Ram Mandir: ಅಯೋಧ್ಯೆಗೆ ತೆರಳುವ ಭಕ್ತರಿಗೆ BJP ಕಾರ್ಯಕರ್ತರ ಸಹಾಯ
ಬಿಜೆಪಿ ಕಾರ್ಯತಂತ್ರ ಸಭೆಯಲ್ಲಿ ನಿರ್ಧಾರ
Team Udayavani, Jan 3, 2024, 12:36 AM IST
ಹೊಸದಿಲ್ಲಿ: ಜ.22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಅನಂತರ ಜ. 25ರಿಂದ ಮಾ.25ರವರೆಗೆ ವಿವಿಧ ಭಾಗಗಳಿಂದ ಅಯೋಧ್ಯೆಗೆ ಭೇಟಿ ನೀಡಲು ಬಯಸುವ ಭಕ್ತರಿಗೆ ಬಿಜೆಪಿ ಕಾರ್ಯಕರ್ತರು ಸಹಾಯ ಮಾಡಲಿದ್ದಾರೆ.
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷ ತೆಯಲ್ಲಿ ಬಿಜೆಪಿಯ ಉನ್ನತ ನಾಯಕರು ಭಾಗವಹಿಸಿದ್ದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಇದೇ ವೇಳೆ ಮುಂದಿನ ಲೋಕಸಭೆ ಚುನಾವಣೆ ಗಾಗಿ ಪಕ್ಷದ ಸಿದ್ಧತೆ, ತಂತ್ರ ಗಾರಿಕೆ ಕುರಿತು ಚರ್ಚಿಸಲಾಯಿತು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಬನ್ಸಾಲ್, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಅಶ್ವಿನಿ ವೈಷ್ಣವ್, ಮನ್ಸುಖ್ ಮಾಂಡವೀಯ, ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಸೇರಿದಂತೆ ಹಲವು ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಮ ಮಂದಿರಕ್ಕೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮದಲ್ಲೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಲ್ಲದೇ ಜ.22ರಂದು ಸಮೀಪದ ದೇಗುಲ ಗಳಿಗೆ ಭೇಟಿ ನೀಡುವಂತೆ, ಮನೆಗಳಲ್ಲಿ ದೀಪಗಳನ್ನು ಬೆಳಗುವಂತೆ ಪ್ರತೀ ಮನೆ-ಮನೆಗೆ ತೆರಳಿ ಆರ್ಎಸ್ಎಸ್ ಕಾರ್ಯಕರ್ತರು ಮನವಿ ಮಾಡಲಿದ್ದಾರೆಎಂದು ಬಿಜೆಪಿ ನಾಯಕರು ವಿವರಿಸಿದ್ದಾರೆ.
ಹಲವು ಕ್ಷೇತ್ರಗಳ ಕ್ಲಸ್ಟರ್: ಇದೇ ವೇಳೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಲವು ಲೋಕಸಭಾ ಕ್ಷೇತ್ರಗಳನ್ನು ಸೇರಿಸಿ ಒಂದು ಕ್ಲಸ್ಟರ್ ಮಾಡುವ ಬಗ್ಗೆ ಪರಾಮರ್ಶೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.