ಮಮತಾ ಬ್ಯಾನರ್ಜಿಗೆ ಸಮನ್ಸ್ ಜಾರಿ ಮಾಡಿದ ಬಾಂಬೆ ಹೈಕೋರ್ಟ್
Team Udayavani, Feb 3, 2022, 6:50 AM IST
ಕೋಲ್ಕತಾ: ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ರಾಷ್ಟ್ರಗೀತೆಗೆ ಅಗೌರವ ಸೂಚಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಮಮತಾ ಅವರಿಗೆ ಬಾಂಬೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು ಮಾ. 2ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದೆ.
ಇದು ಕಳೆದ ವರ್ಷ ಡಿಸೆಂಬರ್ನಲ್ಲಿ ಮುಂಬಯಿಗೆ ಭೇಟಿ ನೀಡಿದ್ದ ಮಮತಾ ಬ್ಯಾನರ್ಜಿ, ಆ ಸಂದರ್ಭದಲ್ಲಿ ಶಿವಸೇನೆ ಹಾಗೂ ಎನ್ಸಿಪಿ ನಾಯಕರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಅವರು ಸಮಾರಂಭ ವೊಂದರಲ್ಲಿ ಭಾಗಿಯಾಗಿದ್ದರು. ಆ ಸಮಾರಂಭ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗಿಸಲಾಗಿತ್ತು. ಆಗ ಮಮತಾ ಬ್ಯಾನರ್ಜಿಯವರು ಕುಳಿತೇ ಇದ್ದರು ಎಂದು ಮುಂಬಯಿಯ ಬಿಜೆಪಿ ನಾಯಕ ವಿವೇಕಾನಂದ ಗುಪ್ತಾ ಎಂಬುವರು ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. 2015ರಲ್ಲಿ ಕೇಂದ್ರ ಗೃಹ ಇಲಾ ಖೆಯು, ರಾಷ್ಟ್ರಗೀತೆ ಮೊಳಗುವಾಗ ಅಥವಾ ಹಾಡುವಾಗ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಬೇಕೆಂದು ಹೇಳಿದೆ. ಆದರೂ ಮಮತಾ ಅಗೌರವ ತೋರಿದ್ದಾರೆಂದು ಅವರು ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಅಧ್ಯಕ್ಷೆಯಾಗಿ ಮತ್ತೊಮ್ಮೆ ಅವಿರೋಧ ಆಯ್ಕೆ
ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಧ್ಯಕ್ಷೆಯಾಗಿ ಬುಧವಾರ ಪುನರಾಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷೆಯಾಗಿ ಐದು ವರ್ಷಗಳು ಸಂದ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷೀಯ ಪಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಮಮತಾ ಬ್ಯಾನರ್ಜಿಯವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದಾಗಿ ಅವಿರೋಧವಾಗಿ ಅವರೇ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.