BJP: ಲೋಕಸಭೆ ಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಗಳು?

ಬೊಮ್ಮಾಯಿ, ಲಿಂಬಾವಳಿ, ಜನಾರ್ದನ ರೆಡ್ಡಿ, ರಾಮುಲು, ಯತ್ನಾಳ್‌ ಸ್ಪರ್ಧೆ?

Team Udayavani, Jan 28, 2024, 1:15 AM IST

BJP FLAG 1

ಬೆಂಗಳೂರು: ರಾಜ್ಯ ರಾಜಕಾರಣ ದಲ್ಲಿ ಸಕ್ರಿಯರಾಗಿರುವ ಕೆಲವು ಹಿರಿಯ ನಾಯಕರನ್ನು ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿಸಲು ಬಿಜೆಪಿ ನಾಯಕರು ಲೆಕ್ಕ ಹಾಕುತ್ತಿದ್ದು, ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿಯವರನ್ನು ಮರಳಿ ಪಕ್ಷಕ್ಕೆ ಕರೆತಂದು ಕೊಪ್ಪಳ ಕ್ಷೇತ್ರದಿಂದ ಅಭ್ಯರ್ಥಿ ಯಾಗಿಸಲು ಪ್ರಯತ್ನ ಪ್ರಾರಂಭವಾಗಿದೆ.

“ಘರ್‌ ವಾಪ್ಸಿ’ ಅಭಿಯಾನದ ಭಾಗವಾಗಿ ರೆಡ್ಡಿಯವರನ್ನು ವಾಪಸು ಕರೆತರುವ ಪ್ರಯತ್ನ ನಡೆಯುತ್ತಿದೆ. ಜತೆಗೆ ಮಾಜಿ ಸಚಿವರಾದ ಬಿ.ಶ್ರೀರಾಮುಲು ಹಾಗೂ ಅರವಿಂದ ಲಿಂಬಾವಳಿಯವರಿಗೂ ಸ್ಪರ್ಧಿಸಬೇಕೆಂಬ ಸಂದೇಶವನ್ನು ನೀಡಿದ್ದು, ಇನ್ನೂ ಕೆಲವು ಅಚ್ಚರಿಯ ಹೆಸರುಗಳನ್ನು ಅಭ್ಯರ್ಥಿ ಯಾದಿ ಯಲ್ಲಿ ಬಿಜೆಪಿ ಇರಿಸಿಕೊಂಡಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಬಾರಿ ಬಿಜೆಪಿ ಸಂಸದರಿಗೆ ಆಡಳಿತ ವಿರೋಧಿ ಅಲೆ ಕಾಣಿಸಿಕೊಂಡಿದೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ವಿರುದ್ಧ ಪಕ್ಷದ ಮೇಲ್ಮಟ್ಟದ ನಾಯಕರು ಮುನಿಸಿಕೊಂಡಿದ್ದರೆ ಸ್ಥಳೀಯವಾಗಿ ಕಾರ್ಯ ಕರ್ತರ ವಿರೋಧವಿದೆ. ಇಲ್ಲಿ ಸದ್ಯ ಕಾಂಗ್ರೆಸ್‌ ಪರ ವಾತಾವರಣ ಇದ್ದು, ಸಂಗಣ್ಣ ಸ್ಪರ್ಧಿಸಿದರೆ ಗೆಲುವು ಕಷ್ಟ ಎಂಬ ಅಭಿಪ್ರಾಯ ಆಂತರಿಕ ಸಮೀಕ್ಷೆಯಿಂದಲೂ ಬೆಳಕಿಗೆ ಬಂದಿದೆ. ಹೀಗಾಗಿ ರೆಡ್ಡಿಯವರನ್ನು ವಾಪಸು ಕರೆ ತರುವ ಲೆಕ್ಕಾಚಾರ ಸದ್ದಿಲ್ಲದೆ ನಡೆಯುತ್ತಿದೆ.
ಈ ಹೊಣೆಯನ್ನು ರೆಡ್ಡಿ ಆಪ್ತ ಬಿ. ಶ್ರೀರಾಮುಲು ಅವರಿಗೆ ನೀಡಲಾಗಿದೆ ಎನ್ನಲಾಗಿದೆ.

ವಿಶೇಷವೆಂದರೆ ಖುದ್ದು ಶ್ರೀರಾಮುಲು ಅವರಿಗೂ ಸ್ಪರ್ಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೂಚಿಸಿದ್ದಾರೆ ಎನ್ನಲಾಗಿದ್ದು, ಅವರು ಬಳ್ಳಾರಿಯಿಂದ ಕಣಕ್ಕೆ ಇಳಿಯುವುದು ಬಹುತೇಕ ಅಂತಿಮ ಗೊಂಡಿದೆ.

ವಿಜಯಪುರಕ್ಕೆ ಲಿಂಬಾವಳಿ?
ಅಚ್ಚರಿಯ ಹೆಸರುಗಳ ಪೈಕಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದ್ದು, ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಿಸಿರುವ ಬಗ್ಗೆ ಪಕ್ಷದಲ್ಲಿ ಇಂದಿಗೂ ಅಸಮಾಧಾನವಿದ್ದು, ರಮೇಶ್‌ ಜಿಗಜಿಣಗಿ ಬದಲು ಲಿಂಬಾವಳಿ ಅಭ್ಯರ್ಥಿಯಾಗಲಿದ್ದಾರೆ ಎನ್ನುತ್ತವೆ ಬಿಜೆಪಿಯ ಉನ್ನತ ಮೂಲಗಳು.
ಅದೇ ರೀತಿ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಬಾಗಲಕೋಟೆಯಿಂದ ಸ್ಪರ್ಧಿಸಲು ವರಿಷ್ಠರಿಂದ ಸೂಚನೆ ಇದೆ ಎನ್ನಲಾಗಿದೆ. ಹಾಲಿ ಸಂಸದರಾದ ಗದ್ದಿಗೌಡರ್‌ ಹಾಗೂ ರಮೇಶ್‌ ಜಿಗಜಿಣಗಿಯವರಿಗೆ ವಯಸ್ಸಿನ ಕಾರಣಕ್ಕಾಗಿ ಟಿಕೆಟ್‌ ಸಿಗದು ಎನ್ನಲಾಗುತ್ತಿದೆ. ಜತೆಗೆ ಹಾವೇರಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ.

