ಬ್ರಿಟನ್: ಲಾಕ್‌ಡೌನ್ ಜೂ. 1ರ ವರೆಗೆ ವಿಸ್ತರಣೆ
Team Udayavani, May 13, 2020, 4:42 PM IST
ಲಂಡನ್: ಕೋವಿಡ್-19 ಅಟ್ಟಹಾಸ ಮುಂದುವರೆದಿರುವ ಹಿನ್ನಲೆಯಲ್ಲಿ ಇಂಗ್ಲೆಂಡ್‌ನಲ್ಲಿ ಜೂ.1ರ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಘೋಷಣೆ ಮಾಡಿದ್ದಾರೆ.
ದೇಶದೆಲ್ಲೆಡೆ ಸೋಂಕು ತಡೆಗೆ ಲಾಕ್‌ಡೌನ್ ಜಾರಿ ಮಾಡಲಾಗಿದ್ದರೂ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜೂ.1 ರವರೆಗೆ ಲಾಕ್‌ಡೌನ್ ಮುಂದುವರೆಸಲು ತೀರ್ಮಾನಿಸಲಾಗಿದೆ. ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ಕಠಿನ ನಿರ್ಬಂಧಗಳು ಜಾರಿಯಲ್ಲಿರಲಿದ್ದು, ಸಾಮಾಜಿಕ ಅಂತರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶ ಹೊರಡಿಸಲಾಗಿದೆ.
ಬಿಕ್ಕಟ್ಟನ್ನು ನಿಭಾಯಿಸಲು ಜಾನ್ಸನ್ ಸರಕಾರ ವಿಫಲವಾಗಿದ್ದು, ಈಗಾಗಲೇ ಟೀಕೆ ಒಳಗಾಗಿದೆ. ಹಾಗಾಗಿ ಈ ಬಾರಿ ಮೊದಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಲಾಕ್‌ಡೌನ್ ನಿಯಮ ಸಡಿಲಿಕೆಯಿಂದ ಹಿಂದೆ ಸರಿದಿದ್ದು, ಲಾಕ್‌ಡೌನ್ ನಿಯಮಗಳನ್ನು ಕಟ್ಟನಿಟ್ಟಾಗಿ ಪಾಲಿಸಲು ಹೇಳಿದ್ದಾರೆ.
ಜೂ.1ರಿಂದ ಶಾಲೆ, ಅಂಗಡಿಗಳು ಆರಂಭವಾಗಲಿದ್ದು, ಸೋಂಕಿನ ಪ್ರಮಾಣ ಕಡಿಮೆಯಾದರೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವ ಮೂಲಕ ಲಾಕ್‌ಡೌನ್ ನಿಯಮಗಳನ್ನು ಹಂತಹಂತವಾಗಿ ಸಡಿಲಗೊಳಿಸಲಾಗುತ್ತದೆ ಎಂದಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟಲು ಜನರ ಸಹಕಾರ ಅಗತ್ಯ.ಲಾಕ್‌ಡೌನ್ ಸಡಿಲಗೊಳಿಸಲು ಸೂಕ್ತ ಸಮಯ ಇದಲ್ಲ. ಷರತ್ತುಗಳೊಂದಿಗೆ ಹಂತಹಂತವಾಗಿ ಸಡಿಲ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.