BJP: ಮುನಿಸು ತಣಿಸಲು ನಾನಾ ಕಸರತ್ತು

ರಮೇಶ್‌ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ- ಸೋಮಣ್ಣ ಭೇಟಿಗೂ ಸಿದ್ಧ ಎಂದ ಬಿಎಸ್‌ವೈ

Team Udayavani, Nov 23, 2023, 10:22 PM IST

BJP FLAG 2

ಬೆಂಗಳೂರು: ಪಕ್ಷದಲ್ಲಿರುವ ಅಸಮಾಧಾನಿತರನ್ನು ಭೇಟಿ ಮಾಡಿ, ವಿಶ್ವಾಸಕ್ಕೆ ಪಡೆಯುವ ಪ್ರಯತ್ನವನ್ನು ಮುಂದುವರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಸಂಧಾನ ಮಾತುಕತೆ ನಡೆಸಿದ್ದು, ಅದು ತಕ್ಕ ಮಟ್ಟಿಗೆ ಯಶಸ್ವಿಯಾಗಿದೆ. ಮತ್ತೂಂದೆಡೆ ಮಾಜಿ ಸಚಿವ ಸೋಮಣ್ಣ ಅವರು ಮುನಿಸನ್ನು ಹೊರಹಾಕಿದ್ದು, “ಡಿ. 6ರ ಅನಂತರ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಸೋಮಣ್ಣ ಅವರೊಂದಿಗೂ ಮಾತುಕತೆ ನಡೆಸಿ ಎಲ್ಲವನ್ನೂ ಸರಿಪಡಿಸುವುದಾಗಿ ಹೇಳಿದ್ದಾರೆ.

ಗುರುವಾರ ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿನ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ನಿವಾಸಕ್ಕೆ ತೆರಳಿದ ವಿಜಯೇಂದ್ರ, ಅಲ್ಲಿಯೇ ಉಪಾಹಾರ ಸೇವಿಸಿದರಲ್ಲದೆ, ಸುಮಾರು ಅರ್ಧ ತಾಸು ಮಾತುಕತೆ ನಡೆಸಿದರು. ಅನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಹಿರಿಯರ ಸಹಿತ ಯಾರು ಏನೇ ಹೇಳಿಕೆ ಕೊಟ್ಟರೂ ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಒಟ್ಟಾಗಿ ಶ್ರಮಿಸೋಣ ಎಂದು ಜಾರಕಿಹೊಳಿ ಅವರೇ ತಿಳಿಸಿದ್ದಾಗಿ ಹೇಳಿದರು.

ನೋವು ತೋಡಿಕೊಂಡಿದ್ದಾರೆ
ರಮೇಶ್‌ ಜಾರಕಿಹೊಳಿ ಅವರ ನಡೆಯ ಬಗ್ಗೆ ಹಲವಾರು ಚರ್ಚೆಗಳು ನಡೆಯುತ್ತಿದ್ದವು. ಕೆಲವು ಸಂದರ್ಭಗಳಲ್ಲಿ ಅವರು ಅಸಮಾಧಾನವನ್ನೂ ತೋಡಿಕೊಂಡಿದ್ದರು. ಇಂದು ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಕೆಲವು ನೋವುಗಳನ್ನು ತೋಡಿಕೊಂಡಿದ್ದಾರೆ. ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜತೆಯಾಗಿ ಪ್ರಧಾನಿ ಮೋದಿ ಅವರ ಕೈಗಳನ್ನು ಬಲಪಡಿಸುತ್ತೇವೆ ಎಂದರು.

