BJP Vs ಸಿಎಂ ಸಿದ್ದರಾಮಯ್ಯ ಮುಡಾ ಕಾಳಗ
Team Udayavani, Jul 5, 2024, 6:20 AM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಈಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸರಕಾರದ ವಿರುದ್ಧ ವಿಪಕ್ಷಗಳಿಗೆ ಬ್ರಹ್ಮಾಸ್ತ್ರ ಲಭಿಸಿದಂತಾಗಿದೆ. ಪ್ರಕರಣದ ಸಂಬಂಧ ಮಾಜಿ ಸಿಎಂ ಬಿಎಸ್‌ವೈ ಸೇರಿ ಬಿಜೆಪಿಯ ಬಹುತೇಕ ನಾಯಕರು ನೇರವಾಗಿ ಸಿಎಂ ಸಿದ್ದರಾಮಯ್ಯ ಮೇಲೆ ಮುಗಿಬಿದ್ದಿದ್ದಾರೆ. ಆರೋಪ-ಪ್ರತ್ಯಾರೋಪಗಳ ಝಲಕ್ ಇಲ್ಲಿದೆ.
ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ
ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ಶಾಮೀಲಾಗಿದೆ. ಮುಖ್ಯಮಂತ್ರಿ ಯವರಿಂದಲೇ ಅಕ್ರಮ ಆಗಿದೆ. ಇದರ ಬಗ್ಗೆ ನಾವು ನೀವು ಜನರಿಗೆ ಮನದಟ್ಟು ಮಾಡಬೇಕಿದೆ. ಭ್ರಷ್ಟಾಚಾರದಲ್ಲಿ ತೊಡಗಿ, ಜನ ವಿರೋಧಿಯಾಗಿ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ತಾಕತ್ತಿದ್ದರೆ ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ.
-ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ
ಸಿಬಿಐ ತನಿಖೆ ಆಗಲಿ
ಸಿಎಂ ಅವರ ಪತ್ನಿ ಅರ್ಜಿ ಸಲ್ಲಿಸಿದ ಬಳಿಕ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಆಗಷ್ಟೇ ಸತ್ಯ ಹೊರಬರಲಿದೆ.
-ಆರ್. ಅಶೋಕ್, ವಿಧಾನಸಭೆ ವಿಪಕ್ಷ ನಾಯಕ
ನಮಗೆ 62 ಕೋಟಿ ರೂ.
ಪರಿಹಾರ ಕೊಟ್ಟುಬಿಡಿ
ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿರು ವುದೇ ತಪ್ಪು ಎಂದಾದರೆ 62 ಕೋಟಿ ರೂ. ಪರಿಹಾರ ಕೊಟ್ಟುಬಿಡಲಿ. 50:50ರಲ್ಲಿ ನಿವೇಶನ ಹಂಚುವ ಕಾನೂನು ತಂದದ್ದೇ ಬಿಜೆಪಿಯವರು. ಅವರೇ ಅದನ್ನು ತಪ್ಪು ಎಂದು ವಿರೋಧಿಸಿದರೆ ಹೇಗೆ? ನನ್ನ ಭಾವಮೈದುನನ ಹೆಸರಲ್ಲಿದ್ದ 3.16 ಎಕರೆಯನ್ನು ನನ್ನ ಪತ್ನಿಗೆ ಉಡುಗೊರೆ ಯಾಗಿ ಕೊಟ್ಟಿದ್ದ. ಅದರಲ್ಲಿ ಮುಡಾದವರು ನಿವೇಶನ ನಿರ್ಮಿಸಿದ್ದಾರೆ. ಕಾನೂನಿನ ಪ್ರಕಾರ ಅದಕ್ಕೆ ಬದಲಿ ಜಮೀನು ಕೊಡಬೇಕಿತ್ತು, ಆ ಪ್ರಕಾರ ಕೊಟ್ಟಿದ್ದಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಎಲ್ಲ ಸಿಬಿಐಗೆ ಕೊಟ್ಟರೆ ನಮಗೇನು ಕೆಲಸ?
ಮುಡಾ ಹಗರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೇ ಕೊಡುವುದಾದರೆ ನಮಗಿಲ್ಲೇನು ಕೆಲಸ? ನಮ್ಮಲ್ಲಿರುವವರೂ ಪೊಲೀಸ್ ಅಧಿಕಾರಿಗಳೇ ಅಲ್ಲವೇ? ಅವರ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲವೇ?
–ಡಾ| ಜಿ. ಪರಮೇಶ್ವರ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.