Mangaluru ಲಂಚ: ಬಂಧಿತ ಮೂಲ್ಕಿ ಆರ್ಐ ಜಾಮೀನು ಅರ್ಜಿ ತಿರಸ್ಕೃತ
Team Udayavani, Jan 8, 2025, 10:18 PM IST
ಮಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ತಿರಸ್ಕರಿಸಿದೆ.
ಪದ್ಮಾವತಿ ಎಂಬವರು ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು ವರ್ಷದ ಹಿಂದೆ ಅವರ ಮೊಮ್ಮಗ ಮೂಲ್ಕಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು, ಅದನ್ನು ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗೆ ಕಳುಹಿಸಲಾಗಿತ್ತು. ಒಂದು ವರ್ಷ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ವಿಚಾರಿಸಿದಾಗ ದಿನೇಶ್ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಡಿ. 19ರಂದು ಅರ್ಜಿದಾರರಿಂದ ದಿನೇಶ್ 4 ಲಕ್ಷ ರೂ. ಲಂಚದ ಹಣವನ್ನು ಸುರತ್ಕಲ್ ಬಳಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂಧ್ಯಾ ಎಸ್. ಅವರು ವಜಾಗೊಳಿಸಿರುತ್ತಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ ಎಂದು ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ ಎಂ.ಎ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.