“ಸಹಕಾರ ವೃದ್ಧಿ’ಗೆ ಕೇಂದ್ರದ ಸಹಕಾರ; ಐದು ವರ್ಷಗಳಲ್ಲಿ 2 ಲಕ್ಷ ಪಿಎಸಿಎಸ್ ಸ್ಥಾಪನೆ
ಸಂಘಗಳು ಇಲ್ಲದ ಗ್ರಾ.ಪಂ.ಗಳಲ್ಲಿ ಸ್ಥಾಪನೆ; ಮೀನುಗಾರಿಕೆ, ಹೈನುಗಾರಿಕೆ ಕ್ಷೇತ್ರಗಳಿಗೆ ವಿಸ್ತರಣೆ
Team Udayavani, Feb 16, 2023, 6:50 AM IST
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷ ಪ್ರಾಥಮಿಕ ಕೃಷಿ ಸಹಕಾರ ಸಂಘ(ಪಿಎಸಿಎಸ್), ಹೈನುಗಾರಿಕೆ, ಮೀನುಗಾರಿಕೆ ಸಹಕಾರ ಸಂಘಗಳನ್ನು ಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸ್ಥಳೀಯ ಸಂಘಗಳು ಸ್ಥಾಪನೆಯಾಗದೇ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈ ಪಿಎಸಿಎಸ್‌ಗಳು ತಲೆ ಎತ್ತಲಿವೆ. ದೇಶದಲ್ಲಿ ಒಟ್ಟು 99,000 ಪಿಎಸಿಎಸ್‌ಗಳಿದ್ದು, ಇವುಗಳಲ್ಲಿ 63 ಸಾವಿರ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಆದರೆ, ದೇಶದಲ್ಲಿ ಇನ್ನೂ ಪಿಎಸಿಎಸ್‌ಗಳಿಲ್ಲದ 1.6 ಲಕ್ಷ ಗ್ರಾಪಂಗಳು ಮತ್ತು ಡೇರಿ ಸಹಕಾರ ಸಂಘಗಳಿಲ್ಲದ ಸುಮಾರು 2 ಲಕ್ಷ ಗ್ರಾಮ ಪಂಚಾಯಿತಿಗಳಿವೆ. ಇಂಥ ಗ್ರಾಪಂಗಳನ್ನು ಗುರುತಿಸಿ, ಅಲ್ಲಿ ಅವುಗಳನ್ನು ಸ್ಥಾಪಿಸಲಾಗುತ್ತದೆ. ಈ ಮೂಲಕ ತೀರಾ ಕೆಳಹಂತದವರೆಗೂ ಪಿಎಸಿಎಸ್‌ಗಳು ಸಿಗುವಂತೆ ಮಾಡಲಾಗುತ್ತಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಜತೆಗೆ ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ ಎಂದಿದ್ದಾರೆ.
ನಬಾರ್ಡ್, ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್‌ಡಿಡಿಬಿ), ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್‌ಎಫ್ಡಿಬಿ)ಗಳು ಸೇರಿ ಕಾರ್ಯಯೋಜನೆ ಮತ್ತು ಜಾರಿ ಮಾಡಲಿವೆ ಎಂದು ಅವರು ಸಂಪುಟ ಸಭೆಯ ನಂತರ ಹೇಳಿದ್ದಾರೆ.
ಕಳೆದ ವರ್ಷವಷ್ಟೇ ಪಿಎಸಿಎಸ್‌ಗಳನ್ನು 2,516 ಕೋಟಿ ರೂ. ವೆಚ್ಚದಲ್ಲಿ ಕಂಪ್ಯೂಟರೀಕರಣ ಮಾಡಲಾಗಿತ್ತು. ಇದರಲ್ಲಿ ಕೇಂದ್ರ ಸರ್ಕಾರ 1,528 ಕೋಟಿ ರೂ. ನೀಡಿತ್ತು. ಉಳಿದ ಮೊತ್ತವನ್ನು ರಾಜ್ಯ ಸರ್ಕಾರಗಳು ಭರಿಸಿದ್ದವು.
ಆಧುನೀಕರಣ:
ಹಾಲಿ ಇರುವ ಪಿಎಸಿಎಸ್‌ಗಳ ಮೂಲ ಸೌಕರ್ಯಗಳನ್ನು ಬಲವರ್ಧಿಸುವುದರ ಜತೆಗೆ, ಅವುಗಳಲ್ಲಿರುವ ಮಾಹಿತಿಗಳನ್ನು ಕಂಪ್ಯೂಟರೀಕರಣಗೊಳಿಸುವುದು, ಆದಾಯ ವೃದ್ಧಿ ಸೇರಿದಂತೆ ಗ್ರಾ.ಪಂ.ಗಳಲ್ಲಿ ಹೊಸ ಸಹಕಾರ ಸಂಘಗಳನ್ನು ಸ್ಥಾಪಿಸವುದು ಕೂಡ ಸೇರಿದೆ. ಈ ಸಂಘಗಳಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಗಳಿಸಲು, ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಕೂಡ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು ಸಚಿವ ಅನುರಾಗ್ ಠಾಕೂರ್. ಇದರ ಜತೆಗೆ ಆಹಾರ ಧಾನ್ಯಗಳನ್ನು ಸಂಗ್ರಹಿಸಲು ಗೋದಾಮು, ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲು ಅನುಕೂಲವಾಗುವಂತೆ ಕೂಡ ನಿಯಮಗಳಲ್ಲಿ ಬದಲು ಮಾಡಲಾಗುತ್ತದೆ ಎಂದರು.
63 ಸಾವಿರ- ಸದ್ಯ ದೇಶದಲ್ಲಿ ಇರುವ ಕೃಷಿ ಸಹಕಾರ ಸಂಘಗಳು
1.6 ಲಕ್ಷ – ಸಹಕಾರ ಸಂಘಗಳಿಲ್ಲದ ಗ್ರಾಪಂಗಳು
2 ಲಕ್ಷ – ಮೀನುಗಾರಿಕೆ/ಡೇರಿಗಳಿಲ್ಲದ ಗ್ರಾಪಂಗಳು
2 ಲಕ್ಷ – ಐದು ವರ್ಷಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಹಕಾರ ಸಂಘಗಳು/ಡೇರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.