ಬ್ರಾಹ್ಮಣ ವಾಕ್ಸಮರ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿಯಿಂದ ವ್ಯಾಪಕ ಆಕ್ರೋಶ


Team Udayavani, Feb 6, 2023, 7:05 AM IST

ಬ್ರಾಹ್ಮಣ ವಾಕ್ಸಮರ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿಯಿಂದ ವ್ಯಾಪಕ ಆಕ್ರೋಶ

ಬೆಂಗಳೂರು/ದಾಸರಹಳ್ಳಿ: ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವಂತೆಯೇ ರಾಜ್ಯ ರಾಜಕಾರಣದಲ್ಲಿ ವಾಕ್ಸಮರ ಬಿರುಸು ಗೊಂಡಿದೆ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಪಟ್ಟುಬಿಡದೆ ಪರಸ್ಪರ ಕೆಸರೆರಚಾಟ, ವಾಗ್ಯುದ್ಧದಲ್ಲಿ ತೊಡಗಿದ್ದಾರೆ. ಕೆಲವು ನಾಯಕರಂತೂ ದಿನಕ್ಕೊಂದು ಬಾಂಬ್‌ ಸಿಡಿಸಲಾರಂಭಿಸಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶೃಂಗೇರಿ ಮಠ ಒಡೆದಿರುವ ಮಹಾರಾಷ್ಟ್ರದ ಪೇಶ್ವೆ ವಂಶಸ್ಥ ಪ್ರಹ್ಲಾದ ಜೋಷಿ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆರೆಸ್ಸೆಸ್‌ ನಿರ್ಧಾರ ಮಾಡಿದೆ ಎಂದು ಹೇಳುವ ಮೂಲಕ ಎಚ್‌.ಡಿ. ಕುಮಾರಸ್ವಾಮಿ ವಿವಾದದ ಬಾಂಬ್‌ ಸಿಡಿಸಿದ್ದಾರೆ.

ಅವರ ಈ ಹೇಳಿಕೆ ಹೊರಬೀಳುತ್ತಿದ್ದಂತೆ ಕೆಂಡಾ ಮಂಡಲವಾಗಿರುವ ಬಿಜೆಪಿ ನಾಯಕರು ಕುಮಾರ ಸ್ವಾಮಿ ವಿರುದ್ಧ ಮುಗಿಬಿದ್ದಿದ್ದು, ಅವರು ಕೂಡಲೇ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

“ಜೆಡಿಎಸ್‌ ಪಂಚರತ್ನ ಯಾತ್ರೆಯ ಬದಲು ನವಗ್ರಹ ಯಾತ್ರೆ ಮಾಡಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಎಚ್‌.ಡಿ.  ಕುಮಾರಸ್ವಾಮಿ, “ಬ್ರಾಹ್ಮಣ’ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ದಾಸರಹಳ್ಳಿಯಲ್ಲಿ ಆಯೋ ಜಿಸ ಲಾಗಿದ್ದ ಪಂಚರತ್ನ ಯಾತ್ರೆ ಯಲ್ಲಿ ರವಿವಾರ ಮಾತನಾಡಿದ ಕುಮಾರ ಸ್ವಾಮಿ, “ದಿಲ್ಲಿಯಲ್ಲಿ ಆರೆಸ್ಸೆಸ್‌ ಮುಖಂಡರ ಸಭೆ ನಡೆದಿದ್ದು, ಪ್ರಹ್ಲಾದ್‌ ಜೋಷಿ ಅವರನ್ನು ಸಿಎಂ ಮಾಡಿ, 8 ಮಂದಿಯನ್ನು ಉಪಮುಖ್ಯಮಂತ್ರಿ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ. ಅವರು ನಿರ್ಧರಿಸಿರುವ ಸಿಎಂ ನಮ್ಮ ಹಳೇ ಕರ್ನಾಟಕದ ಬ್ರಾಹ್ಮಣರಲ್ಲ. ಬದಲಾಗಿ ಮಹಾರಾಷ್ಟ್ರ ಭಾಗದ ಪೇಶ್ವೆಗಳು’ ಎಂದಿದ್ದಾರೆ.

