By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ

Team Udayavani, Nov 5, 2024, 3:31 AM IST

DK-Shivakuamar

ಬೆಂಗಳೂರು: ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಎನ್ನುವುದರ ಬಗ್ಗೆ ಜನರೇ ಪಟ್ಟಿ ಮಾಡಿ ಅಂಕ ನೀಡುತ್ತಾರೆ. ಹಾಗಾಗಿ, ಯಾವ ರಣರಂಗವೂ ಇಲ್ಲ. ಚದುರಂಗವೂ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಸದಾಶಿವನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚದುರಂಗ ಆಡಿದವರೆಲ್ಲಾ ಮುಳುಗಿಹೋಗಿದ್ದಾರೆ. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಮತ್ತು ಜನರಿಗೆ ಅದರಿಂದ ಎಷ್ಟು ಲಾಭವಾಗಿದೆ ಎನ್ನುವುದರ ಆಧಾರದ ಮೇಲೆ ಈ ಬಾರಿಯ ಚುನಾವಣೆ ತೀರ್ಮಾನ ಆಗಲಿದೆ. ಜನರೇ ಪಟ್ಟಿ ಮಾಡಿ, ಅಂಕ ನೀಡಲಿದ್ದಾರೆ. ರಣರಂಗವೂ ಇಲ್ಲ, ಚದುರಂಗವೂ ಇಲ್ಲ’ ಎಂದು ಸೂಚ್ಯವಾಗಿ ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ. ಈ ನಿಟ್ಟಿನಲ್ಲಿ ನಾನು, ಮಾಜಿ ಸಂಸದ ಡಿ.ಕೆ. ಸುರೇಶ್‌, ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಹಾಗೂ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎನ್ನುವುದನ್ನು ಜನರು ಪಟ್ಟಿ ಮಾಡುತ್ತಾರೆ. ಅದಕ್ಕೆ ಅವರೇ ಅಂಕ ನೀಡುತ್ತಾರೆ’ ಎಂದು ತಿಳಿಸಿದರು.

ಆರ್‌. ಅಶೋಕ, ಸಿ.ಟಿ. ರವಿ ಅವರೆಲ್ಲ ಚನ್ನಪ್ಪಟ್ಟಣದಲ್ಲಿ ಕುಮಾರಸ್ವಾಮಿ ಅವರಿಗೆ ಸಾಥ್‌ ಕೊಟ್ಟು, ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ ಎಂದು ಕೇಳಿದಾಗ, ಬಿಜೆಪಿ ಈ ಹಿಂದೆ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆ ವೇಳೆ ಜೆಡಿಎಸ್‌ ಸಾಥ್‌ ಕೊಡಲಿಲ್ಲ. ಅವರಂತೂ ಕೊಡಲಿಲ್ಲ, ಇವರಾದರೂ (ಬಿಜೆಪಿ) ಕೊಡಬೇಕಲ್ಲವೇ’ ಎಂದು ವ್ಯಂಗ್ಯವಾಡಿದರು.

ಜಯನಗರ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡಿ ಅಂತ ಕೆಲ ಸೆಲೆಬ್ರಿಟಿಗಳು ಆಗ್ರಹಿಸುತ್ತಿದ್ದಾ ರೆ ಎಂದು ಕೇಳಿದಾಗ, ಈ ವಿಚಾರ ನನಗೆ ಗೊತ್ತಿದೆ. ಈಗಾಗಲೇ ನಾನು 40 ಕೋಟಿ ಅನುದಾನ ಕೊಟ್ಟಿದ್ದೇನೆ. ಆ ಕ್ಷೇತ್ರದ ಶಾಸಕರು ಭಾನುವಾರ ನನ್ನನ್ನು ಭೇಟಿ ಮಾಡಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ಹೇಳಿದ್ದೇನೆ. ಆ ಕ್ಷೇತ್ರಕ್ಕೆ ಭೇಟಿ ಕೊಟ್ಟ ನಂತರ ಮುಂದಿನ ವಿಚಾರ ಹೇಳುತ್ತೇನೆ’ ಎಂದರು.

ನಿಖಿಲ್‌ ಅಳು ಅಂದ್ರೆ ಅಳ್ತಾನೆ, ನಗು ಎಂದ್ರೆ ನಗ್ತಾನೆ:

ರಾಮನಗರ: “ನಿಖಿಲ್‌ ಕುಮಾರಸ್ವಾಮಿ ಎಳೆಯ ಕಂದ, ಇಲ್ಲಿ ನಿಲ್ಲು ಎಂದರೂ ನಿಲ್ಲುತ್ತಾನೆ, ಅಲ್ಲಿ ನಿಲ್ಲು ಎಂದರೂ ನಿಲ್ಲುತ್ತಾನೆ, ನಗು ಎಂದರೆ ನಗುತ್ತಾನೆ, ಅಳು ಎಂದರೆ ಅಳುತ್ತಾನೆ. ಪಾಪ ಅವನ ಬಗ್ಗೆ ನಾನು ಮಾತನಾಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಚನ್ನಪಟ್ಟಣ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿರುವುದಾಗಿ ಹೇಳಿದ್ದಾರೆ. ಅವರು ಒತ್ತಡಕ್ಕೆ ಸ್ಪರ್ಧಿಸಿದ್ದಾರೆಯೇ ಹೊರತು ಜನರ ಸೇವೆಗಾಗಿ ಅಲ್ಲ. ಜನ ಉಪಕಾರ ಸ್ಮರಣೆಯನ್ನು ಸ್ಮರಿಸುತ್ತಾರೆ ಎಂಬುದಕ್ಕೆ ಕಳೆದ ವರ್ಷ ಅವರ ಪುತ್ರನನ್ನು ಇಕ್ಬಾಲ್‌ ವಿರುದ್ಧ ಸೋಲಿಸಿದ್ದೇ ಸಾಕ್ಷಿ. ಕುಮಾರಣ್ಣ ಮತ್ತು ಅನಿತಕ್ಕ ರಾಮನಗರದಲ್ಲಿ ಕೆಲಸ ಮಾಡಿದ್ದರೆ ಜನತೆ ಯಾಕೆ ಸೋಲಿಸುತ್ತಿದ್ದರು ಎಂದು ಪ್ರಶ್ನಿಸಿದರು.

ಯೋಗೇಶ್ವರ್‌ ರೆಡಿಮೇಡ್‌ ಗಂಡು. ಅವರಿಗೆ ನಿಮ್ಮ ಕಷ್ಟ, ಸುಖ, ನೋವು ಗೊತ್ತಿದೆ. ನಿಮ್ಮ ಹಳ್ಳಿಗಳು ಗೊತ್ತಿದೆ. ಅವರಿಗೆ ಬೆಂಬಲವಾಗಿ ಸರಕಾರವಿದೆ. ಅವರ ಬೆನ್ನಿಗೆ ಈ ಡಿ.ಕೆ. ಶಿವಕುಮಾರ್‌ ಇದ್ದಾನೆ ಎಂದರು.

ಟಾಪ್ ನ್ಯೂಸ್

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.