25 ಕೋಟಿ ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು : ಮಂಜುನಾಥ್ ಗಡಿಗುಡಾಳ್ ಗಂಭೀರ ಆರೋಪ
Team Udayavani, Apr 4, 2022, 4:17 PM IST
ದಾವಣಗೆರೆ: ಇಲ್ಲಿನ ಎಂಸಿಸಿ ಬಿ ಬ್ಲಾಕ್‌ನಲ್ಲಿ ಮಹಾನಗರಪಾಲಿಕೆಗೆ ಸೇರಿದ 25 ಕೋಟಿ ರೂ. ಮೌಲ್ಯದ ನಿವೇಶನ ಕಬಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಗಂಭೀರ ಆರೋಪ ಮಾಡಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷದಿಂದ ಮಹಾನಗರಪಾಲಿಕೆಯ ನಿವೇಶನದಲ್ಲಿ ಒಳಾಂಗಣ ಕ್ರೀಡಾಂಗಣ, ವಾಣಿಜ್ಯ ಕಟ್ಟಡ, ನಗರಪಾಲಿಕೆ ಕಚೇರಿ ನಿರ್ಮಾಣಕ್ಕೆ ಮನವಿ ಮಾಡಲಾಗುತ್ತಿದೆ.
ಸ್ವತಃ ಶಾಸಕ ರವೀಂದ್ರನಾಥ್ ಕೂಡ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಆ ನಿವೇಶನ ಕಾರ್ಯಾಲಯಕ್ಕೆ ನಿವೇಶನ ಮಂಜೂರು ಮಾಡಿಕೊಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಮಹಾನಗರಪಾಲಿಕೆಗೆ ಮನವಿ ಸಲ್ಲಿಸಿದ್ದಾರೆ. ಅದು ನಮ್ಮ ಜಾಗ ಮತ್ತು ನಮ್ಮ ಹಕ್ಕು. ಯಾವುದೇ ಕಾರಣಕ್ಕೂ ನಿವೇಶನ ಬಿಟ್ಟುಕೊಡುವುದಿಲ್ಲ ಎಂದರು.
ಎಂಸಿಸಿ ಬಿ ಬ್ಲಾಕ್‌ನಲ್ಲಿ 3681/10, 3681/10ಎ, 3681/11 ಹಾಗೂ 3681/12 ಸರ್ವೇ ನಂಬರ್‌ನಲ್ಲಿ 131.23 -196.86 ಅಡಿ ಸುತ್ತಳತೆಯ ಮಹಾನಗರ ಪಾಲಿಕೆಗೆ ಸೇರಿದ ನಿವೇಶನ ಇದೆ. ಈಗಿನ ಮಾರುಕಟ್ಟೆ ಬೆಲೆ 25 ಕೋಟಿ ರೂ. ಆಗಬಹುದು.
ಅಂತಹ ಬೆಲೆ ಬಾಳುವ ಮತ್ತು ಸಾರ್ವಜನಿಕ ಅನುಕೂಲಕ್ಕೆ ಮೀಸಲಿಟ್ಟಿರುವ ಜಾಗವನ್ನ ಬಿಜೆಪಿ ಕಾರ್ಯಾಲಯಕ್ಕೆ ಮಂಜೂರು ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಎಸ್. ಎಂ. ವೀರೇಶ್ ಹನಗವಾಡಿ ಜ. 20ರಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಿವೇಶನ ಕಬಳಿಸುವ ಯತ್ನ ನಡೆಸಲಾಗುತ್ತಿದೆ ಎಂದು ದೂರಿದರು.
ನಾವು ಯಾವುದೇ ಕಾರಣಕ್ಕೂ ನಿವೇಶನ ಬಿಟ್ಟು ಕೊಡುವುದಿಲ್ಲ. ಕಾನೂನು ಹೋರಾಟ ಒಳಗೊಂಡಂತೆ ಎಲ್ಲ ಹಂತದ ಹೋರಾಟ ನಡೆಸುತ್ತೇವೆ. ಆ ಜಾಗವನ್ನು ಬಿಜೆಪಿ ಆಸ್ತಿಯನ್ನಾಗಿ ಮಾಡಿಕೊಳ್ಳಲು ಬಿಡುವುದೇ ಇಲ್ಲ. ಎಂತದ್ದೇ ತ್ಯಾಗಕ್ಕೂ ಸಿದ್ಧ ಎಂದು ಗುಡುಗಿದರು.
