BJP: ತೆಲಂಗಾಣಕ್ಕೆ OBC ಸಿಎಂ- ಅಧಿಕಾರಕ್ಕೇರಿದರೆ ಹಿಂದುಳಿದ ವರ್ಗಕ್ಕೆ ಆದ್ಯತೆ: ಶಾ ಘೋಷಣೆ


Team Udayavani, Oct 27, 2023, 7:17 PM IST

Amith shah

ನವದೆಹಲಿ: “ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರಿದರೆ ಹಿಂದುಳಿದ ವರ್ಗದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ.

ಪಂಚರಾಜ್ಯ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹಿಂದುಳಿದ ವರ್ಗಗಳನ್ನು ಓಲೈಸುತ್ತಿರುವ ಬಿಜೆಪಿ, ಈಗ ತೆಲಂಗಾಣದಲ್ಲಿ ಕಾಂಗ್ರೆಸ್‌ ಹಾಗೂ ಬಿಆರ್‌ಎಸ್‌ ವಿರುದ್ಧ “ಒಬಿಸಿ ಸಿಎಂ” ಅಸ್ತ್ರ ಪ್ರಯೋಗಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಚುನಾವಣಾ ಭಾಷಣವೊಂದರಲ್ಲಿ “ನಾನು ಹಿಂದುಳಿದ ವರ್ಗದವನೆಂಬ ಕಾರಣಕ್ಕಾಗಿ ಕಾಂಗ್ರೆಸ್‌ ಹಾಗೂ ಇತರೆ ಪ್ರತಿಪಕ್ಷಗಳು ನನ್ನನ್ನು ದೂಷಿಸುತ್ತಿವೆ” ಎಂದು ಹೇಳಿಕೊಂಡಿದ್ದರು.

ಸೂರ್ಯಪೇಟ್‌ನಲ್ಲಿ ಶುಕ್ರವಾರ ಚುನಾವಣಾ ರ್ಯಾಲಿ ನಡೆಸಿದ ಸಚಿವ ಅಮಿತ್‌ ಶಾ, “ಹಾಲಿ ಸಿಎಂ ಕೆಸಿಆರ್‌ ತಮ್ಮ ಪುತ್ರ ಕೆ.ಟಿ. ರಾಮರಾವ್‌ರನ್ನು ಸಿಎಂ ಆಗಿಸಲು ಉತ್ಸುಕರಾಗಿದ್ದರೆ, ಕಾಂಗ್ರೆಸ್‌ ನಾಯಕಿ ಸೋನಿಯಾ ತಮ್ಮ ಪುತ್ರ ರಾಹುಲ್‌ರನ್ನು ಪಿಎಂ ಆಗಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ, ನಾವು ಇತರೆ ಪಕ್ಷಗಳಂತೆ ಅಲ್ಲ. ನೀವು ಬಿಜೆಪಿಯನ್ನು ಗೆಲ್ಲಿಸಿ. ರಾಜ್ಯದ ಮುಂದಿನ ಸಿಎಂ ಹಿಂದುಳಿದ ವರ್ಗದವರೇ ಆಗಿರುತ್ತಾರೆ. ಇದನ್ನು ನಾವು ನಿರ್ಧರಿಸಿಯಾಗಿದೆ” ಎಂದಿದ್ದಾರೆ.

ಇದೇ ವೇಳೆ, ಪಲೈರ್‌ನಲ್ಲಿ ರ್ಯಾಲಿ ನಡೆಸಿ ಮಾತನಾಡಿದ ಸಿಎಂ ಕೆ.ಚಂದ್ರಶೇಖರ್‌ ರಾವ್‌, “ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೈತ ಬಂಧು, ರೈತರಿಗೆ ಉಚಿತ ವಿದ್ಯುತ್‌ ಸೇರಿದಂತೆ ಬಡವರ ಕಲ್ಯಾಣ ಯೋಜನೆಗಳೆಲ್ಲ ರದ್ದಾಗುತ್ತವೆ” ಎಂದಿದ್ದಾರೆ.

