ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಜೆಪಿ ವಿಜಯೋತ್ಸವ
ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ
Team Udayavani, Mar 11, 2022, 5:00 AM IST
ಮಂಗಳೂರು: ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸಾಧಿಸಿರುವ ಗೆಲುವಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಿಹಿತಿಂಡಿ ಹಂಚಿ, ಸುಡುಮದ್ದು ಸಿಡಿಸಿ ಸಂಭ್ರಮಿಸಿದರು.
ತಾಲೂಕು ಕೇಂದ್ರಗಳು ಸೇರಿದಂತೆ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜ ಪ್ರದರ್ಶಿಸಿ, ಘೋಷಣೆ ಕೂಗಿ ಸಿಹಿತಿಂಡಿ ಹಂಚಿದರು.
ಕೊಡಿಯಾಲ ಬೈಲಿನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಅವರು ಮಾತನಾಡಿ, 4 ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಪ ಬಹುಮತ ದೊಂದಿಗೆ ಅಧಿಕಾರದ ಗದ್ದುಗೆಯೇರುತ್ತಿದೆ. ಇದು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೇಲೆ ಜನರು ಇಟ್ಟಿರುವ ವಿಶ್ವಾಸ, ಪ್ರೀತಿಗೆ ನಿದರ್ಶನ. ಅತೀ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಅವರಿಗೆ ಜನತೆ ಭಾರೀ ಬಹುಮತದೊಂದಿಗೆ ಮರಳಿ ಅಧಿಕಾರ ನೀಡಿದ್ದಾರೆ. ಬಿಜೆಪಿಯ ಸಾಧನೆ 2024ರ ಲೋಕಸಭಾ ಚುನಾವಣೆಗೆ ಭದ್ರ ಅಡಿಪಾಯ ಹಾಕಿ ಕೊಟ್ಟಿದೆ ಎಂದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ಮನಪಾ ಬಿಜೆಪಿ ಕಾರ್ಪೊರೇಟರ್‌ಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಶಾಸಕ ವೇದವ್ಯಾಸ ಕಾಮತ್ ಉಸ್ತುವಾರಿಯ ಪಣಜಿ
ಕ್ಷೇತ್ರದಲ್ಲಿ ಭರ್ಜರಿ ಗೆಲುವು
ಗೋವಾದಲ್ಲಿ ಬಿಜೆಪಿ ಆಡಳಿತಕ್ಕೇ ರುವುದು ಖಚಿತವಾಗಿದೆ. ಪಣಜಿಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಅಲ್ಲಿ ನೆಲೆಸಿರುವ ಕರ್ನಾಟಕದ ಜನರ ಕೊಡುಗೆಯೂ ಇದೆ. ಸಾಕಷ್ಟು ಪೈಪೋಟಿ ಇದ್ದ ಸಂದರ್ಭದಲ್ಲಿ ಕರ್ನಾಟಕದ ಜನರ ಮತವೂ ಬಿಜೆಪಿ ಗೆಲುವಿಗೆ ಕಾರಣ ಎಂದು ಪಣಜಿ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯ ವಕ್ತಾರ ಕ್ಯಾ| ಗಣೇಶ ಕಾರ್ಣಿಕ್,
ಮುಖಂಡರಾದ ಸಂಜಯ್ ಪ್ರಭು, ವಸಂತ್ ಪೂಜಾರಿ ಅವರು ಕಾಮತ್ ಅವರ ಜತೆಗಿದ್ದರು.
ಉಡುಪಿ: ಪಂಚರಾಜ್ಯ ಚುನಾವಣೆ ಫಲಿತಾಂಶವು ಕರ್ನಾಟಕ ದಲ್ಲಿ ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಗುರುವಾರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಯಶಸ್ವಿ ಆಡಳಿತವು ಈ ಚುನಾ ವ ಣ ಫಲಿತಾಂಶಕ್ಕೆ ಪೂರಕವಾಗಿದೆ. ಪಂಚರಾಜ್ಯ ಚುನಾ ವ ಣ ಫಲಿತಾಂಶವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದ್ದು ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೂಮ್ಮೆ ಅಭಿವೃದ್ಧಿ ಪರ ಸರಕಾರ ರಚಿಸಲಿದ್ದೇವೆ ಎಂದರು.
ಈ ಚುನಾವಣೆಯಲ್ಲಿ ಜನತೆ ವಿಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು ತಿರಸ್ಕರಿಸಿ, ಅಭಿವೃದ್ಧಿ ಮತ್ತು ಹಿಂದುತ್ವದ ಪರ ಜನಾದೇಶ ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಜನಪರ ಆಡಳಿತ ವೈಖರಿಯನ್ನು ಮೆಚ್ಚಿ ಜನತೆ ಬಿಜೆಪಿಯನ್ನು ಆಶೀರ್ವದಿಸಿದ್ದಾರೆ. ಉತ್ತರ ಪ್ರದೇಶ ಸಹಿತವಾಗಿ ಉತ್ತರಾಖಂಡ, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿ ಸರಕಾರ ರಚಿಸಲಿದೆ. ಈ ಮೂಲಕ ದೇಶದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ಮತ್ತೊಮ್ಮೆ ನಾಂದಿ ಹಾಡಲಿದ್ದೇವೆ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ, ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಸಲೀಂ ಅಂಬಾಗಿಲು, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ವೀಣಾ ಎಸ್. ಶೆಟ್ಟಿ, ರಶ್ಮಿತಾ ಬಿ. ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕ್ಕರ್, ಆಲ್ವಿನ್ ಡಿ’ಸೋಜಾ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಚಂದ್ರಶೇಖರ ಪ್ರಭು, ಬಾಲಕೃಷ್ಣ ಶೆಟ್ಟಿ ಸಹಿತವಾಗಿ ನಗರಸಭಾ ಸದಸ್ಯರು ಹಾಗೂ ಜಿಲ್ಲಾ ಮೋರ್ಚಾ, ಮಂಡಲಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
MUST WATCH
ಹೊಸ ಸೇರ್ಪಡೆ
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!
ISRO: ಮುಂದಿನ ತಿಂಗಳು ಯುರೋಪ್‌ನ ಪ್ರೋಬಾ-3 ಭಾರತದಲ್ಲಿ ಉಡಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.