![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 25, 2020, 7:45 AM IST
ಈಗಾಗಲೇ ಲಾಕ್‍ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾಗಳ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ನಿಧಾನವಾಗಿ ಸಾಗುತ್ತಿವೆ. ಈ ನಡುವೆ ಸ್ಯಾಂಡಲ್‌ವುಡ್‌ನದ ಬಹು ನಿರೀಕ್ಷಿತ “ಯುವರತ್ನ’ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಹೌದು! “ಯುವರತ್ನ’ ಚಿತ್ರದ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ ಮತ್ತು ಮುಂಬೈ ಲಾಕ್‍ಡೌನ್ ನಲ್ಲಿವೆ. ಪರಿಸ್ಥಿತಿ ಹದವಾಗುವವರೆಗೂ ಯುವರತ್ನ ಹಾಡುಗಳು ಬರುವುದು ಕಷ್ಟ. ಸಂಗೀತ ನಿರ್ದೇಶಕ ತಮನ್ ಅವರು ಚೆನ್ನೈನ ಲಾಕ್‍ಡೌನ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಅಭಿಮಾನಿಗಳು ದಯವಿಟ್ಟು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಚೆನ್ನೈ, ಹೈದರಾಬಾದ್ ಹಾಗು ಮುಂಬೈ ನಲ್ಲಿ ಕೆಲಸಗಳು ನೆಡೆಯುತ್ತಿಲ್ಲ !ಚೆನ್ನೈ ,ಮುಂಬೈ ಲೊಕ್ಡೌನ್ ನಲ್ಲಿವೆ..ಪರಿಸ್ಥಿತಿ ಹದವಾಗುವ ವರೆಗೂ ಯುವರತ್ನ ಹಾಡುಗಳು ಬರುವುದು ಕಷ್ಟ.. @MusicThaman ಅವರು ಚೆನ್ನೈ ಅಲ್ಲಿ ಲೊಕ್ಡೌನ್ ನಲ್ಲಿದ್ದಾರೆ ದಯವಿಟ್ಟು ಸಹಕರಿಸಿ…..? #YuvarathnaaSongs
— Santhosh Ananddram (@SanthoshAnand15) June 23, 2020
ಇನ್ನು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ “ಯುವರತ್ನ’ ಸಿನಿಮಾ ದೊಡ್ಡ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅಲ್ಲದೇ “ರಾಜಕುಮಾರ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಸಂತೋಷ್ ಆನಂದ್ ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪುನೀತ್ ರಾಜ್‍ಕುಮಾರ್‌ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಂಡಿದ್ದು, ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.