![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 30, 2021, 12:41 PM IST
ಉಡುಪಿ: ಅಂಕೋಲ ಉದ್ಯಮಿ ಆರ್.ಎನ್. ನಾಯ್ಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭೂಗತ ಪಾತಕಿ ಬನ್ನಂಜೆ ರಾಜಾ ವಿರುದ್ಧ ಇಲ್ಲಿನ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ನ್ಯಾಯಾಲಯದಲ್ಲಿ ಕೆ.ಅಣ್ಣಾಮಲೈ ಸಾಕ್ಷ್ಯ ನುಡಿದರು.
ಆರ್.ಎನ್. ನಾಯ್ಕ ಕೊಲೆ ಪ್ರಕರಣದಲ್ಲಿ ಈ ಹಿಂದೆ ಕೆ. ಅಣ್ಣಾಮಲೈ ತನಿಖಾಧಿಕಾರಿ ಆಗಿದ್ದರು. ಪ್ರಸ್ತುತ ಕೆ. ಅಣ್ಣಾಮಲೈ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಮಂಗಳವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದ್ದ ಅಣ್ಣಾಮಲೈ ಎರಡು ದಿನಗಳ ಕಾಲ ಇಲ್ಲಿನ ಕೋಕಾ ನ್ಯಾಯಾಲಯಕ್ಕೆ ಹಾಜರಾಗಿ ಬನ್ನಂಜೆ ವಿರುದ್ಧ ಸಾಕ್ಷ್ಯ ನುಡಿದಿದ್ದು ಬುಧವಾರ ಪ್ರಕ್ರಿಯೆ ಮುಕ್ತಾಯಗೊಂಡಿದೆ.
ಅಣ್ಣಾಮಲೈ ಜತೆಗೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಎಡಿಜಿಪಿ ಪ್ರತಾಪ್ ರೆಡ್ಡಿ, ಭಾಸ್ಕರ್ ರಾವ್ ಕೂಡ ಕೋರ್ಟಿಗೆ ಹಾಜರಾಗಿ ಸಾಕ್ಷ್ಯ ನುಡಿದರು. ಆರ್.ಎನ್. ನಾಯ್ಕ ಕೊಲೆ ಪ್ರಕರಣದಡಿ ಬನ್ನಂಜೆ ರಾಜಾ ಸೇರಿ 15 ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಾಗಿತ್ತು. ವಿಚಾರಣ ಸಂಬಂಧ ವಿದೇಶದಲ್ಲಿದ್ದ ಬನ್ನಂಜೆ ರಾಜಾನನ್ನು 2015ರ ಆಗಸ್ಟ್ ತಿಂಗಳಲ್ಲಿ ವಶಕ್ಕೆ ಪಡೆದಿದ್ದ ಪೊಲೀಸರು ಇಲ್ಲಿನ ಕೋಕಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದೀಗ ಪ್ರಕರಣದ ವಿಚಾರಣೆ ಅಂತಿಮ ಹಂತಕ್ಕೆ ತಲುಪಿದೆ. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿದೆ. ಬೆಳಗಾವಿಯ ಹಿಂಡಲಗ ಜೈಲಿನಲ್ಲಿ ಬನ್ನಂಜೆ ರಾಜಾ ಸಹಿತ 16 ಮಂದಿ ಆರೋಪಿಗಳಿದ್ದಾರೆ. ಈ ಪೈಕಿ 3 ಮಂದಿ ತಲೆಮರೆಸಿಕೊಂಡಿದ್ದಾರೆ. ಬನ್ನಂಜೆ ರಾಜನ ಪರವಾಗಿ ಉಡುಪಿಯ ನ್ಯಾಯವಾದಿ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸುತ್ತಿದ್ದಾರೆ. ನ್ಯಾಯಾಧೀಶರಾಗಿ ಸಿಎಂ ಜೋಶಿ ಅವರು ವಿಚಾರಣೆ ಮಾಡುತ್ತಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.