ಭದ್ರತೆಗೆ ಸಿದ್ಧತೆ:
ಪಂಚರಾಜ್ಯ ಚುನಾವಣೆ ವೇಳೆ ಭದ್ರತೆಗಾಗಿ ಸುಮಾರು 1,700 ಸಿಎಪಿಎಫ್ ಮತ್ತು ರಾಜ್ಯ ಪೊಲೀಸ್‌ ತುಕಡಿಗಳನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 1,700 ತುಕಡಿಗಳಲ್ಲಿ ಒಟ್ಟು 1.5 ಲಕ್ಷ ಸಿಬ್ಬಂದಿ ಇರಲಿದ್ದಾರೆ. ನವೆಂಬರ್‌ ಆರಂಭದಲ್ಲೇ ಬಹುತೇಕ ಮಂದಿಯನ್ನು ಆಯಾ ರಾಜ್ಯಗಳಿಗೆ ಕಳುಹಿಸಲಾಗುವುದು ಎಂದೂ ಹೇಳಲಾಗಿದೆ.

5 ಗ್ಯಾರಂಟಿ ಘೋಷಿಸಿದ ಗೆಹ್ಲೋಟ್‌
ಕಾಂಗ್ರೆಸ್‌ ನಾಯಕ, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಶುಕ್ರವಾರ ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಹಳೆಯ ಪಿಂಚಣಿ ಯೋಜನೆ ಜಾರಿ, ಕೆಜಿಗೆ 2 ರೂ.ಗಳಂತೆ ಹಸುವಿನ ಸಗಣಿ ಖರೀದಿ, ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅಥವಾ ಟ್ಯಾಬ್ಲೆಟ್‌, ನೈಸರ್ಗಿಕ ವಿಕೋಪದಿಂದ ಆಗುವ ನಷ್ಟಕ್ಕೆ 15 ಲಕ್ಷ ರೂ.ಗಳ ವಿಮೆ, 1 ಕೋಟಿ ಮಹಿಳೆಯರಿಗೆ 3 ವರ್ಷಗಳ ಕಾಲ ಇಂಟರ್ನೆಟ್‌ಸಹಿತ ಸ್ಮಾರ್ಟ್‌ಫೋನ್‌ ಒದಗಿಸುವ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಇ.ಡಿ. ದಾಳಿ ಬಗ್ಗೆ ಪ್ರಸ್ತಾಪಿಸುವ ವೇಳೆ ವಿವಾದಾತ್ಮಕ ಹೇಳಿಕೆ ನೀಡಿರುವ ಗೆಹ್ಲೋಟ್‌, “ನಮ್ಮ ದೇಶದಲ್ಲಿ ಈಗ ಬೀದಿನಾಯಿಗಳಿಗಿಂತಲೂ ಹೆಚ್ಚು ಇ.ಡಿ. ಅಧಿಕಾರಿಗಳೇ ತಿರುಗಾಡುತ್ತಿದ್ದಾರೆ”ಎಂದಿದ್ದಾರೆ.

ಶ್ರೀರಾಮನನ್ನು ಪೂಜಿಸುವುದಾಗಿ ಛತ್ತೀಸ್‌ಗಡ ಸಿಎಂ ಭೂಪೇಶ್‌ ಬಘೇಲ್‌ ಹೇಳುತ್ತಾರೆ. ಹಾಗಿದ್ದರೆ, ಡಿಎಂಕೆ ನಾಯಕರು ಸನಾತನ ಧರ್ಮವನ್ನು ಅವಹೇಳನ ಮಾಡುತ್ತಿದ್ದಾಗ ನೀವು ಮೌನ ವಹಿಸಿದ್ದೇಕೆ?
– ರವಿಶಂಕರ್‌ ಪ್ರಸಾದ್‌, ಬಿಜೆಪಿ ನಾಯಕ

