ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೂ ಸಿಡಿದೆದ್ದ ಇಬ್ರಾಹಿಂ
ಸುರ್ಜೇವಾಲಾನ ಅಪ್ಪನ ಜತೆ ಕೆಲಸ ಮಾಡಿದವನು ನಾನು, ಅವನಿಗೆ ರಿಪೋರ್ಟ್ ಮಾಡಬೇಕಾ ?
Team Udayavani, Jan 29, 2022, 7:29 PM IST
ಬೆಂಗಳೂರು : ರಣದೀಪ್ ಸಿಂಗ್ ಸುರ್ಜೇವಾಲಾನ ಅಪ್ಪನ ಜತೆ ನಾನು ಕೆಲಸ ಮಾಡಿದ್ದೇನೆ. ನಾನು ಹಿರಿಯ.ಈಗ ಅವರಿಗೆ ವರದಿ ಒಪ್ಪಿಸಿ ಎಂದರೆ ಹೇಗೆ ? ಎಂದು ಕಾಂಗ್ರೆಸ್ ತೊರೆಯಲು ಸಿದ್ದವಾಗಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಗುಡುಗಿದ್ದಾರೆ.
ರಾಷ್ಟ್ರೀಯ ಸುದ್ದಿ ವಾಹನಿಗಳ ಜತೆ ಮಾತನಾಡಿದ ಅವರು, ” ನಮ್ಮಂತ ಹಿರಿಯರ ಜತೆಗೆ ರಾಹುಲ್ ಗಾಂಧಿ ಮಾತನಾಡುವುದೇ ಇಲ್ಲ. ಸಮಸ್ಯೆ ಹೇಳಿದರೆ ಸುರ್ಜೇವಾಲಾ ಜತೆ ಮಾತನಾಡಿ ಎಂದು ಸಾಗ ಹಾಕಲು ನೋಡುತ್ತಾರೆ. ಯಾರು ಈ ಸುರ್ಜೆವಾಲಾ, ಇವನ ಅಪ್ಪನ ಜತೆಗೆ ನಾನು ಕೆಲಸ ಮಾಡಿದ್ದೇನೆ. ನನಗಿಂತ ಜ್ಯೂನಿಯರ್ ಗೆ ರಿಪೋರ್ಟ್ ಮಾಡಿಕೊಳ್ಳಬೇಕಾ ? ಎಂದು ಪ್ರಶ್ನಿಸಿದ್ದಾರೆ.
ಇಬ್ಬರು ಭ್ರಷ್ಟ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಂದ ರಾಜ್ಯ ಕಾಂಗ್ರೆಸ್ ಹಾಳಾಗುತ್ತಿದೆ. ಕೆ.ಸಿ.ವೇಣುಗೋಪಾಲ ಹಾಗೂ ಸುರ್ಜೇವಾಲಾಗೆ ಚುನಾವಣೆಯಲ್ಲಿ ಗೆದ್ದ ಅನುಭವವೇ ಇಲ್ಲ. ಅಂಥವರನ್ನು ನಂಬಿಕೊಂಡು ಕಾಂಗ್ರೆಸ್ ವರಿಷ್ಠರು ಕುಳಿತಿದ್ದಾರೆ. ಸ್ಥಳೀಯ ನಾಯಕರ ಜತೆ ನೇರವಾಗಿ ಮಾತನಾಡುವುದಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ಏನು ಸಮಸ್ಯೆ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ.ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಆಂತರಿಕ ಮತದಾನ ನಡೆಸಿ ಎಂದರೆ ದಿಲ್ಲಿಯಿಂದ ಆದೇಶ ರವಾನಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.