![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 23, 2023, 10:05 AM IST
ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ದೋಣಿಯೊಂದು ಸೋಮ ವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಟ್ಕಳದ ನೇತ್ರಾಣಿ ಸಮೀಪದಲ್ಲಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ. ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಸಮೀಪ ದಲ್ಲಿದ್ದ ಬೋಟಿನವರು ರಕ್ಷಿಸಿದ್ದಾರೆ.
ಉದ್ಯಾವರ ಸಂಪಿಗೆನಗರದ ರಾಹಿಲ್ ಅವರಿಗೆ ಸೇರಿದ ಸೀ ಬರ್ಡ್ ಬೋಟ್ ಮೇ 21ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಾಳಿ-ಮಳೆ ಆರಂಭವಾಗಿದ್ದು, ಪರಿಣಾಮ ನಾವಿಕನ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಬಡಿಯಿತು. ಈ ವೇಳೆ ನೀರು ಒಳಗೆ ತುಂಬಿ ಬೋಟ್ ಮುಳುಗಲಾರಂಭಿಸಿತ್ತು.
ಸಮೀಪದಲ್ಲಿದ್ದ ಪವನ ಪುತ್ರ 111 ಬೋಟಿನವರು ಧಾವಿಸಿ ಬಂದು ಈ ಬೋಟನ್ನು ಹಗ್ಗದ ಸಹಾಯದಿಂದ ಎಳೆದು ತರಲು ಪ್ರಯತ್ನ ಪಟ್ಟರು. ಆಗ ಹಗ್ಗ ತುಂಡಾಗಿ ಬೋಟು ಸಂಪೂರ್ಣ ಮುಳುಗಡೆಗೊಂಡಿತು.
ಬೋಟಿನಲ್ಲಿದ್ದ ಏಳೂ ಮಂದಿಯನ್ನು ರಕ್ಷಿಸಿ ಮಲ್ಪೆ ಬಂದರಿಗೆ ಕರೆ ತರಲಾಗಿದೆ. ಸುಮಾರು 45 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.