ವೈಮನಸ್ಸು ಮರೆತು ಒಂದಾಗಿದ್ದೇವೆ
ಇದಕ್ಕೆ ಪುಷ್ಟಿ ಕೊಟ್ಟಂತೆ ರಮೇಶ್‌ ಜಾರಕಿಹೊಳಿ ಕೂಡ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದು, ಮನುಷ್ಯ ಎಂದ ಮೇಲೆ ಅಸಮಾಧಾನಗಳು ಸಹಜ. ಯಾವ ವೈಮನಸ್ಯವೂ ಇಲ್ಲ. ಎಲ್ಲವೂ ಸರಿಯಾಗಿದೆ. ವರಿಷ್ಠರು ನಿರ್ಣಯ ಕೈಗೊಂಡಿದ್ದಾರೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ಮುಂದಿರುವ ಗುರಿ. ಬಸನಗೌಡ ಪಾಟೀಲ್‌ ಯತ್ನಾಳ್‌, ಸುನಿಲ್‌ ಮತ್ತು ನಾನು ಇದೇ ನಿರ್ಣಯವನ್ನು ಬುಧವಾರದ ಸಭೆಯಲ್ಲೂ ತೆಗೆದುಕೊಂಡಿದ್ದೆವು. ಅದನ್ನೇ ಇಂದು ವಿಜಯೇಂದ್ರ ಕೂಡ ಹೇಳಿದ್ದಾರೆ. ವರಿಷ್ಠರ ತೀರ್ಮಾನ ಒಪ್ಪಿ, ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

ಸೋಮಣ್ಣ ಭೇಟಿ: ಬಿಎಸ್‌ವೈ
ಇತ್ತ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರ ಕಚೇರಿ ಪೂಜೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಮುಂಬರುವ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಸೇರಿ ಪಕ್ಷ ಬಲಪಡಿಸುತ್ತೇವೆ. ಎಲ್ಲರನ್ನೂ ಮಾತನಾಡಿಸಿ, ಒಟ್ಟಿಗೆ ಕರೆದೊಯ್ಯುವ ಪ್ರಯತ್ನವನ್ನು ಅಶೋಕ್‌ ಹಾಗೂ ವಿಜಯೇಂದ್ರ ಮಾಡುತ್ತಿದ್ದಾರೆ. ಯಾರೂ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಸಚಿವ ವಿ. ಸೋಮಣ್ಣ ಮೈಸೂರಿನಲ್ಲಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇವೆ. ಮಾತನಾಡುತ್ತೇವೆ. ಅವರೂ ಒಳ್ಳೆಯ ಸಂಘಟಕರು. ಎಲ್ಲರೂ ಸೇರಿ ಅವರನ್ನೂ ನಮ್ಮ ಜತೆ ಕರೆದೊಯ್ಯುತ್ತೇವೆ. ಅವರ ಅನುಭವವನ್ನು ಬಳಸಿಕೊಂಡು ಪಕ್ಷವನ್ನು ಬಲಪಡಿಸುತ್ತೇವೆ ಎಂದರು.

ಪ್ರತಿಯೊಬ್ಬರೂ ಅವರವರ ಅಭಿಪ್ರಾಯ ತಿಳಿಸುತ್ತಾರೆ. ಅದನ್ನು ತಿಳಿಸುವ ಧಾಟಿ ಒಬ್ಬೊಬ್ಬರದ್ದು ಒಂದೊಂದು ರೀತಿ ಇರುತ್ತದೆ. ಯಾರು ಏನೇ ಹೇಳಿದರೂ ಅದನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಅಪಾರ್ಥ ಮಾಡಿಕೊಳ್ಳುವುದಿಲ್ಲ. ಎಲ್ಲರ ಮನವೊಲಿಸಿ ಅವರ ಸಹಕಾರದೊಂದಿಗೆ ಮುನ್ನಡೆಯುತ್ತೇನೆ.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ರಾಜ್ಯದಲ್ಲಿ ಈಗ ಚುನಾವಣೆ ನಡೆದರೂ ಬಿಜೆಪಿ ಬಹುಮತ ಪಡೆಯುತ್ತದೆ. ಅಂತಹ ವಾತಾವರಣ ಸೃಷ್ಟಿಯಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಈ ಸರಕಾರವನ್ನು ಆದಷ್ಟು ಬೇಗ ಕಿತ್ತೂಗೆಯಬೇಕೆಂಬ ಅಪೇಕ್ಷೆ ಜನರಲ್ಲಿದೆ. ಈ ನಿಟ್ಟಿನಲ್ಲಿ ಈಗಿನಿಂದಲೇ ವಿಶೇಷ ಪ್ರಯತ್ನ ನಡೆಸುತ್ತೇವೆ.
ಬಿ.ಎಸ್‌. ಯಡಿಯೂರಪ್ಪ, ಮಾಜಿ ಸಿಎಂ

ಟಾಪ್ ನ್ಯೂಸ್

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.