ಎಚ್‌ಡಿಕೆ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, “ಪ್ರಹ್ಲಾದ್‌ ಜೋಷಿ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನವನ್ನು ಬಿಜೆಪಿ ಖಂಡಿಸುತ್ತದೆ. ಸಾವರ್ಕರ್‌, ಗೋಪಾಲ ಕೃಷ್ಣ ಗೋಖಲೆ, ರಾನಡೆ, ಬಾಲಗಂಗಾಧರ ತಿಲಕ್‌ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ಅವರೆಲ್ಲ ಬ್ರಾಹ್ಮಣರಾದರೂ ಸ್ವಂತ ಜಾತಿಯ ಬಗ್ಗೆ ಕಿಂಚಿತ್ತೂ ಯೋಚಿಸಿರಲಿಲ್ಲ’ ಎಂದಿದ್ದಾರೆ. “ಆರೆಸ್ಸೆಸ್‌ ನವರು ಮಹಾತ್ಮಾ ಗಾಂಧೀಜಿ ಹತ್ಯೆ ಮಾಡಿದರು ಎಂದು ಹೇಳಿದ್ದೀರಿ. ಆಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ತನಿಖೆಗೆ ಕಾಂಗ್ರೆಸ್‌ ಪಕ್ಷ ಜಸ್ಟಿಸ್‌ ಕಪೂರ್‌ ಆಯೋಗ ರಚಿಸಿತ್ತು. ಅಕಸ್ಮಾತ್‌ ನಿಮಗೆ ಓದುವ ಅಭ್ಯಾಸವಿದ್ದರೆ ಆ ಆಯೋಗದ ವರದಿಯನ್ನು ಓದಿ. ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್‌ ಪಾತ್ರವಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪಿತ್ತಿದೆ’ ಎಂದು ಹೇಳಿದ್ದಾರೆ.

ಇದರ ಬೆನ್ನಲ್ಲೇ ದಿಲ್ಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಬಗ್ಗೆ ಕುಮಾರಸ್ವಾಮಿ ತಲೆಕಡಿಸಿಕೊಳ್ಳುವುದು ಬೇಡ. ಅವರ ಪಕ್ಷದ ಬಗ್ಗೆ ಚಿಂತಿಸಲಿ. ಕುಮಾರಣ್ಣನಿಗೆ ಎಲ್ಲಿಂದ ಮಾಹಿತಿ ಬರುತ್ತದೆಯೋ ಗೊತ್ತಿಲ್ಲ ಎಂದಿದ್ದಾರೆ.

ಸಿ.ಡಿ., ಹೊಟೇಲ್‌, ತೋಟದ ಮನೆ!
ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ಮಾತನಾಡಿ, ಕುಮಾರಸ್ವಾಮಿಯವರ ಸಿ.ಡಿ., ತಾಜ್‌ ವೆಸ್ಟ್‌ಎಂಡ್‌ ಹೊಟೇಲ್‌, ಅವರ ಮನೆ, ಅವರ ತೋಟದ ಮನೆ… ಇವೆಲ್ಲ ಪ್ರಕರಣಗಳು ನನಗೂ ಗೊತ್ತಿವೆ. ಅವರು ಇದೇ ರೀತಿ ಮಾತು ಮುಂದುವರಿಸಿದರೆ ನಾವು ಕೂಡ ಮಾತನಾಡ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕುಮಾರಸ್ವಾಮಿ ಅತ್ಯಂತ ಸ್ವಾರ್ಥಿ. ಬಿಜೆಪಿಗಾಗಲೀ, ಕಾಂಗ್ರೆಸ್‌ಗಾಗಲೀ ಬಹುಮತ ಬರಬಾರದು, ಅತಂತ್ರ ಪರಿಸ್ಥಿತಿ ನಿರ್ಮಾಣಗೊಳ್ಳಬೇಕು. ತಾನು ನಿರ್ಧಾರ ಮಾಡು ವವನಾಗಬೇಕು ಎಂಬ ಅತ್ಯದ್ಭುತ ಆಸೆಯನ್ನು ಇರಿಸಿ ಕೊಂಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಭಯದಿಂದ ಚಡ ಪಡಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ವಿಧಾನಸೌಧದಿಂದ ಆಡಳಿತ ನಡೆಸುತ್ತಿರಲಿಲ್ಲ ಎಂದಿದ್ದಾರೆ.

