ಜೆಡಿಎಸ್‌ಗೆ ಸೆಡ್ಡು ಹೊಡೆದಿದ್ದಾರೆ. ಆ ಮೂಲಕ ಸುಧಾಕರ್‌, 3ನೇ ಬಾರಿಯೂ ತಮ್ಮ ವೈಯಕ್ತಿಕ ವರ್ಚಸ್ಸಿನ ಮೂಲಕ ಗೆಲುವು ಸಾಧಿಸಿರುವುದು ಈ ಉಪ ಚುನಾವಣೆ ಫ‌ಲಿತಾಂಶದಿಂದ ಸ್ಪಷ್ಟವಾಗಿ ಗೋಚರಿಸಿದೆ.

ಜೊತೆಗೆ ಬಿಜೆಪಿ ಸರ್ಕಾರದಲ್ಲಿ ಮೆಡಿಕಲ್‌ ಕಾಲೇಜು ಶಂಕುಸ್ಥಾಪನೆ, ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯನ್ನು ಹೊಸ ತಾಲೂಕಾಗಿ ಘೋಷಿಸಿದ್ದು ಸುಧಾಕರ್‌ಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿರುವುದು ಎದ್ದು ಕಾಣುತ್ತಿದೆ. ಅಲ್ಲದೇ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಅನುದಾನ ದೊರಕಿಸಿಕೊಡುವ ಭರವಸೆಯನ್ನೂ ನೀಡಿದ್ದರು.

ಗೆದ್ದವರು
ಡಾ.ಕೆ.ಸುಧಾಕರ್‌ (ಬಿಜೆಪಿ)
ಪಡೆದ ಮತ: 84,389
ಗೆಲುವಿನ ಅಂತರ‌: 34,801

ಸೋತವರು
ನಂದಿ ಅಂಜನಪ್ಪ (ಕಾಂಗ್ರೆಸ್‌)
ಪಡೆದ ಮತ: 49,588

ಎನ್‌.ರಾಧಾಕೃಷ್ಣ (ಜೆಡಿಎಸ್‌)
ಪಡೆದ ಮತ: 35,869

ಗೆದ್ದದ್ದು ಹೇಗೆ?
-ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರೋಧದ ನಡುವೆ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್‌ ಕಾಲೇಜಿಗೆ ಶಂಕು

-ಮಂಚೇನಹಳ್ಳಿ ಹೋಬಳಿಯನ್ನು ಹೊಸ ತಾಲೂಕಾಗಿ ಸಿಎಂ ಘೋಷಣೆ

-ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದ್ದು

ಕಾಂಗ್ರೆಸ್‌ ಪಕ್ಷದಲ್ಲಿ ನಾನೇ ಎಂಬ ಅಹಂ, ಅಹಂಕಾರ ಇನ್ನಾದರೂ ಹೋಗಲಿ.ಸ್ಥಿರ ಹಾಗೂ ಅಭಿವೃದ್ಧಿ ಪರ ಸರ್ಕಾರ ಇರಲಿ ಎಂದು ರಾಜ್ಯದ ಉಪ ಚುನಾವಣೆದಲ್ಲಿ ಬಿಜೆಪಿಗೆ ಜನತೆ ಜನಾದೇಶ ನೀಡಿದ್ದಾರೆ. ತಮ್ಮನ್ನು ಅನರ್ಹಗೊಳಿಸಿದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಬಗ್ಗೆ ಹೆಚ್ಚು ಮಾತನಾಡಲ್ಲ. ಅವರ ಬಗ್ಗೆ ಸದನದಲ್ಲಿಯೇ ಉತ್ತರಿಸುವೆ. ಅವರೊಬ್ಬ ನಾಯಿ, ನರಿ.
-ಡಾ.ಕೆ.ಸುಧಾಕರ್‌, ಬಿಜೆಪಿ ವಿಜೇತ ಅಭ್ಯರ್ಥಿ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.