Puttur: ಚೂರಿ ಇರಿತ ಆರೋಪ: ವಿದ್ಯಾರ್ಥಿಗಳ ಖಂಡನೆ: ವಿದ್ಯಾರ್ಥಿನಿಯ ವಜಾಕ್ಕೆ ಆಗ್ರಹ
Team Udayavani, Aug 23, 2024, 6:00 AM IST
ಪುತ್ತೂರು: ವಿದ್ಯಾರ್ಥಿಯೋರ್ವನ ವಿರುದ್ಧ ಅದೇ ಕಾಲೇಜಿನ ವಿದ್ಯಾರ್ಥಿನಿ ಚೂರಿ ಇರಿತ ಎಂದು ಸುಳ್ಳು ಆರೋಪ ಹೊರಿಸಿದ್ದು ಆಕೆಯ ವಿರುದ್ಧ ಕ್ರಮ ಕೈಗೊಂಡು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿ ಸಂಘಟನೆ ಪ್ರಾಂಶುಪಾಲರಿಗೆ ಮತ್ತು ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ನೀಡಿದೆ.
ವಿದ್ಯಾರ್ಥಿನಿಯನ್ನು ವಜಾಗೊಳಿಸದೆ ಇದ್ದರೆ ತೀವ್ರವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜತೆಗೆ ಸುಳ್ಳು ಪ್ರಕರಣ ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗುತ್ತಿದೆ. ಅವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.
ವಿದ್ಯಾರ್ಥಿಗಳ ಸಭೆ
ವಿದ್ಯಾರ್ಥಿನಿ ನೀಡಿರುವ ದೂರು ಸುಳ್ಳು ಎಂದು ಘಟನೆಯನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು. ನಕಲಿ ದೂರು ನೀಡಿ ಸಂತ್ರಸ್ತ ವಿದ್ಯಾರ್ಥಿಯ ಮಾನಹಾನಿ ಮಾಡಿದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜಿನಿಂದ ವಜಾ ಮಾಡಬೇಕು ಹಾಗು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಯ ಭಾವಚಿತ್ರ ಹಾಕಿ ಬೆದರಿಕೆಯೊಡ್ಡುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು. ಸಭೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.