ಎಚ್‌ಡಿಕೆ ಹೇಳಿದ್ದೇನು?
ಶೃಂಗೇರಿ ಮಠ ಒಡೆದ ಬ್ರಾಹ್ಮಣ ವರ್ಗ ಪ್ರಹ್ಲಾದ ಜೋಷಿ ಅವರದ್ದು. ಮಹಾತ್ಮಾ ಗಾಂಧಿ ಅವರನ್ನು ಕೊಂದ ಬ್ರಾಹ್ಮಣರು ಇವರು. ಪ್ರಹ್ಲಾದ್‌ ಜೋಷಿ ನಮ್ಮ ಹಳೆಯ ಕಾಲದ ಬ್ರಾಹ್ಮಣರಲ್ಲ. ಶೃಂಗೇರಿ ಮಠಕ್ಕೆ ಸೇರಿದವರಲ್ಲ. ಮರಾಠ ಪೇಶ್ವೆ ಸಮುದಾಯಕ್ಕೆ ಸೇರಿದವರು. ನಮ್ಮ ಭಾಗದ ಹಳೇ ಬ್ರಾಹ್ಮಣರು ಸರ್ವೇಜನ ಸುಖೀನೋ ಭವಂತು ಎನ್ನುವವರು. ಆದರೆ ಇವರು ದೇಶ ಒಡೆಯುವ, ದೇಶಕ್ಕೆ ಕೊಡುಗೆ ನೀಡಿದವರನ್ನು ಹತ್ಯೆ ಮಾಡಿದವರು ಎಂಬ ವಿವಾದಾತ್ಮಕ ಹೇಳಿಕೆಯನ್ನು ಎಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ.

ನವಗ್ರಹ ಯಾತ್ರೆ: ಜೋಷಿ
ಪ್ರಹ್ಲಾದ್‌ ಜೋಷಿ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ, “ಜೆಡಿಎಸ್‌ ತಮ್ಮ ಯಾತ್ರೆಗೆ ಪಂಚರತ್ನ ಯಾತ್ರೆ ಎಂದು ಏಕೆ ಹೆಸರಿಟ್ಟಿತು ಎಂಬುದೇ ಗೊಂದಲಕಾರಿ. ಎಚ್‌.ಡಿ. ದೇವೇಗೌಡರ ಮನೆಯಲ್ಲಿ ಹಲವು ನಾಯಕರಿದ್ದು, ಅಧಿಕಾರಕ್ಕಾಗಿ ಕಚ್ಚಾಟ ಅಲ್ಲಿಂದಲೇ ಆರಂಭವಾಗಿದೆ. ಅವರು ನವಗ್ರಹ ಯಾತ್ರೆ ಎಂಬ ಹೆಸರಿಡಬೇಕಿತ್ತು’ ಎಂದು ಲೇವಡಿ ಮಾಡಿದ್ದರು. ಇದಕ್ಕೆ ಎಚ್‌.ಡಿ. ಕುಮಾರ ಸ್ವಾಮಿ ಪ್ರತಿಕ್ರಿಯಿಸಿ, “ಪ್ರಹ್ಲಾದ್‌ ಜೋಷಿ ಯನ್ನು ಚುನಾವಣೆ ಅನಂತರ ಮುಖ್ಯ ಮಂತ್ರಿ ಮಾಡಬೇಕು ಎಂದು ಸಂಘ ಪರಿವಾರ ನಿರ್ಧರಿಸಿದೆ.