ಇದನ್ನೂ ಓದಿ :ಗ್ರಾಮಗಳಿಗೆ ಹೆಸರು ಬದಲಾವಣೆ ನಿರೀಕ್ಷೆ! | ಜಿಲ್ಲೆಯಲ್ಲೂ ಇವೆ ಹಲವು ಜಾತಿಸೂಚಕ ಗ್ರಾಮಗಳು
ಕಾಂಗ್ರೆಸ್ ಸದಸ್ಯ ಎ. ನಾಗರಾಜ್ ಮಾತನಾಡಿ, ಮಹಾನಗರ ಪಾಲಿಕೆ ಬಜೆಟ್ ಸಭೆಯಲ್ಲಿ ಏಕಾಏಕಿ ಸ್ವಯಂ ಘೋಷಣೆ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನ ವಿರೋಧಿ ಸಿ ಮುಂದಿನ ದಿನಗಳಲ್ಲಿ ಹಂತ ಹಂತದ ಹೋರಾಟ ನಡೆಸಲಾಗುವುದು. ಕೊರೊನಾ ಕಾರಣದಿಂದ ತೆರಿಗೆ ಹೆಚ್ಚಳ ಮಾಡದಂತೆ ಮನವಿ ಮಾಡಲಾಗಿತ್ತು.
ಆದರೂ ಬಜೆಟ್ ಸಭೆಯಲ್ಲಿ ಎಸ್ ಎಎಸ್ ಪದ್ಧತಿಯಡಿ ಶೇ. 3 ರಷ್ಟು ತೆರಿಗೆ ಹೆಚ್ಚಿಸಿರುವುರಿಂದ ಜನರಿಗೆ ಹೊರೆ ಅಗಲಿದೆ. 2005-06ರಲ್ಲಿ ನಿಗದಿಯಾಗಿರುವಂತೆ ತೆರಿಗೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
2020-21ನೇ ಸಾಲಿನಲ್ಲಿ ಜಿಲ್ಲಾಧಿಕಾರಿ ಅಧಿಕಾರಾವಧಿಯಲ್ಲಿ ವಸತಿ ವಲಯಕ್ಕೆ ಶೇ. 15, ವಾಣಿಜ್ಯ ಸಂಕೀರ್ಣಕ್ಕೆ ಶೇ. 17 ತೆರಿಗೆ ಹೆಚ್ಚಿಸಲಾಗಿದೆ. ಈಗ ಉಪ ನೋಂದಣಿ ಇಲಾಖೆ ಮೌಲ್ಯದ ಆಧಾರದಲ್ಲಿ ಶೇ. 3 ರಿಂದ 5ರಷ್ಟು ತೆರಿಗೆ ಹೆಚ್ಚಿಸಿರುವುದರಿಂದ ತೆರಿಗೆ ಪಾವತಿದಾರರಿಗೆ ಹೆಚ್ಚು ಹೊರೆ ಆಗಲಿದೆ. ಒಂದು ವರ್ಷ ತೆರಿಗೆ ಕಟ್ಟದೇ ಹೋದಲ್ಲಿ ಶೇ. 24ರಷ್ಟು ದಂಡ ಹಾಕಲಾಗುವುದು. ಮೂಲ ಕಂದಾಯಕ್ಕೆ ಸೆಸ್ ವಿಧಿ ಸಬೇಕು. ತೆರಿಗೆ ಹೆಚ್ಚಳ ಹಿಂದಕ್ಕೆ ಪಡೆಯಬೇಕು. ಇಲ್ಲದೆ ಹೋದರೆ ಕಾಂಗ್ರೆಸ್ ನಿಂದ ಹೋರಾಟ ಮಾಡಲಾಗುವುದು ಎಂದರು.
ಸದಸ್ಯ ಕೆ. ಚಮನ್ ಸಾಬ್ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು, ಜನರ ಬೇರೆಡೆ ಗಮನ ಸೆಳೆಯಲು ಹಿಜಾಬ್, ಕಾಶೀ¾ರ್ ಫೈಲ್ಸ್, ಈಗ ಜಟ್ಕಾ, ಹಲಾಲ್ ಕಟ್ ವಿಚಾರ ಕೈಗೆತ್ತಿಕೊಂಡಿವೆ ಎಂದು ದೂರಿದರು. ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಗಣೇಶ್ ಹುಲ್ಮನೆ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.