ಫೆ.9 ರಿಂದ ಮೂರು ದಿನ BJP ಗ್ರಾಮ ಚಲೋ ಅಭಿಯಾನ
ಬಿಜೆಪಿಯಿಂದ ಬೃಹತ್ ಸಂಘಟನಾತ್ಮಕ ಕಾರ್ಯತಂತ್ರ; ಮನೆ-ಮನೆಗೆ ಬಿಜೆಪಿ, ಮನ-ಮನಕ್ಕೆ ಮೋದಿ ಘೋಷವಾಕ್ಯ
Team Udayavani, Jan 25, 2024, 9:47 PM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆ.9ರಿಂದ ಮೂರು ದಿನ ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಚಲೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 40 ಸಾವಿರ ಕಾರ್ಯಕರ್ತರನ್ನು ಇದಕ್ಕಾಗಿ ನಿಯೋಜಿಸಲಾಗುತ್ತಿದೆ ಎಂದು ಅಭಿಯಾನದ ಸಂಚಾಲಕರೂ ಆಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ತಿಳಿಸಿದರು.
ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬೂತ್‌ಗಳಲ್ಲಿ ಗಳಿಸಿದ್ದ ಮತಗಳಿಗಿಂತ ಈ ಬಾರಿ ಶೇ.10ರಷ್ಟು ಮತವನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಿದ್ದು, ಅಭಿಯಾನದಲ್ಲಿ ತೊಡಗಿಕೊಳ್ಳುವ ಪ್ರತಿ ಕಾರ್ಯಕರ್ತರಿಗೂ ಸೂಕ್ತ ತರಬೇತಿ ನೀಡಲಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಜನಪರ ಕಾರ್ಯಕ್ರಮ ತಿಳಿಸುತ್ತೇವೆ. ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆಯೂ ಅರಿವು ಮೂಡಿಸುತ್ತೇವೆ. ಶುಕ್ರವಾರದಿಂದಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ತಯಾರಿ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಇದೊಂದು ಬೃಹತ್ ಸಂಘಟನಾತ್ಮಕ ಕಾರ್ಯತಂತ್ರವಾಗಿದ್ದು, ತಳಮಟ್ಟದಲ್ಲಿ ಪ್ರತಿಯೊಬ್ಬರನ್ನೂ ಈ ಅಭಿಯಾನದ ಮೂಲಕ ತಲುಪಲಾಗುತ್ತದೆ ಎಂದು ವಿವರಿಸಿದರು.
ಬೂತ್ ಸಶಕ್ತೀಕರಣ, ಕಾರ್ಯಕರ್ತರಿಗೆ ಬಲ
ರಾಜ್ಯದ 28 ಸಾವಿರ ಕಂದಾಯ ಗ್ರಾಮಗಳು ಹಾಗೂ 19 ಸಾವಿರ ನಗರ ಬೂತ್‌ಗಳನ್ನು ಅಭಿಯಾನದ ಮೂಲಕ ತಲುಪುತ್ತೇವೆ. ನಿಯೋಜಿತ 40 ಸಾವಿರ ಕಾರ್ಯಕರ್ತರು ಆಯಾ ಗ್ರಾಮಗಳಿಗೆ ಎಪ್ರಿಲ್‌ವರೆಗೆ 6 ಬಾರಿ ಭೇಟಿ ನೀಡಿ ಲೋಕಸಭಾ ಚುನಾವಣೆಯ ಸಿದ್ಧತಾ ಸಭೆಗಳನ್ನು ಮಾಡಬೇಕಾಗುತ್ತದೆ. ತಾಲೂಕು ಮಟ್ಟದಲ್ಲಿ 350 ಕಾರ್ಯಾಗಾರ ನಡೆಯಲಿದ್ದು, ನಿಯುಕ್ತಿಗೊಂಡಿರುವ ಕಾರ್ಯಕರ್ತರು ತಮ್ಮ ಗ್ರಾಮಗಳನ್ನು ಬಿಟ್ಟು ಇತರ ಗ್ರಾಮಗಳಿಗೆ ತೆರಳಿ ಕೇಂದ್ರ ಸರಕಾರದ ಪ್ರಮುಖ ಯೋಜನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಮನೆ-ಮನೆಗೆ ಮೋದಿ ಸರಕಾರದ ಸಾಧನೆಯ ಪ್ರಚಾರ, ಮೋದಿ ಗ್ಯಾರಂಟಿಯ ಫಲಾನುಭವಿಗಳನ್ನು ತಲುಪುವ ಅಭಿಯಾನ, ಬೂತ್ ಸಶಕ್ತೀಕರಣದ ಜತೆಗೆ ಕಾರ್ಯಕರ್ತರಿಗೆ ಬಲ ತುಂಬುವ ಕಾರ್ಯ ಆಗಲಿದೆ. ಅಲ್ಲದೆ, ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧವೂ ಅರಿವು ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.