ಕರ್ನಾಟಕವನ್ನು ವೃದ್ಧಿ ಮತ್ತು ಅಭಿವೃದ್ಧಿಯ ಶಕ್ತಿಕೇಂದ್ರವಾಗಿಸಲು ಬದ್ಧ: ಯಡಿಯೂರಪ್ಪ
Team Udayavani, Jan 23, 2020, 6:51 PM IST
ದಾವೊಸ್: ಮುಂದಿನ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ವೃದ್ಧಿ ಮತ್ತು ಅಭಿವೃದ್ಧಿಯ ಶಕ್ತಿ ಕೇಂದ್ರವಾಗಿ ರೂಪಿಸಲು ಬದ್ಧರಿರುವುದಾಗಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಸಂದರ್ಭದಲ್ಲಿ, ಜನವರಿ 22 ರಂದು ಏರ್ಪಡಿಸಿದ್ದ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನವೆಂಬರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಉದ್ಯಮಿಗಳು ಹಾಗೂ ಹೂಡಿಕೆದಾರರಲ್ಲಿ ಮನವಿ ಮಾಡಿದರು. ಕೈಗಾರಿಕೋದ್ಯಮ ವಲಯದ ಪ್ರಮುಖರೆಲ್ಲರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕರ್ನಾಟಕ ರಾಜ್ಯವು ಇನ್ಫೋಸಿಸ್, ಬಯೋಕಾನ್, ವಿಪ್ರೊ ಮತ್ತು ಡೈನಮ್ಯಾಟಿಕ್ಸ್ ನಂತಹ ಭಾರತೀಯ ಮೂಲದ ಬಹುರಾಷ್ಟ್ರೀಯ ಕಂಪೆನಿಗಳ ನೆಲೆಯಾಗಿದೆ. ರಾಜ್ಯವು ಉತ್ತಮ ಬೆಳವಣಿಗೆ ದರವನ್ನು ಹಿಂದಿನಿಂದಲೂ ದಾಖಲಿಸುತ್ತ ಬಂದಿದ್ದು, ಇದು ರಾಷ್ಟ್ರೀಯ ಬೆಳವಣಿಗೆ ದರಕ್ಕಿಂದ ಹೆಚ್ಚಾಗಿದೆ. ಜೊತೆಗೆ ರಾಜ್ಯದ ನಿರುದ್ಯೋಗ ಪ್ರಮಾಣವೂ ಅತಿ ಕಡಿಮೆಯಿದೆ ಎಂದು ವಿವರಿಸಿದರು.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ನಿಕಟ ಸಂಬಂಧ ಹೊಂದಿದ್ದು, ವಹಿವಾಟು ನಡೆಸಲು ಇರುವ ತೊಡಕುಗಳನ್ನು ನಿವಾರಿಸುತ್ತಾ ಹೂಡಿಕೆಗೆ ಉತ್ತಮ ವಾತಾವರಣ ಸೃಷ್ಟಿಸಲು ನೆರವಾಗುತ್ತಿದೆ.
ನಮ್ಮ ಪಪ್ರಧಾನಿ ನರೇಂದ್ರ ಮೋದಿ ಅವರು ಕೈಗಾರಿಕೆಯ ಅಭಿವೃದ್ಧಿಯ ಮೂಲಕ 21ನೇ ಶತಮಾನದಲ್ಲಿ ನವ ಭಾರತ ನಿರ್ಮಾಣ ಮಾಡಲು ನಮ್ಮನ್ನು ಸದಾ ಹುರಿದುಂಬಿಸುತ್ತಿದ್ದಾರೆ. ಕೈಗಾರಿಕೆಗಳ ಆಶಾದಾಯಕ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಉತ್ಪಾದಕತೆ, ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯಲ್ಲಿನ ಹೂಡಿಕೆಗೆ ಉತ್ತೇಜನ ನೀಡುವ ಹೊಸ ಕೈಗಾರಿಕಾ ನೀತಿಯನ್ನು ರೂಪಿಸುತ್ತಿದ್ದೇವೆ ಎಂದು ವಿವರಿಸಿದರು.
