ದುಬಾರಿ ಪ್ರಯಾಣ ದರ: ಕೋರ್ಟ್‌ಗೆ ಅರ್ಜಿ
Team Udayavani, May 3, 2020, 5:20 AM IST
ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೆಂಗಳೂರು ಸಹಿತ ಬೇರೆ ಬೇರೆ ಜಿಲ್ಲೆಗಳಲ್ಲಿ ಸಿಕ್ಕಿಕೊಂಡು ಅತಂತ್ರರಾಗಿದ್ದ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ತೆರಳಲು ದುಬಾರಿ ಪ್ರಯಾಣ ದರ ನಿಗದಿಪಡಿಸಿರುವ ಸಾರಿಗೆ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ತುಮಕೂರು ಮೂಲದ ವಕೀಲ ಎಲ್.ರಮೇಶ್ ನಾಯಕ್ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ.
ಲಾಕ್‌ಡೌನ್ ಘೋಷಿಸಿದ ಪರಿಣಾಮ ಬೆಂಗಳೂರು ಸಹಿತ ರಾಜ್ಯದ ಇತರ ನಗರ ಪ್ರದೇಶಗಳಲ್ಲಿ ಉದ್ಯೋಗ ಅರಸಿ ಬಂದಿದ್ದ ವಲಸೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರು ತಮ್ಮ ಸ್ವಂತ ಊರಿಗೆ ತೆರಳಲು ಸಾಧ್ಯವಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅವರಿಗೆ ಅವರ ಸ್ವಂತ ಊರುಗಳಿಗೆ ಸುರಕ್ಷಿತವಾಗಿ ಕಳುಹಿಸಿಕೊಡಲು ಸರಕಾರವೇ ವ್ಯವಸ್ಥೆ ಮಾಡಬೇಕು. ಆದರೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿರುವ ಸರಕಾರ ದುಬಾರಿ ಪ್ರಯಾಣ ದರ ನಿಗದಿಪಡಿಸಿದೆ. ಕೆಲಸ ಇಲ್ಲದೇ ಆದಾಯ ಕಾಣದ ವಲಸೆ ಕಾರ್ಮಿಕರು ಇಷ್ಟೊಂದು ದುಬಾರಿ ಪ್ರಯಾಣ ದರ ಪಾವತಿಸಲು ಸಾಧ್ಯವಿಲ್ಲ. ಸಾರಿಗೆ ಇಲಾಖೆಯ ಈ ಕ್ರಮ ಸಂವಿಧಾನ ಮತ್ತು ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.