ದಿಲ್ಲಿಯಲ್ಲಿ ಎಂಟು ಉಪ ಮುಖ್ಯ ಮಂತ್ರಿಗಳನ್ನು ಮಾಡುವ ಸಭೆ ಮಾಡಿದ್ದಾರೆ. ಅದು ನನ್ನ ಗಮನಕ್ಕೆ ಬಂದಿದೆ. ಎಂಟು ಜನ ಯಾರು ಎಂಬ ಹೆಸರು ಬೇಕಾದರೂ ಕೊಡುತ್ತೇನೆ’ ಎಂದರು. ಜತೆಗೆ ಮುಖ್ಯಮಂತ್ರಿ ಆಗ ಬೇಕು ಎಂದು ಪ್ರಹ್ಲಾದ ಜೋಷಿ ಏನೇನೋ ಮಾತ ನಾಡುತ್ತಿದ್ದಾರೆ. ಅವರದು ಯಾವ ಯಾತ್ರೆ ಎಂದು ಎಲ್ಲರಿಗೂ ಗೊತ್ತಿದೆ ಎಂದರು.

ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಂಗಳೂರು ಮತ್ತು ತುಮಕೂರಿನಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ. ಸೋಮವಾರ ಬೆಳಗ್ಗೆ ನಗರಕ್ಕೆ ಬಂದಿಳಿಯಲಿರುವ ಅವರು 11 ಗಂಟೆಗೆ ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ “ಭಾರತ ಇಂಧನ ಸಪ್ತಾಹ’ವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಗುಬ್ಬಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಿದರೆಹಳ್ಳಿ ಕಾವಲ್‌ನಲ್ಲಿ ಭಾಷಣ ಮಾಡಲಿದ್ದಾರೆ. ಈ ಸಾರ್ವಜನಿಕ ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ಸಾಧ್ಯತೆಯಿದೆ.

ಕುಮಾರಸ್ವಾಮಿಯವರು ಬ್ರಾಹ್ಮಣರ ಬಗ್ಗೆ ಕೀಳಾಗಿ ಮಾತನಾಡಿದ್ದನ್ನು ಉಗ್ರವಾಗಿ ಖಂಡಿಸುತ್ತೇನೆ. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಾಹ್ಮಣರ ತ್ಯಾಗ, ಬಲಿದಾನ ಸಾಕಷ್ಟಿದೆ. ಯಾವುದೇ ಜಾತಿಯ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಮಾಜಿ ಸಿಎಂಗೆ ಶೋಭೆ ತರುವುದಿಲ್ಲ. ಅವರು ತತ್‌ಕ್ಷಣ ಬ್ರಾಹ್ಮಣ ಸಮಾಜದ ಕ್ಷಮೆ ಕೇಳಬೇಕು.
– ಆರ್‌. ಅಶೋಕ್‌, ಕಂದಾಯ ಸಚಿವ

ಎಂಟು ಮಂದಿ ಉಪ ಮುಖ್ಯಮಂತ್ರಿಗಳು ಎಂದು ಅವರ ಮನೆಯೊಳಗಿರುವವರನ್ನೇ ನೋಡಿ ಹೇಳಿರಬಹುದು. ಏಕೆಂದರೆ ಅವರದು ಕುಟುಂಬ ರಾಜಕಾರಣ. ಬ್ರಾಹ್ಮಣ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಸಂಘದ ವಿಚಾರದ ಬಗ್ಗೆ ಎಚ್ಚರಿಕೆಯಿಂದ ಮಾತನಾಡಲಿ.
– ನಳಿನ್‌ ಕುಮಾರ್‌ ಕಟೀಲು, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.