ಉದ್ಯಮ ವಲಯದ ದಿಗ್ಗಜರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು, ಬೆಂಗಳೂರಿನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಫೆಬ್ರುವರಿಯಲ್ಲಿ ಹುಬ್ಬಳ್ಳಿಯಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಸ್ಥಿರ ಉತ್ಪಾದನಾ ವಲಯ ಸೃಷ್ಟಿಸುವ ಮಹತ್ವಾಕಾಂಕ್ಷೆಯೊಂದಿಗೆ ಎರಡು ಹಾಗೂ ಮೂರನೇ ಹಂತದ ನಗರಗಳಿಗೆ ಸಂಪರ್ಕವನ್ನು ಸುಧಾರಿಸಲಾಗಿದೆ; ಭೂ ಬ್ಯಾಂಕ್ ಸೃಷ್ಟಿಸಲಾಗಿದೆ. ಆ ಮೂಲಕ ಕರ್ನಾಟಕದ ಬೆಳವಣಿಯ ವೇಗ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಅವರು ನುಡಿದರು.
ಕೈಗಾರಿಕೆಗಳ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯವು ಉತ್ಪನ್ನ ಆಧಾರಿತ ಕೈಗಾರಿಕಾ ಕ್ಲಸ್ಟರುಗಳ ಅಭಿವೃದ್ಧಿಗೆ ಕ್ರಮ ವಹಿಸುತ್ತಿದೆ. ಆ ಮೂಲಕ ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ಮಾತನಾಡಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ, ಆ ಮೂಲಕ ಭಾರತವನ್ನು 5 ಟ್ರಿಲಿಯನ್ ಆರ್ಥಿಕತೆಯಾಗಿ ರೂಪಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ .ಕನಸನ್ನು ನನಸಾಗಿಸುವಂತೆ ಉದ್ಯಮಿಗಳಿಗೆ ಮನವಿ ಮಾಡಿದರು. “ನೀವು ನಿಮ್ಮ ಉದ್ಯಮವನ್ನು ಭಾರತದ ಎಲ್ಲ ಭಾಗಗಳಲ್ಲಿ ವಿಸ್ತರಿಸಿ, ವಿಶೇಷವಾಗಿ ಕೈಗಾರಿಕೆಗಳಿಗೆ ಪೂರಕ ವಾತಾವರಣವಿರುವ ಕರ್ನಾಟಕದಲ್ಲಿ” ಎಂದು ಅವರು ನುಡಿದರು.
ಸಿಐಐ ಅಧ್ಯಕ್ಷ ಹಾಗೂ ಟಯೊಟಾ ಕಿರ್ಲೋಸ್ಕರ್ ವ್ಯವಸ್ಥಾಪಕ ನಿರ್ದೇಶಕ ವಿಕ್ರಮ್ ಕಿರ್ಲೋಸ್ಕರ್ ಅವರು ಮಾತನಾಡಿದರು. ಮಹೀಂದ್ರ ಗ್ರೂಪ್ ನ ಆನಂದ್ ಮಹೀಂದ್ರ, ಭಾರತ್ ಫೋರ್ಜ್ ನ ಬಾಬಾ ಕಲ್ಯಾಣಿ ಮತ್ತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಸಹ ಉಪಸ್ಥಿತರಿದ್ದರು.
ಸಭೆಗೆ ಮುನ್ನ ಕರ್ನಾಟಕದ ಕೈಗಾರಿಕೆಗಳ ಒಟ್ಟಾರೆ ಸ್ಥಿತಿಗತಿ ಮತ್ತು ಕರ್ನಾಟಕದ ಆರ್ಥಿಕತೆ ಹಾಗೂ ಹೆಚ್ಚಿನ ಹೂಡಿಕೆಯ ಹೊಣೆಗಾರಿಕೆಯನ್ನು ನಿಭಾಯಿಸಲು ಸರ್ಕಾರದ ಪೂರ್ವಸಿದ್ಧತೆಯ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.
ಕರ್ನಾಟಕ ರಾಜ್ಯ ಮಾತ್ರ ಹೂಡಿಕೆದಾರರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುವ ಬದಲು ಹೂಡಿಕೆದಾರರ ಸಮಾವೇಶದ ಕರ್ಟನ್ ರೈಸರ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕರ್ಟನ್ ರೈಸರ್ ಕಾರ್ಯಕ್ರಮದಿಂದಾಗಿ ಹೂಡಿಕೆದಾರರು, ರಾಜ್ಯದಲ್ಲಿ ಹೂಡಿಕೆ ಮಾಡುವ ಕುರಿತು ಸಿದ್ಧತೆ ನಡೆಸಿಕೊಂಡು, ಸಮಾವೇಶದಲ್ಲಿ ಪಾಲ್ಗೊಳ್ಳಲು ಅನುಕೂಲವಾಗಲಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.