![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jan 6, 2022, 5:15 AM IST
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಜ. 7ರಿಂದ 9ರ ವರೆಗೆ ಮೂರು ನಡೆಯಬೇಕಿದ್ದ ರಾಜ್ಯ ಬಿಜೆಪಿ ಬೈಠಕ್ ಸಭೆ ಮುಂದೂಡಲಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಸರಕಾರ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸದಂತೆ ನಿಯಮ ಜಾರಿಗೊಳಿಸಿದ್ದು, ವಾರಾಂ ತ್ಯದ ಕರ್ಫ್ಯೂ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಬೈಠಕ್ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿಯೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದು, ಸರಕಾರ ಹಾಗೂ ಆಡಳಿತ ಪಕ್ಷವಾಗಿ ಬಿಜೆಪಿ ಕೊರೊನಾ ನಿಯಮ ವನ್ನು ಕಡ್ಡಾಯವಾಗಿ ಪಾಲಿಸಬೇಕು. ಅದಕ್ಕಾಗಿ ಪಕ್ಷದ ಕಾರ್ಯಕ್ರಮಗಳನ್ನು ಮುಂದೂಡುವಂತೆ ಸೂಚನೆ ನೀಡಿದ್ದರು ಎಂದು ತಿಳಿದು ಬಂದಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರದ ನಿಯಮ ಪಾಲಿಸಲು ಮೂರು ದಿನಗಳ ಬೈಠಕ್ ಮುಂದೂಡಲಾಗಿದೆ. ಕೊರೊನಾ 3ನೇ ಅಲೆಯ ಪ್ರಭಾವ ಕಡಿಮೆಯಾದ ಮೇಲೆ ಮತ್ತೆ ಬೈಠಕ್ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಂದೂ ಮಹಿಳೆಯರ ಟಾರ್ಗೆಟ್ ಮಾಡುತ್ತಿದ್ದ ಜಾಲ ಬಯಲಿಗೆ
ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ?
ಕೋವಿಡ್ ಪ್ರಕರಣಗಳು ಹೆಚ್ಚಾಗು ತ್ತಿರುವುದರಿಂದ ರಾಜ್ಯ ಸರಕಾರ ಕೊವಿಡ್ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಸಂದರ್ಭದಲ್ಲಿ ಪಕ್ಷದ ಎಲ್ಲ ಸಮಾರಂಭಗಳನ್ನು ಮುಂದೂಡಲಾಗಿದೆ. ಬೈಠಕ್‌ನಲ್ಲಿ ಸಚಿವವರ ಕಾರ್ಯವೈಖರಿ ಬಗ್ಗೆಯೇ ಹೆಚ್ಚು ಚರ್ಚೆ ನಡೆಸಿ, ಕಳಪೆ ಸಾಧನೆ ಮಾಡಿರುವ ಸಚಿವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಮೂರು ದಿನದ ಬೈಠಕ್ ಮುಂದೂಡಿಕೆ ಯಾಗಿದ್ದರಿಂದ ಸಂಕ್ರಾಂತಿ ಹೊತ್ತಿಗೆ ನಡೆಯುವ ಸಾಧ್ಯತೆ ಇದೆ ಎಂದು ಸಂಪುಟ ಪುನಾರಚನೆ ಮುಂದೂಡಿಕೆ ಯಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.