ಮೈತ್ರಿ ಧರ್ಮಕ್ಕೆ ಸಂಸದ ಮುನಿಸ್ವಾಮಿ ತ್ಯಾಗ?
ಬಿಜೆಪಿ-ಜೆಡಿಎಸ್‌ ಮೈತ್ರಿಯ ಫ‌ಲವಾಗಿ ಕೋಲಾರ ಸಂಸದ ಮುನಿಸ್ವಾಮಿ ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ. ಕೋಲಾರ ಕ್ಷೇತ್ರವನ್ನು ಜೆಡಿಎಸ್‌ ನಾಯಕರು ಈಗಾಗಲೇ ಕೇಳಿದ್ದು, ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಮಾತ್ರ ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ. ಹೀಗಾಗಿ ಮುನಿಸ್ವಾಮಿಗೆ ಈ ಬಾರಿ ಅವಕಾಶ ಸಿಗದು ಎನ್ನಲಾಗುತ್ತಿದೆ. ಅದೇ ರೀತಿ ಮಂಡ್ಯದಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾರ್ಯಕಾರಿಣಿಗೆ ಗೈರಾದವರು

ಬಸನಗೌಡ ಯತ್ನಾಳ್‌, ವಿ. ಸೋಮಣ್ಣ, ರಮೇಶ್‌ ಜಾರಕಿಹೊಳಿ, ಶಿವರಾಮ್‌ ಹೆಬ್ಟಾರ್‌ ಹಾಗೂ ಎಸ್‌.ಟಿ. ಸೋಮಶೇಖರ್‌ ಕಾರ್ಯ ಕಾರಿಣಿಯಿಂದ ದೂರ ಉಳಿದಿದ್ದರು. ಸೋಮಶೇಖರ್‌ ಅವರು ಸಿಎಂ ಕಾರಿನಲ್ಲಿ ಕಾಣಿಸಿಕೊಂಡಿದ್ದು ಬಿಜೆಪಿಗರನ್ನು ಕೆರಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್‌. ಅಶೋಕ್‌, ಕಾರಣಾಂತರಗಳಿಂದ ಕೆಲವರು ಬಂದಿಲ್ಲ. ಗೈರಾದವರ ಜತೆ ರಾಜ್ಯಾಧ್ಯಕ್ಷರು ಮಾತನಾಡುತ್ತಾರೆ ಎಂದರು.

ಫೆಬ್ರವರಿಯಲ್ಲಿ ಶಾ, ನಡ್ಡಾ , ರಾಜನಾಥ್‌ ಸಿಂಗ್‌ ರಾಜ್ಯ ಪ್ರವಾಸ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಕೇಂದ್ರ ನಾಯಕರಾದ ಅಮಿತ್‌ ಶಾ, ಜೆ.ಪಿ. ನಡ್ಡಾ ಹಾಗೂ ರಾಜನಾಥ್‌ ಸಿಂಗ್‌ ಫೆಬ್ರವರಿಯಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವರು.

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಹಿರಿಯ ನಾಯ ಕರು ಈ ವಿಷಯ ತಿಳಿಸಿದ್ದು, ಚುನಾವಣೆಯ ವರೆಗೆ ಕಾರ್ಯಕರ್ತರು ನಡೆಸ ಬೇಕಾದ ಕಾರ್ಯಗಳ ಬಗ್ಗೆ ವಿವರಿಸಲಾಗಿದೆ. 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬ ಕೇಂದ್ರ ನಾಯಕರ ಸಂದೇಶವನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ರಾಜ್ಯ ಘಟಕಕ್ಕೆ ತಿಳಿಸಿದ್ದಾರೆ. ರಾಜ್ಯದ ಕ್ಷೇತ್ರಗಳನ್ನು 8 ಕ್ಲಸ್ಟರ್‌ಗಳಾಗಿ ವಿಂಗಡಿಸಲಾಗಿದೆ. ಪ್ರತೀ ಕ್ಲಸ್ಟರ್‌ನಲ್ಲಿ ನಡ್ಡಾ, ರಾಜನಾಥ್‌ ಸಿಂಗ್‌ ಹಾಗೂ ಶಾ ಪ್ರವಾಸ ನಡೆಸಿದ ಬಳಿಕ ಟಿಕೆಟ್‌ ಹಂಚಿಕೆ ಬಗ್ಗೆ ಚಿಂತನೆ ನಡೆಯಲಿದೆ.

ಎರಡು ನಿರ್ಣಯ: ಖಂಡನೆ, ಅಭಿನಂದನೆ

ಬಾಲರಾಮನ ಪ್ರಾಣಪ್ರತಿಷ್ಠಾಪನೆಯನ್ನು ಯಶಸ್ವಿಯಾಗಿ ನೆರವೇರಿಸಿದ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ.

ಯಾವ ಕ್ಷಣದಲ್ಲಿ ಬೇಕಾದರೂ ಲೋಕಸಭೆ ಚುನಾವಣೆ ಘೋಷಣೆ ಆಗಬಹುದು. ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬೇಡಿ. ಮೈಮರೆಯದೆ
ಕೆಲಸ ಮಾಡಿ.

- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.