ಮಿಜೋಯೇತರ ಮತದಾರರತ್ತ ಬಿಜೆಪಿ ಕಣ್ಣು
ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಪಕ್ಷದ ಬಲವರ್ಧನೆಗೆ ಬಿಜೆಪಿ ಪಣತೊಟ್ಟಿದೆ. ಹಾಲಿ ವಿಧಾನಸಭೆಯಲ್ಲಿ ಬಿಜೆಪಿ ಕೇವಲ ಒಬ್ಬ ಶಾಸಕನನ್ನು ಹೊಂದಿದೆ. 2018ರಲ್ಲಿ ಆಯ್ಕೆಯಾಗಿರುವ ಬಿ.ಡಿ.ಚಕಾ¾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಬಾರಿ ಸ್ಪರ್ಧಿಸಿದ್ದ 39 ಬಿಜೆಪಿ ಅಭ್ಯರ್ಥಿಗಳ ಪೈಕಿ ಕೆಲವರು ದ್ವಿತೀಯ, ತೃತೀಯ, 4ನೇ ಸ್ಥಾನಕ್ಕೆ ಇಳಿದಿದ್ದರು. ಹೀಗಾಗಿ, ಈ ಬಾರಿ 23 ಮಂದಿಯನ್ನು ಮಾತ್ರ ಕಣಕ್ಕಿಳಿಸಿದೆ.

ಪ್ರಸಕ್ತ ಚುನಾವಣೆಯಲ್ಲಿ ಶಕ್ತಿ ವರ್ಧಿಸುವ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಯತ್ನ ನಡೆದಿದ್ದು, ನಾಗಾಲ್ಯಾಂಡ್‌ನ‌ ಡಿಸಿಎಂ ವೈ.ಪಟ್ಟೋನ್‌ ಅವರು ಮಾಮಿತ್‌, ದಂಪಾ ಮತ್ತು ಹಚ್ಚೆಕ್‌ ಎಂಬ 3 ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಧಾನಿ ಮೋದಿಯವರು 30ರಂದು ಮಾಮಿತ್‌ನಲ್ಲಿ ಬೃಹತ್‌ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಜಧಾನಿ ಐಜ್ವಾಲ್‌, ಲುಂಗ್ಲೆಲಿ ಎಂಬ ದೊಡ್ಡ ನಗರಗಳನ್ನು ಬಿಟ್ಟು ಸಣ್ಣ ನಗರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.

ಅಂದ ಹಾಗೆ ಈಶಾನ್ಯದ ಪುಟ್ಟ ರಾಜ್ಯದ ಒಟ್ಟು ಜನಸಂಖ್ಯೆಯ ಪೈಕಿ ಶೇ.87ರಷ್ಟು ಮಂದಿ ಕ್ರಿಶ್ಚಿಯನ್ನರೇ ಇದ್ದಾರೆ. ಮಣಿಪುರ ಗಲಭೆಯ ಬಳಿಕ ಮಿಜೋ ಕ್ರಿಶ್ಚಿಯನ್ನರು ಬಿಜೆಪಿಯಿಂದ ದೂರ ಸರಿದಿದ್ದಾರೆ. ಇತ್ತೀಚೆಗಷ್ಟೇ ಮಿಜೋರಾಂ ಸಿಎಂ ಝೊರಾಮ್‌ತಂಗಾ ಅವರು, “ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ’ ಎಂದು ಹೇಳಿರುವುದರ ಹಿಂದೆ ಮಿಜೋ ಕ್ರಿಶ್ಚಿಯನ್ನರ ಕೆಂಗಣ್ಣಿಗೆ ತುತ್ತಾಗುವುದರಿಂದ ತಪ್ಪಿಸಿಕೊಳ್ಳುವ ಪ್ಲ್ರಾನ್‌ ಅಡಗಿತ್ತು ಎನ್ನುವುದು ಸ್ಪಷ್ಟ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಬ್ರೂ, ಚಕ್ಮಾ ಮುಂತಾದ ಮಿಜೋಯೇತರ ಸಮುದಾಯಗಳ ಮತಗಳನ್ನು ನೆಚ್ಚಿಕೊಂಡಿದೆ. ಈಗಾಗಲೇ ಈ ಸಮುದಾಯಗಳಿಗೆ ಕೇಂದ್ರ ಸರ್ಕಾರವು ಹಲವು ಸೌಲಭ್ಯಗಳನ್ನು ಒದಗಿಸಿದ್ದು, ಅವುಗಳನ್ನು ಮತಗಳನ್ನಾಗಿ ಪರಿವರ್ತಿಸಲು ಸತತ ಪ್ರಯತ್ನ ನಡೆಸುತ್ತಿದೆ.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.