ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಸರಕಾರಕ್ಕೆ ಹಸ್ತಾಂತರಿಸಿದರೂ ಕೂಡ ಉದ್ಘಾಟನೆ ಭಾಗ್ಯ ಕಂಡಿಲ್ಲ

Team Udayavani, Jun 25, 2024, 3:08 PM IST

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಅಧಿಕಾರಿಗಳ ನಿರ್ಲಕ್ಷತೆ, ಸರಕಾರದ ಸ್ಪಂದನೆಯ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ ಬೈಂದೂರಿನ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣ ಇನ್ನೂ ಉದ್ಘಾಟನೆ ಆಗಿಲ್ಲ. ಬಹು ಕೋಟಿ ಕಟ್ಟಡ ಬಸ್‌ಗಳ ನಿಲ್ದಾಣವಾಗುವ ಬದಲು ಜಾನುವಾರುಗಳ ವಿಶ್ರಾಂತಿ ಕೇಂದ್ರವಾಗಿದೆ. ಮಾತ್ರವಲ್ಲದೆ ಅಕ್ರಮ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಯಡ್ತರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಸ್‌ ನಿಲ್ದಾಣ ಕಾಮಗಾರಿ ಮುಗಿದು ಗುತ್ತಿಗೆದಾರರು ಸರಕಾರಕ್ಕೆ ಹಸ್ತಾಂತರಿಸಿದರೂ ಕೂಡ ಉದ್ಘಾಟನೆ ಭಾಗ್ಯ ಕಂಡಿಲ್ಲ. 2018ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್‌. ಆರ್‌. ಉಮಾಶಂಕರ್‌ ಈ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಗ್ರಾಮೀಣ ಮತ್ತು ನಗರ ಭಾಗಗಳಿಗೆ ಹೆಚ್ಚು ಬಸ್‌ಗಳನ್ನು ಒದಗಿಸಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಡುಪಿಯಲ್ಲಿ 34 ಕೋಟಿ ಬಸ್‌ ನಿಲ್ದಾಣ ಹಾಗೂ 6 ಕೋ.ರೂ. ವೆಚ್ಚದಲ್ಲಿ ಡಿಪೋ, ಬೈಂದೂರಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಬಸ್‌ ನಿಲ್ದಾಣ ಹಾಗೂ 6 ಕೋಟಿ ರೂ. ವೆಚ್ಚದಲ್ಲಿ ಡಿಪೋ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು

ಎರಡೆರಡು ಬಾರಿ ಗುದ್ದಲಿ ಪೂಜೆ
ಶಂಕುಸ್ಥಾಪನೆ ಬಳಿಕ ಸರಕಾರ ಬದಲಾವಣೆಯಾಗಿ ಶಾಸಕರು ಕೂಡ ಬದಲಾಗಿದ್ದರು. ನೂತನ ಶಾಸಕರು ಮತ್ತೊಮ್ಮೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಕೊಲ್ಲೂರು ದೇವಸ್ಥಾನದ ಯಾತ್ರಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಯಡ್ತರೆ ಬಳಿಯಲ್ಲಿ ಇದನ್ನು ನಿರ್ಮಿಸಲಾಗಿದೆ. ಎರಡು ಬಾರಿ ಶಂಕುಸ್ಥಾಪನೆ ಮಾಡುವ  ಉತ್ಸಾಹ ಉದ್ಘಾಟನೆ ಮಾಡುವ ವಿಚಾರದಲ್ಲಿ ಕಂಡುಬಂದಿಲ್ಲ.

ಅತೀ ಅಗತ್ಯದ ನಿಲ್ದಾಣವಿದು
ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೈಂದೂರು ಯಡ್ತರೆ ಬೈಪಾಸ್‌ ಬಳಿಯ ಈ ನಿಲ್ದಾಣ ಪ್ರಯಾಣಿಕರಿಗೆ ಅತಿ ಅಗತ್ಯವಾದ ನಿಲ್ದಾಣವಾಗಿದೆ. ದೂರದ ಊರುಗಳಿಂದ ಬರು ವವರಿಗೆ ಶೌಚ ಮತ್ತಿತರ ಅಗತ್ಯಗಳಿಗೆ ಇದು
ಅನುಕೂಲವಾಗಿದೆ. ಜತೆಗೆ ಅದೆಷ್ಟೋ ಬಸ್‌ ಗ ಳಿಗೆ, ಪ್ರಯಾಣಿಕರಿಗೆ ಬಸ್‌ ಕಾಯಲುಬೇಕಾಗಿದೆ.

ಬೇಸರದಾಯಕ
ಬಸ್‌ ನಿಲ್ದಾಣ ಉಳಿದ ಕಾಮಗಾರಿಗೆ ಈಗಾಗಲೇ ಅನುದಾನ ಮಂಜೂರಾಗಿದೆ. ಟೆಂಡರ್‌ ಕೂಡ ಆಗಿದೆ. ಗುತ್ತಿಗೆದಾರರು ಕಾಮಗಾರಿ ಮುಗಿಸಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.ಆದರೆ ಆಧಿಕಾರಿಗಳು ಇದರ ಪೂರ್ಣತೆಗೆ ಗಮನಹರಿಸದಿರುವುದು ಬೇಸರದಾಯಕವಾಗಿದೆ.
*ಭೋಜರಾಜ ಶೆಟ್ಟಿ, ಬೈಂದೂರು ನಿವಾಸಿ

* ಅರುಣಕುಮಾರ ಶಿರೂರು

ಟಾಪ್ ನ್ಯೂಸ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್‌ ಲಾರಿ ಢಿಕ್ಕಿ; ನಾಲ್ವರು ಗಂಭೀರ

6

Baindur: ರೈಲ್ವೇ ಗೇಟ್‌ ಬಂದ್‌; ಕೋಟೆಮನೆಗೆ ಸಂಪರ್ಕ ಕಟ್‌

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.