ರಮೇಶ್ ಕುಮಾರ್ ವಿರುದ್ಧ ಬಿಜೆಪಿ ನಾರಿಯರ ಆಕ್ರೋಶ
Team Udayavani, Dec 21, 2021, 3:04 PM IST
ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನದ ಸದನದಲ್ಲಿ ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶಕುಮಾರ್ ಮಹಿಳೆಯರ ಬಗ್ಗೆ ನೀಡಿರುವ ಅತ್ಯಾಚಾರ ಹೇಳಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆಯರನ್ನು ಗೌರವದಿಂದ ಕಾಣುವ ಭಾರತದಲ್ಲಿ ಜನಪ್ರತಿನಿಧಿಯಾಗಿ ಇಂಥ ಹೇಳಿಕೆ ನೀಡಿರುವುದು ಮಹಿಳಾ ಕುಲಕ್ಕೆ ಅವಮಾನ ಮಾಡಿದಂತಾಗಿದೆ. ಮಹಿಳೆಯರು ತಲೆ
ತಗ್ಗಿಸುವಂಥ ಹೇಳಿಕೆ ನೀಡಿದ್ದಾರೆ. ಹೀಗಾಗಿ ಶಾಸಕ ರಮೇಶಕುಮಾರರಾಜೀನಾಮೆನೀಡಬೇಕುಎಂದು ಆಗ್ರಹಿಸಿದರು. ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿ ಶಾಸಕ ರಮೇಶಕುಮಾರ ಹೇಳಿಕೆ ಅಕ್ಷಮ್ಯ ಅಪರಾಧವಾಗಿದೆ. ಶಾಸಕ ಸ್ಥಾನಕ್ಕೆ ರಮೇಶಕುಮಾರ ರಾಜೀನಾಮೆ ನೀಡಬೇಕು. ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಶಾಸಕ ರಮೇಶ್‌ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತೆಯರನ್ನು ಹಲಗಾ ಬ್ರಿಡ್ಜ್ ಬಳಿ ಪೊಲೀಸರು ತಡೆದರು.
ಮಹಿಳೆಯರುಕೆಲ ಹೊತ್ತು ರಸ್ತೆ ಮೇಲೆಯೇಕುಳಿತು ಪ್ರತಿಭಟಿಸಿದರು.
ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷೆ ಡಾ| ಸೋನಾಲಿ ಸರ್ನೋಬತ್, ನಗರ ಅಧ್ಯಕ್ಷೆ
ಸುವರ್ಣಾ ಪಾಟೀಲ, ರೇಖಾ ಚಿನ್ನಾಕಟ್ಟಿ, ಶಾಂಭವಿ ಅಶ್ವತ್ಥಪುರ ಸೇರಿದಂತೆ ಇತರರು ಇದ್ದರು.
ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಿರಿ: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ವಿದ್ಯುತ್ ಖಾಸಗೀಕರಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದವರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.